DK Shivakumar: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಕೊಟ್ಟ ಡಿಸಿಎಂ ಡಿ ಕೆ ಶಿವಕುಮಾರ್‌

ಬೆಂಗಳೂರು, ನವೆಂಬರ್‌ 22: ರಾಜ್ಯದ ಗ್ರಾಮೀಣ ಜನತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳದಲ್ಲಿ ಶಿವಕುಮಾರ್ ಅವರು ಮಾತನಾಡಿ, ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು ಎಂದು ತಿಳಿಸಿದರು.

DCM DK Shivakumar Gave Good News To The Rural People Of The State

ಮೀನು ಎಂದರೆ ಲಕ್ಷ್ಮಿ. ರೈತರು ಭೂಮಿಯಲ್ಲಿ ಕೃಷಿ ಮಾಡಿದರೆ, ಮೀನುಗಾರರು ನೀರಿನಲ್ಲಿ ಕೃಷಿ ಮಾಡುತ್ತೀರಿ. ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತೀರಿ. ನಿಮಗೆ ಸೂರ್ಯ, ಚಂದ್ರ ಎರಡೇ ಕಾಣುವುದು. ಉಳಿದಂತೆ ನಿಮ್ಮ ಆತ್ಮಬಲದಿಂದ ಇದನ್ನು ಮಾಡಿಕೊಂಡು ಬರುತ್ತಿದ್ದೀರಿ. ಮೀನು ಹಿಡಿಯುವುದು ಬೇರೆ, ಮಾರಾಟ ಮಾಡುವುದು ಬೇರೆ. ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಫಿಶ್ ತೋರಿಸಿದೆ. ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನುಗಾರನಿಗೆ ನಿತ್ಯ ಮೀನು ಸಿಗುವುದಿಲ್ಲ. ಕೆಲವೊಮ್ಮೆ ವಾರವಾದರೂ ಒಂದು ಮೀನು ಸಿಗುವುದಿಲ್ಲ. ಅಂತಹ ತಾಳ್ಮೆ ವೃತ್ತಿ ನಡೆಸುತ್ತಿರುವ ನೀವು ಶ್ರಮಜೀವಿಗಳು" ಎಂದು ಬಣ್ಣಿಸಿದರು.

ನಿಮಗೆ ವಿಶ್ವ ಮೀನುಗಾರಿಕೆ ದಿನದ ಶುಭಾಶಯಗಳು. ನಿಮಗೆ ಒಳ್ಳೆಯದಾಗಲಿ. ಮುಂದಿನ ದಿನಗಳಲ್ಲಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು. ಮೀನುಗಾರಿಕೆಗೆ ಉತ್ತೇಜ ನೀಡಲು ಕಾರ್ಯಕ್ರಮ ರೂಪಿಸಲಾಗುವುದು. ನಾವು ನಿಮ್ಮ ಜೊತೆಗೆ ಇದ್ದೇವೆ" ಎಂದು ತಿಳಿಸಿದರು. ನೀವು ಗಂಗಾ ಪುತ್ರರು. ಇಂತಹ ಯೋಗ ಎಲ್ಲರಿಗೂ ಬರುವುದಿಲ್ಲ. ಗಂಗಾ ಪುತ್ರ ಭೀಷ್ಮನ ಪ್ರತಿಜ್ಞೆ ಎಂದರೆ ಅದಕ್ಕೆ ಆದ ಘನತೆ ಇದೆ. ನೀವು ನೀರಿನಲ್ಲಿ ಕೆಲಸ ಮಾಡಿ ಸಮಾಜಕ್ಕೆ ಸೇವೆ ಮಾಡುತ್ತಿದ್ದೀರಿ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ ಎಂದು ತಿಳಿಸಿದರು.

ಇನ್ನೂ ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆ 10 ಲಕ್ಷ ಜನರ ಜೀವನ ಆಸರೆಯಾಗಿದೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆ ಎಣ್ಣೆಯನ್ನು ಪ್ರತೀ ಲೀಟರ್ ಗೆ 35 ರೂ ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ. ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+