ಏಕಾಏಕಿ ಪರಪ್ಪನ ಅಗ್ರಹಾರ ಜೈಲಿಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದೆಕೆ? : ಕುತೂಹಲಕಾರಿ ಮಾಹಿತಿ ಇಲ್ಲಿದೆ
ಬೆಂಗಳೂರು, ನವೆಂಬರ್ 22: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ದಿಢೀರ್ ಪರಪ್ಪನ ಅಗ್ರಹಾರ ಜೈಲಿಗೆ ಶುಕ್ರವಾರ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಶುಕ್ರವಾರ ಭೇಟಿ ನೀಡಿ, ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿದರು.
ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ. ಜೈಲಿಗೆ ಭೇಟಿ ನೀಡಿದ ಶಿವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.

ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಇನ್ನೂ ಉಪಮುಖ್ಯಮಂತ್ರಿ ಡಿ ಕೆ ಶೀವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.
ಇತ್ತ ಮುಖ್ಯಮಂತ್ರಿ ಬದಲಾವಣೆ ಕುರಿತು ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು, ಒಂದು ಕಡೆ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅತ್ತ ಈಗಾಗಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದ ಕೆಲ ಶಾಸಕರು ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಬಣದ ಶಾಸಕರು ಬೆಂಗಳೂರಿನಲ್ಲಿ ಡಿನ್ನರ್ ಸಭೆ ನಡೆಸಿದ್ದಾರೆ. ಸಿಎಂ ಪಟ್ಟಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ತಿಳಿಸಿದ್ದರೂ, ಉಭಯ ಬಣಗಳು ತಮ್ಮದೇ ಆದ ರೀತಿಯಲ್ಲಿ ರಾಜಕೀಯದಲ್ಲಿ ತೊಡಗಿವೆ.
ಇನ್ನೂ ನವೆಂಬರ್ ಕ್ರಾಂತಿ ಎಂಬ ಚರ್ಚೆಯ ನಡುವೆ ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವದ ಬದಲಾವಣೆ ಕುರಿತು ಚರ್ಚೆಯಾಗುತ್ತಿದ್ದು, ಒಂದು ವೇಳೆ ಅಧಿಕಾರ ಹಂಚಿಕೆ ವಿಚಾರ ಬಂದರೆ ಎರಡೂ ಬಣದಲ್ಲಿ ಎಷ್ಟು ಜನ ಶಾಸಕರಿದ್ದಾರೆ ಎಂಬ ವಿಚಾರ ಮುಖ್ಯವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಹೆಚ್ಚು ಶಾಸಕರಿದ್ದು, ಈ ಹಿನ್ನೆಲೆಯಲ್ಲಿ, ಜೈಲಿನಲ್ಲಿ ಇಬ್ಬರು ಶಾಸಕರ ಜೊತೆ ಡಿಸಿಎಂ ಡಿ ಕೆ ಶಿವಕುಮಾರ ಮಾತನಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.












Click it and Unblock the Notifications