ಕೇರಳಿಗರ ಪರ ಬ್ಯಾಟ್ ಬೀಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಕನ್ನಡಿಗರು ಗರಂ!
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಅನ್ಯ ರಾಜ್ಯದ ಚುನಾವಣೆಗೆ ಸಹಕರಿಸುತ್ತಿರುವುದು ಹಾಗೂ ಮತದಾರರ ಓಲೈಕೆಗೆ ಮಾಡುತ್ತಿರುವ ಸರ್ಕಸ್ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಹಾರದ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಅವರು ಮಾಡಿದ್ದ ಆದೇಶವು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಅವರು ಕೇರಳದ ಸ್ಥಳೀಯ ಚುನಾವಣೆಗೂ ಇದೇ ಮಾದರಿಯನ್ನು ಅನುಸರಿಸಿದ್ದಾರೆ. ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ಜನ ಡಿ.ಕೆ ಶಿವಕುಮಾರ್ ಅವರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ವಿವಿಧ ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯ ಹಾಗೂ ಉಸ್ತುವಾರಿಯಾಗಿ ನೇಮಕವಾಗುತ್ತಿರುತ್ತಾರೆ. ಕಾಂಗ್ರೆಸ್ ಹೈಕಮಾಂಡ್‌ನ ನಿರ್ಧಾರದ ಮೇರೆಗೆ ಅವರು ಕೆಲವೊಂದು ಪ್ರಮುಖ ಜವಾಬ್ದಾರಿಗಳನ್ನು ತೆಗೆದುಕೊಳ್ಳುವುದು ಇದೆ. ದೆಹಲಿ ವಿಧಾನಸಭೆ ಚುನಾವಣೆ ಹಾಗೂ ತೆಲಂಗಾಣದ ವಿಧಾನಸಭೆ ಚುನಾವಣೆಗಳಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸಿರುವುದು ಇದೆ. ಆದರೆ ಬಿಹಾರದ ವಿಧಾನಸಭೆ ಚುನಾವಣೆಯಿಂದ ಅವರು ಮಾಡುತ್ತಿರುವ ಮನವಿಯು ಹೊಸ ಚರ್ಚೆಗೆ ಕಾರಣವಾಗಿದೆ.

ಈಚೆಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಹಾಗೂ ಕರ್ನಾಟಕದಲ್ಲಿರುವ ಬಿಹಾರಿಗಳು, ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸುವುದಕ್ಕೆ ಅನುಕೂಲವಾಗುವಂತೆ ಮೂರು ದಿನಗಳ ರಜೆ ಘೋಷಿಸಬೇಕು. ವೇತನ ಸಹಿತ ರಜೆ ನೀಡಬೇಕು ಎಂದು ಅವರು ಮನವಿ ಮಾಡಿದ್ದರು. ಆದರೆ, ಇದೀಗ ಅವರು ಕೇರಳದ ಸ್ಥಳೀಯ ಚುನಾವಣೆಗೆ ಸಂಬಂಧಿಸಿದಂತೆಯೂ ಪತ್ರ ಬರೆದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪತ್ರದಲ್ಲಿ ಏನಿದೆ ?
ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ-2025 ಡಿಸೆಂಬರ್ ರಂದು ನಡೆಯಲಿದೆ. ಕೇರಳ ರಾಜ್ಯದ ನಿವಾಸಿಗಳು ಸಾಕಷ್ಟು ಸಂಖ್ಯೆಯಲ್ಲಿ ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಕಂಪನಿಗಳು, ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್‌ಗಳು, ಗುತ್ತಿಗೆದಾರರು, ಬಿಲ್ಡರ್‌ಗಳು ಅಂಗಡಿ ಮುಂಗಟ್ಟುಗಳು ಹಾಗೂ ಇತರೆ ಉದ್ಯಮದಾರರು ಕೇರಳ ರಾಜ್ಯದ ಚುನಾವಣೆಯಲ್ಲಿ ಮತವನ್ನು ಚಲಾಯಿಸಲು ಅನುವಾಗುವಂತೆ ಕೇರಳ ರಾಜ್ಯದ ಮತದಾರರಾದವರಿಗೆ ಕನಿಷ್ಟ ಮೂರು ದಿನಗಳ "ವೇತನ ಸಹಿತ ರಜೆ" ಯನ್ನು ನೀಡಲು ಮತ್ತು ಚುನಾವಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಹಕರಿಸಲು ಕೋರುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿದ್ದಾರೆ ಎನ್ನಲಾದ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈಚೆಗೆ ನಡೆದ ಬಿಹಾರದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲೂ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಇದೇ ಮಾದರಿಯ ಪತ್ರವನ್ನು ಬರೆದಿದ್ದರು. ಇದೀಗ ಕೇರಳ ಚುನಾವಣೆಯನ್ನು ಗುರಿಯಾಗಿಸಿಕೊಂಡು ಪತ್ರ ಬರೆದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ ಅಲ್ಲದೇ ಕನ್ನಡಿಗರು ಈ ಮಾದರಿಯ ಪ್ರಯೋಗಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications