ಸತೀಶ್ ಜಾರಕಿಹೊಳಿ‌ ಜತೆ ಡಿ ಕೆ ಶಿವಕುಮಾರ್‌ ಗುಪ್ತ್ ಗುಪ್ತ್ ಸಭೆಯ ಹಿಂದಿನ ಅಸಲಿ ಕಾರಣವೇನು?

ಬೆಂಗಳೂರು, ನವೆಂಬರ್ 07: ರಾಜ್ಯ ಕಾಂಗ್ರೆಸ್‌ ನಲ್ಲಿ ಅಸಮಾಧಾನಿತರ ಮುನಿಸು ಹೆಚ್ಚಾಗಿದ್ದು, ಸಚಿವ ಸತೀಶ್‌ ಜಾರಕಿಹೊಳಿ ಪಕ್ಷದ ಹಿರಿಯ ನಾಯಕರ ಮೇಲೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದ್ದು, ಈ ಅಸಮಾಧಾನವನ್ನ ಶಮನಗೊಳಿಸಲು ಡಿಸಿಎಂ ಡಿ ಕೆ ಶಿವಕುಮಾರ್‌ ಖುದ್ದು ಸತೀಶ್‌ ಜಾರಕಿಹೊಳಿ ಭೇಟಿ ಮಾಡಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ.

ಹೌದು, ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಇನ್ನೂ ಆರು ತಿಂಗಳು ಪೂರೈಸಿಲ್ಲ. ಈ ಮಧ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸತೀಶ್‌ ಜಾರಕಿಹೊಳಿ ನಡುವೆ ಮುನಿಸು ಏರ್ಪಟ್ಟಿದೆ. ಅಲ್ಲದೇ ಈ ಹಿಂದೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಬೆಳಗಾವಿ ಗೆ ಭೇಟಿ ನೀಡಿದ್ರು, ಆದರೆ, ಈ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸತೀಶ್‌ ಜಾರಕಿಹೊಳಿ ಜೊತೆ ಡಿ ಕೆ ಶಿವಕುಮಾರ್‌ ಮಾತುಕತೆ ನಡೆಸಿರಲಿಲ್ಲ.

DCM DK Shivakumar Meets Minister Satish Jarkiholi

ಇನ್ನೂ ಕೆಲ ಕಾರಣಾಂತರಗಳಿಂದ ಮುನಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಡಿ ಕೆ ಶಿವಕುಮಾರ್‌ ಖುದ್ದಾಗಿ ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿದ್ದಾರೆ. ಬೆಳಗಾವಿ ವಿಚಾರದಲ್ಲಿ ಸತೀಶ್‌ ಜಾರಕಿಹೊಳಿ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಗೂ ಸಹ ಸಚಿವ ಸತೀಶ್‌ ಜಾರಕಿಹೊಳಿ ಗೈರಾಗುವ ಮೂಲಕ ಅಂತರವನ್ನ ಕಾಯ್ದೆಕೊಂಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು.

ಇದೀಗ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಡೆ ಭರ್ಜರಿಯಾಗಿ ತಯಾರಿ ನಡೆಸುತ್ತಿರುವ ಸಂದರ್ಭದಲ್ಲಿ ಬೆಳಗಾವಿ ಭಾಗದ ಪ್ರಭಾವಿ ನಾಯಕರಾದ ಸತೀಶ್‌ ಜಾರಕಿಹೊಳಿಯವರು ಮುನಿಸಿಕೊಂಡು ಅಂತರ ಕಾಯ್ದುಕೊಂಡಿದ್ದು, ಈ ಅಸಮಾಧಾನವನ್ನ ಶಮನಗೊಳಿಸಲು ಡಿ ಕೆ ಶಿವಕುಮಾರ್‌ ಮುಂದಾಗಿದ್ದಾರೆ ಎನ್ನಲಾಗಿದೆ.

DCM DK Shivakumar Meets Minister Satish Jarkiholi

ಕಾಂಗ್ರೆಸ್‌ ಸರ್ಕಾರ ರಚನೆಯಾದ ದಿನದಿಂದಲೂ ದಲಿತ ಮುಖ್ಯಮಂತ್ರಿ ಹಾಗೂ ಸಿಎಂ ಬದಲಾವಣೆ ವಿಚಾರ ಜೋರಾಗಿ ಚರ್ಚೆಯಾಗುತ್ತಿದ್ದು, ಕಳೆದ ವಾರ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್‌ ನಿವಾಸದಲ್ಲಿ ಡಿನ್ನರ್‌ ಮೀಟಿಂಗ್‌ ಆಯೋಜಿಸಲಾಗಿತ್ತು. ಈ ಡಿನ್ನರ್‌ ಮೀಟಿಂಗ್‌ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದು, ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಮಾಡಿದ ಬೆನ್ನಲ್ಲೇ ಅಲರ್ಟ್ ಆಗಿರುವ ಡಿಕೆ ಶಿವಕುಮಾರ್ ಹಲವು ಸಚಿವರನ್ನ ಭೇಟಿ ಮಾಡಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈಗಾಗಲೇ , ಸಚಿವರಾದ ಹೆಚ್​ ಸಿ ಮಹದೇವಪ್ಪ ಹಾಗೂ ಸತೀಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಒಳಗಿಂದೊಳಗೆ ಆಗುತ್ತಿರುವ ಗೊಂದಲಗಳನ್ನು ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಅಲ್ಲದೇ ಈ ಅವದಿಗೆ ನಾನು ಸಿಎಂ ಆಕಾಂಕ್ಷಿ ಅಲ್ಲ, ಆದರೆ, ಮುಂದೆ 2028ರಲ್ಲಿ ನಾನು ಸಿಎಂ ಸ್ಥಾನ ಕೇಳುತ್ತೇನೆ ಎಂದು ಸತೀಶ್ ಜಾರಕಿಹೊಳಿ ಬಾಂಬ್ ಸಿಡಿಸಿದ್ದರು. ಈ ಮೂಲಕ ಜಾರಕಿಹೋಳಿ ಸಹ ಮುಂದೆ ಸಿಎಂ ರೇಸ್​ನಲ್ಲಿದ್ದೇನೆ ಎನ್ನುವ ಸಂದೇಶ ರವಾನಿಸಿದ್ದರು. ಈ ಎಲ್ಲಾ ಬೆಳವಣಿಗೆ ಮಧ್ಯೆ ಸತೀಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ಭೇಟಿ ಮಹತ್ವ ಪಡೆದುಕೊಂಡಿದೆ.

ಇನ್ನೂ ಗೌಪ್ಯವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಸತೀಶ್‌ ಜಾರಕಿಹೊಳಿ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಡಿ ಕೆ ಶಿವಕುಮಾರ್ ನೇರವಾಗಿ ದೆಹಲಿಗೆ ಹೋಗಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು. ಬೆಳಗಾವಿ ರಾಜಕೀಯದಲ್ಲಿ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿರುವ ಮಧ್ಯೆ ಡಿಕೆ ಶಿವಕುಮಾರ್‌ ದೆಹಲಿ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಡಿ ಕೆ ಶಿವಕುಮಾರ್‌ ಭೇಟಿ ಕುರಿತು ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಕುರಿತು ಸಚಿವಸತೀಶ್ ಜಾರಕಿಹೊಳಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜಕೀಯ ವಿಚಾರ ಬಗ್ಗೆ ಚರ್ಚಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರ ಬದಲಾವಣೆ ಬಗ್ಗೆ ಮಾತುಕತೆ ಮಾಡಿದ್ದು, ಬೆಳಗಾವಿ ವಿಚಾರದಲ್ಲಿ ಮಾತಾಡುವಂತಹದ್ದು ಏನಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಕೆಲ ಜಿಲ್ಲಾಧ್ಯಕ್ಷರ ಬದಲಾವಣೆ ಸೇರಿದಂತೆ ಇನ್ನಿತರ ವಿಚಾರದ ಬಗ್ಗೆ ಚರ್ಚಿಸಲು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+