ನಾಳಿನ ಬೈಎಲೆಕ್ಷನ್‌ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ಡಿ.ಕೆ.ಶಿವಕುಮಾರ್‌

ರಾಜ್ಯದಲ್ಲಿ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆದು, ನಾಳೆ ಮತ ಎಣಿಕೆ ನಡೆಯಲಿದೆ. ಈಗಾಗಲೇ ಕೆಲವು ಚುನಾವಣೋತ್ತರ ಸಮೀಕ್ಷೆಗಳು (ಎಕ್ಸಿಟ್‌ ಪೋಲ್) ಕಾಂಗ್ರೆಸ್‌ಗೆ ಸೋಲಿನ ಸುಳಿವು ನೀಡಿವೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಚುನಾವಣೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾಗಲಿದೆ, ಚನ್ನಪಟ್ಟಣ ಸೇರಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಹೇಳಿದ್ದಾರೆ.

ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲವೂ ತಲೆಕೆಳಗಾಗುತ್ತೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲ್ಲುತ್ತಾರೆ ಎಂದಿದ್ದಾರೆ. ನಾಳೆ ಬೈಎಲೆಕ್ಷನ್‌ ಫಲಿತಾಂಶ ಪ್ರಕಟವಾಗಲಿದೆ. ಮಹಾರಾಷ್ಟ್ರದಲ್ಲೂ ಕಾಂಗ್ರೆಸ್‌ ಗೆದ್ದೇ ಗೆಲ್ಲುತ್ತೆ. ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಬಹುಮತ ಪಡೆದು ಸರ್ಕಾರ ರಚನೆ ಮಾಡುವುದಾಗಿ ಹೇಳಿದ್ದಾರೆ. ಅಲ್ಲಿ ನಾನು ಪ್ರಚಾರಕ್ಕೆ ಹೋಗಿದ್ದಾಗ ಕಾಂಗ್ರೆಸ್ ಅಲೆ ಕಾಣಿಸಿತು. ಇನ್ನು ಜಾರ್ಖಂಡ್ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ಇದಕ್ಕೂ ಮುನ್ನವೇ ಮಹಾರಾಷ್ಟ್ರದ ಮುಂದಿನ ಸಿಎಂ ಬಗ್ಗೆ ಚರ್ಚೆಗಳು ಜೋರಾಗಿವೆ. ಮತಗಳ ಎಣಿಕೆಗೆ ಮುಂಚೆಯೇ ಆಡಳಿತಾರೂಢ ಮಹಾಯುತಿ ಮತ್ತು ವಿರೋಧ ಪಕ್ಷ ಎಂವಿಎ ನಡುವೆ ಸಿಎಂ ಸ್ಥಾನದ ಬಗ್ಗೆ ಚರ್ಚೆ ಜೋರಾಗಿದೆ. ಜಾರ್ಖಂಡ್‌ನಲ್ಲೂ ಬಿಜೆಪಿ ಬಹುಮತ ಸಾಧಿಸಲಿದೆ ಎಂದು ಎಕ್ಸಿಟ್‌ ಪೋಲ್‌ ಭವಿಷ್ಯ ನುಡಿದಿದ್ದು, ನಾಳೆ ಫಲಿತಾಂಶ ಹೊರಬೀಳಲಿದೆ.

DCM DK Shivakumar Is Confident That The Congress Will Win In Tomorrow s By-Election Results

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಜಯ ಸಾಧಿಸಿದ್ದೆವು. ಆಗ ಚನ್ನಪಟ್ಟಣದಲ್ಲಿ ಗೆದ್ದಿರಲಿಲ್ಲ. ಈ ಬಾರಿ ಗೆಲುವು ಖಚಿತ ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಮೀರ್‌ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಕುಮಾರಸ್ವಾಮಿ ಮತ್ತು ದೇವೇಗೌಡರ ಕುಟುಂಬದ ವಿರುದ್ಧ ಹೇಳಿಕೆ ನೀಡಿರುವ ಸಂಬಂಧ ಸಚಿವ ಜಮೀರ್ ಅಹ್ಮದ್ ಅವರಿಗೆ ಬುದ್ಧಿ ಹೇಳಿದ್ದೇನೆ. ಜಮೀರ್ ಉತ್ತಮ ಕೆಲಸಗಾರ. ಜಮೀರ್ ಈಗಾಗಲೇ ಕ್ಷಮೆ ಕೇಳಿದ್ದು, ಅವರಿಗೆ ತಮ್ಮ ತಪ್ಪಿನ ಅರಿವಾಗಿದೆ ಎಂದು ಹೇಳಿದ್ದಾರೆ.

DCM DK Shivakumar Is Confident That The Congress Will Win In Tomorrow s By-Election Results

ಸದ್ಯ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಇಂದು ತಮ್ಮ ಪತ್ನಿ ಜೊತೆ ಮುರುಡೇಶ್ವರದ ಸಮೀಪ ಇರುವ ನೇತ್ರಾಣಿ ದ್ವೀಪಕ್ಕೆ ಮೀನುಗಾರಿಕಾ ಸಚಿವರಾದ ಮಂಕಾಳ ಎಸ್‌.ವೈದ್ಯ ಅವರೊಂದಿಗೆ ಭೇಟಿ ನೀಡಿದರು. ನಿಸರ್ಗಕ್ಕೆ ಹತ್ತಿರವಾಗಿರುವ ಈ ಐಲ್ಯಾಂಡ್‌ಗೆ ಪಾರಿವಾಳ ದ್ವೀಪ ಎನ್ನುವ ಹೆಸರೂ ಕೂಡ ಇದೆ. ಕರ್ನಾಟಕದಲ್ಲಿ ಸ್ಕೂಬಾ ಡೈವಿಂಗ್‌ಗೆ ಅತ್ಯುತ್ತಮ ಸ್ಥಳವಾದ ನೇತ್ರಾಣಿ ದ್ವೀಪವು ಪಾರಿವಾಳಗಳಿಗೆ ಆಶ್ರಯ ತಾಣವೂ ಹೌದು. ಪ್ರಶಾಂತವಾದ ಈ ದ್ವೀಪ ಮನಸ್ಸಿಗೆ ಆಹ್ಲಾದಕರ ಅನುಭವ ನೀಡಿತು ಎಂದಿದ್ದಾರೆ.

ಸಮುದ್ರಕ್ಕೆ ಎಂತಹ ಆಯಾಸ, ಬೇಸರವನ್ನೂ‌ ದೂರ ಮಾಡುವ ಶಕ್ತಿ ಇದೆಯಂತೆ.‌‌ ಇದು ನಿಜ ಕೂಡ ಹೌದು. ನಿರಂತರ ಕಾರ್ಯಕ್ರಮಗಳ ಮಧ್ಯೆ ಇಂದು ಮುರುಡೇಶ್ವರ ಬೀಚ್‌ಗೆ ಪತ್ನಿ ಉಷಾ ಅವರೊಂದಿಗೆ ಭೇಟಿ ನೀಡಿ, ಸಮಯ ಕಳೆದೆ. ಸಮುದ್ರ ದಂಡೆಯಲ್ಲಿ ಕಾಲ‌ ಕಳೆದ‌ ನಂತರ ಸ್ವಲ್ಪ ಮನಶಾಂತಿ ಸಿಕ್ಕಿದೆ ಎಂದು ಡಿಕೆಶಿ ಹೇಳಿದ್ದಾರೆ.

ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪುರಾಣ ಪ್ರಸಿದ್ಧ ಮುರುಡೇಶ್ವರ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಶಿವನ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ಅರಬ್ಬಿ ಸಮುದ್ರದಿಂದ ಸುತ್ತುವರೆದಿರುವ ಈ ದೇವಾಲಯವು ವಿಶ್ವದಲ್ಲೇ ಎರಡನೇ ಅತಿ ಎತ್ತರದ ಶಿವನ ಪ್ರತಿಮೆಯನ್ನು ಹೊಂದಿದ್ದು, ಇಲ್ಲಿನ ದೈವಿಕ ಅನುಭವವನ್ನು ನೀಡುವ ವಿಶೇಷವಾದ ಗೋಪುರವು ಆಕರ್ಷಣೀಯವಾಗಿದೆ. ಮುರುಡೇಶ್ವರ ದೇವಸ್ಥಾನ ಕೇವಲ ಧಾರ್ಮಿಕ ಕ್ಷೇತ್ರವಾಗಿರದೆ, ಪ್ರವಾಸಿ ತಾಣವಾಗಿ ಹೆಸರುವಾಸಿಯಾಗಿರುವುದು ಕರ್ನಾಟಕದ ಹೆಮ್ಮೆ ಎಂದು ಶ್ಲಾಘಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+