ಸಿಎಂ ಪಟ್ಟಕ್ಕಾಗಿ ಪಟ್ಟು; ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿ ಕೆ ಶಿವಕುಮಾರ್: ಚರ್ಚೆಯಾಗಿದ್ದೇನು?
ಬೆಂಗಳೂರು, ನವೆಂಬರ್ 17: ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗಿದೆ. ನಾಯಕತ್ವ ಬದಲಾವಣೆಗಾಗಿ ಡಿ ಕೆ ಶಿವಕುಮಾರ್ ಬಣ ಹೈಕಮಾಂಡ್ ಮುಂದೆ ಒತ್ತಡ ಹಾಕಿದ್ದು, ಇದೀಗ ಬಿಹಾರ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಸ್ಪಷ್ಟ ನಿಲುವು ತಿಳಿಸದ ಹಿನ್ನೆಲೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ದೆಹಲಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಭೇಟಿಯ ಕುರಿತು ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ರಾಜಕೀಯ ಚರ್ಚೆ ಮಾಡಿಲ್ಲ. ಪಕ್ಷದ ನೂತನ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಗೆ ಮನವಿ ಮಾಡಿರುವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ, ಭಾನುವಾರ ನೀವು ಭೇಟಿ ಮಾಡಿದ್ದೀರಿ, ಈ ಬಗ್ಗೆ ಚರ್ಚೆ ಮಾಡಿದ್ದೀರಾ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ನಾನು ದೆಹಲಿಗೆ ಹೋದಾಗೆಲ್ಲಾ ನಮ್ಮ ನಾಯಕರನ್ನು ಭೇಟಿ ಮಾಡುತ್ತೇನೆ. ಆದರೆ ನಾನು ರಾಜಕೀಯ ವಿಚಾರವಾಗಿ ಅವರನ್ನು ಭೇಟಿ ಮಾಡಿಲ್ಲ. ಈ ವಿಚಾರ ಚರ್ಚಿಸಿಲ್ಲ. ನಾನು ಡಿಸಿಎಂ ಮಾತ್ರವಲ್ಲ, ಪಕ್ಷದ ಅಧ್ಯಕ್ಷನೂ ಆಗಿದ್ದೇನೆ. ಇಷ್ಟು ದಿನ ಅವರು ಬಿಹಾರ ಚುನಾವಣೆಯಲ್ಲಿ ನಿರತರಾಗಿದ್ದರು. ಹೀಗಾಗಿ ನಾನು ಅವರಿಗೆ ತೊಂದರೆ ನೀಡಿರಲಿಲ್ಲ. ಡಿ. 1ರಿಂದ ಸಂಸತ್ ಅಧಿವೇಶನ ನಡೆಯಲಿದೆ. ಹೀಗಾಗಿ ಈ ಬಗ್ಗೆ ಚರ್ಚೆ ಮಾಡಿದೆ ಎಂದರು.
ನಿಮ್ಮ ದೆಹಲಿ ಭೇಟಿ ವೇಳೆ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಫಲಪ್ರದವಾಯಿತೇ ಎಂದು ಕೇಳಿದ್ದಕ್ಕೆ, ನಾನು ಯಾವುದೇ ವರಿಷ್ಠ ನಾಯಕರನ್ನು ಭೇಟಿ ಮಾಡಿಲ್ಲ. ಮೇಕೆದಾಟು ಯೋಜನೆ ಪರ ನ್ಯಾಯಾಲಯದಲ್ಲಿ ನಮ್ಮ ಪರವಾಗಿ ವಾದ ಮಂಡಿಸಿದ ವಕೀಲರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ನ್ಯಾಯಾಲಯ ನಮಗೆ ನಮ್ಮ ಯೋಜನೆ ಮುಂದುವರಿಸಲು, ತಮಿಳುನಾಡಿಗೆ ಅದರ ಪಾಲಿನ ನೀರನ್ನು ಪಡೆಯಲು ಹಾಗೂ ಕೇಂದ್ರ ಜಲ ಆಯೋಗಕ್ಕೆ ಯೋಜನೆಗೆ ಅನುಮತಿ ನೀಡುವ ಅಧಿಕಾರವನ್ನು ನೀಡಿ ಆದೇಶ ನೀಡಿದೆ. ಇದಕ್ಕೆ ಕಾಲಮಿತಿ ಇದ್ದು, ಈ ಕಾರಣಕ್ಕೆ ಸೋಮವಾರ ಬೆಳಗ್ಗೆ ವಕೀಲರಾದ ಶ್ಯಾಮ್ ದಿವಾನ್ ಅವರನ್ನು ಭೇಟಿ ಮಾಡಿದೆ. ಅವರ ಜತೆ ಕೃಷ್ಣಾ ಹಾಗೂ ಮಹದಾಯಿ ಯೋಜನೆ ವಿಚಾರವಾಗಿ ಚರ್ಚೆ ಮಾಡಿದೆ. ನಾಳೆ ಕಾವೇರಿ ನೀರವರಿ ನಿಗಮದ (ಸಿಎನ್ಎನ್ಎಲ್) ಸಭೆ ಇದೆ. ಈ ಸಭೆಯಲ್ಲಿ ಯಾವ ರೀತಿ ಈ ಯೋಜನೆ ಪ್ರಸ್ತಾವನೆ ಮಾಡಬೇಕು ಎಂದು ಚರ್ಚೆ ಮಾಡಲಾಗುವುದು. ಈ ವಿಚಾರದಲ್ಲಿ ಇನ್ನು ಸಮಯ ವ್ಯರ್ಥ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಸಿಎಂ ಕೂಡ ಪ್ರಧಾನಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ" ಎಂದು ತಿಳಿಸಿದರು.
ಈ ಯೋಜನೆಗಾಗಿ 'ನಮ್ಮ ನೀರು ನಮ್ಮ ಹಕ್ಕು' ಎಂದು ನೂರಾರು ಕಿ.ಮೀ. ಹೆಜ್ಜೆ ಹಾಕಿದ್ದು, ಅನೇಕ ಪ್ರಕರಣಗಳು ನಮ್ಮ ವಿರುದ್ಧ ದಾಖಲಾಗಿವೆ. ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಬೆಂಗಳೂರಿನ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು. ಕೈಗಾರಿಕೆಗಳಿಗೂ ನೀರು ಒದಗಿಸಲಾಗುವುದು. ಇದಕ್ಕಾಗಿ ಶ್ರಮಿಸುತ್ತಿದ್ದೇನೆ. ನನ್ನ ಶ್ರಮಕ್ಕೆ ಈಗ ಫಲ ಸಿಗುತ್ತಿದೆ. ಈ ಯೋಜನೆ ಜಾರಿಗೆ ಏನೆಲ್ಲಾ ಮಾಡಬೇಕು ಎಂದು ವಕೀಲರು, ಕಾನೂನು ತಜ್ಞರ ಜತೆ ಚರ್ಚೆ ಮಾಡಿರುವೆ. ಕಪಿಲ್ ಸಿಬಲ್ ಅವರ ಕಾರ್ಯಕ್ರಮದ ವೇಳೆ ಅನೇಕ ನಿವೃತ್ತ ನ್ಯಾಯಾಧೀಶರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವೆ ಎಂದು ತಿಳಿಸಿದರು.
ಕೆಲವು ಶಾಸಕರು ಸಚಿವರಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಳಿದಾಗ, ಅದರಲ್ಲಿ ತಪ್ಪೇನಿದೆ? ಶಾಸಕರು, ವಿಧಾನ ಪರಿಷತ್ ಸದಸ್ಯರಾದವರಿಗೆ ಸಚಿವರಾಗುವ ಹಕ್ಕಿದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಅಧಿಕಾರ ಸಿಎಂ ಅವರಿಗೆ ಇದೆ. ಅವರು ತಮ್ಮದೇ ಆದ ರೀತಿ ಪಕ್ಷಕ್ಕೆ ತ್ಯಾಗ ಮಾಡಿ, ದುಡಿದಿರುತ್ತಾರೆ. ಹೀಗಾಗಿ ಅವರು ಅಧಿಕಾರಕ್ಕೆ ಆಸೆ ಪಡುತ್ತಾರೆ. ಅದನ್ನು ನಾವು ತಪ್ಪು ಎಂದು ಹೇಳಲು ಸಾಧ್ಯವೇ? ಸಚಿವ ಸಂಪುಟ ಪುನಾರಚನೆ ಆಗುತ್ತದೆಯೋ ಅಥವಾ ನಾಯಕತ್ವ ಬದಲಾವಣೆ ಆಗುತ್ತದೆಯೋ ಎಂದು ಕೇಳಿದಾಗ, "ಯಾರಾದರೂ ಗಿಣಿ ಶಾಸ್ತ್ರ ಹೇಳುವವರ ಬಳಿ ಕೇಳಿ ಎಂದರು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications