ಯಾವನೇ ಆಗಿರಲಿ, ಸರ್ಕಾರಕ್ಕೆ ಎಚ್ಚರಿಕೆ ನೀಡಲು ಆಗುವುದಿಲ್ಲ: ಡಿ ಕೆ ಶಿವಕುಮಾರ್ ವಾರ್ನಿಂಗ್ ಕೊಟ್ಟಿದ್ದು ಯಾರಿಗೆ?
ಬೆಂಗಳೂರು, ಡಿಸೆಂಬರ್ 13: ರಾಜ್ಯದಲ್ಲಿ ಅಪಾರ್ಟ್ಮೆಂಟ್ಗಳಲ್ಲಿ ವಾಸಿಸುವ ಲಕ್ಷಾಂತರ ನಿವಾಸಿಗಳ ಸಮಸ್ಯೆಗಳು, ಹಕ್ಕುಗಳು ಹಾಗೂ ಆಡಳಿತ ವ್ಯವಸ್ಥೆ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಅಪಾರ್ಟ್ಮೆಂಟ್ ಅಸೋಸಿಯೇಷನ್ಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಕಿರಣ್ ಹೆಬ್ಬಾರ್ ಗೆ ಡಿಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಡಿ ಕೆ ಶಿವಕುಮಾರ್, ಕಿರಣ್ ಹೆಬ್ಬಾರ್ ಎಂಬಾತ ತಾನು ಅಂಪಾರ್ಟ್ಮೆಂಟ್ ಮಾಲೀಕ ಎಂದು ಪತ್ರ ಬರೆದಿದ್ದು, ನಮಗೆ ಬೆದರಿಕೆ ಹಾಕಲು ಮುಂದಾಗಿದ್ದಾನೆ. ನಮ್ಮಲ್ಲಿ ಬಹುದೊಡ್ಡ ಮತದಾರರ ಸಮೂಹವಿದ್ದು, ಬೆಂಗಳೂರಿನ 1.30 ಕೋಟಿ ಮತದಾರರ ಮೇಲೆ ಪರಿಣಾಮ ಬೀರಬಲ್ಲೆವು. ಸರ್ಕಾರಗಳು ನಮ್ಮನ್ನು ನಿರ್ಲಕ್ಷಿಸಿದ್ದು, ಆಡಳಿತ ಪಕ್ಷ ನಮ್ಮ ಮನವಿ ನಿರ್ಲಕ್ಷಿಸಿದರೆ ಸದ್ಯದಲ್ಲೇ ಜಿಬಿಎ ಚುನಾವಣೆ ಬರುತ್ತಿದೆ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾನೆ.

ಈ ದೇಶದ ಪ್ರಧಾನಮಂತ್ರಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದಿರುವವನು ನಾನು. ಅವನ್ಯಾರೋ ಹೆಬ್ಬಾರ್ ಎಂಬುವವನಿಗೆ ಹೆದರುತ್ತೇನೆಯೇ? ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ. ಯಾರೇ ಆಗಲಿ ಯಾರ ಜೊತೆ ಮಾತನಾಡುತ್ತಿದ್ದೇವೆ ಎಂಬುದರ ಬಗ್ಗೆ ಕನಿಷ್ಠ ಪರಿಜ್ಞಾನ ಇಟ್ಟುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಿಡಿಕಾರಿದರು.
ನಾನು ಇರುವುದು ನಿಮಗಾಗಿ. ನಾನು ನಿಮ್ಮನ್ನು ಕರೆದು ಅಭಿಪ್ರಾಯ ಪಡೆಯುವ ಅಗತ್ಯವಿರಲಿಲ್ಲ. ನಾವು ನಿಮ್ಮ ಮೇಲೆ ಪ್ರೀತಿ ವಿಶ್ವಾಸವಿಟ್ಟು ಕರೆದಿದ್ದೇವೆ. ಗಾಂಧೀಜಿ ಒಂದು ಮಾತು ಹೇಳಿದ್ದಾರೆ. ನಿಮ್ಮನ್ನು ನೀವು ನಿಯಂತ್ರಿಸಬೇಕಾದರೆ ನಿಮ್ಮ ಮೆದುಳನ್ನು ಪ್ರಯೋಗಿಸಿ, ಬೇರೆಯವರನ್ನು ನಿಯಂತ್ರಿಸಬೇಕಾದರೆ ನಿಮ್ಮ ಹೃದಯವನ್ನು ಪ್ರಯೋಗಿಸಿ ಎಂದು. ನಾನು ನನ್ನ ಹೃದಯದಿಂದ ಜನರ ಮನಸ್ಸು ಗೆದ್ದಿದ್ದೇನೆ. ನಾನು ಸತತವಾಗಿ 8 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದೇನೆ. ಕಳೆದ ಚುನಾವಣೆಯಲ್ಲಿ ನಾನು ಪ್ರಚಾರಕ್ಕೆ ಹೋಗಲಿಲ್ಲ. ವಿರೋಧ ಪಕ್ಷದ ನಾಯಕ ಅಶೋಕ್ ನನ್ನ ವಿರುದ್ಧ ಸ್ಪರ್ಧಿಸಿದ್ದರೂ ಜನ ನನಗೆ 1.23 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಅಂತರದ ಗೆಲುವು ಎಂದು ತಿಳಿಸಿದರು.
ನಿಮ್ಮ ಸೇವೆ ಮಾಡಿದರೆ ನಮಗೆ ಮತ ಹಾಕುತ್ತೀರಿ ಎಂಬುದಷ್ಟೇ ನಮ್ಮ ಆಸೆ. ಅದನ್ನು ಬಿಟ್ಟು ನಿಮ್ಮನ್ನು ಬೇರೆ ಏನು ಕೇಳುತ್ತೇವೆ? ನಾವು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಅಪಾರ್ಟ್ ಮೆಂಟ್ ನಿವಾಸಿಗಳಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡಿದ್ದೇವೆ. ಈ ಯೋಜನೆ ಜಾರಿ ಅಸಾಧ್ಯ ಎಂದು ಪ್ರಧಾನಮಂತ್ರಿಗಳು ಹೇಳಿದರು. ಆದರೆ ಇಂದು ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳೇ ಅವರನ್ನು ಕಾಪಾಡುತ್ತಿದೆ. ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿ, ಮೊದಲು ನೀರಿನ ಸಂಪರ್ಕ ಪಡೆಯಿರಿ, ಒಂದು ವರ್ಷ ತಡವಾಗಿ ಬೇಕಾದರೆ ಹಣ ಪಾವತಿಸಿ ಎಂದು ಕಾಲಾವಕಾಶವನ್ನು ನೀಡಿದ್ದೇವೆ. ಆರನೇ ಹಂತದ ಯೋಜನೆಗೆ ಯೋಜನೆ ರೂಪಿಸಿದ್ದೇವೆ. ಇದನ್ನು ನೀವುಗಳು ಅರಿಯಬೇಕು. ಎಲ್ಲರನ್ನು ಆಟವಾಡಿಸಿದಂತೆ ನಮ್ಮನ್ನು ಆಟವಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ನಾನು ಸಾವಿರಾರು ಅಪಾರ್ಟ್ ಮೆಂಟ್ ಕಟ್ಟಿದ್ದೇನೆ. ಅಪಾರ್ಟ್ ಮೆಂಟ್ ಗಳಿಗೆ ಜಾಗ ಕೊಟ್ಟಿದ್ದೇನೆ. ನಾವು ಇರುವುದೇ ನಿಮ್ಮ ಸೇವೆ ಮಾಡಲು. ಚುನಾವಣೆಗಳನ್ನು ಹೇಗೆ ನಡೆಸಬೇಕು ಎಂದು ನನಗೆ ಗೊತ್ತಿದೆ. ಪ್ರತಿ ಅಪಾರ್ಟ್ ಮೆಂಟ್ ನಲ್ಲಿ ಯಾರಿಗೆ ಎಷ್ಟು ಮತ ಬೀಳುತ್ತದೆ ಎಂದೂ ನನಗೆ ಗೊತ್ತಿದೆ. ಆದರೂ ನಾವು ನಿಮ್ಮ ಸೇವೆ ಮಾಡಿ ನಿಮ್ಮ ವಿಶ್ವಾಸ ಗೆಲ್ಲಲು ಬಯಸುತ್ತೇನೆ. ನೀವು ಬಲಿಷ್ಠವಾಗಿದ್ದರೆ, ನಾವು ಬಲಿಷ್ಠ, ನೀವು ದುರ್ಬಲರಾದರೆ, ನಾವು ದುರ್ಬಲ ಎಂದು ಭಾವಿಸಿದ್ದೇನೆ. ನಾನು ನೇರವಾಗಿ, ಕಟುವಾಗಿ ಹಾಗೂ ದಿಟ್ಟವಾಗಿ ಮಾತನಾಡಿದ್ದೇನೆ. ಇದಕ್ಕೆ ಯಾರೂ ಬೇಸರ ಮಾಡಿಕೊಳ್ಳಬೇಡಿ. ಬೆದರಿಸಿದರೆ ನಡೆಯುತ್ತದೆ ಎಂಬ ಭ್ರಮೆ ಬೇಡ ಎಂದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications