ರಾಮನಗರ ಕರಗ ಉತ್ಸವದಲ್ಲಿ ಡಿ ಬಾಸ್ ಎಂದು ಘೋಷಣೆ : ಅಚ್ಚರಿ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್‌

ರಾಮನಗರ, ಜುಲೈ 24: ಚಿತ್ರದುರ್ಗದ ರೇಣುಕಾಸ್ವಾಮಿ ಕೊನೆ ಕೇಸ್‌ ನಲ್ಲಿ ನಟ ದರ್ಶನ್‌ ಜೈಲು ಸೇರಿದ್ದು, ಈ ಮಧ್ಯೆ ದರ್ಶನ್‌ರನ್ನು ಜೈಲಿನಿಂದ ಹೊರಗೆ ಕರೆದುಕೊಂಡು ಬರುವುದಕ್ಕೆ ಹಲವು ಕಡೆಯಿಂದ ಶತಪ್ರಯತ್ನ ನಡೆಯುತ್ತಿದೆ. ಅದಕ್ಕೆ ಸರಿಯಾಗಿ ರಾಮನಗರದ ಚಾಮುಂಡಿ ಉತ್ಸವದಲ್ಲಿ ಡಿಕೆ ಶಿವಕುಮಾರ್ ಕೊಟ್ಟ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ರಾಮನಗರದಲ್ಲಿ ಮಂಗಳವಾರ ಚಾಮುಂಡೇಶ್ವರಿ ಕರಗ ಮಹೋತ್ಸವ ನಡೆಯಿತು. ಕರಗ ಮಹೋತ್ಸವದ ಕಾರ್ಯಕ್ರಮದಲ್ಲೂ ನಟ ದರ್ಶನ್ ಹೆಸರು ಪ್ರಸ್ತಾಪವಾಗಿದೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಲು ಆಗಮಿಸ್ತಿದ್ದಂತೆ ಜನರು ಡಿ ಬಾಸ್ ಡಿ ಬಾಸ್‌ ಅಂತ ಘೋಷಣೆ ಕೂಗಿದ್ದಾರೆ.

DCM DK Shivakumar Reaction On Actor Darshan

ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಮಾತನಾಡುವ ವೇಳೆ ನಟ ದರ್ಶನ್ ಅಭಿಮಾನಿಗಳು ಡಿಬಾಸ್ ಡಿ ಬಾಸ್ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ನಟ ದರ್ಶನ್ ವಿಚಾರ ಪ್ರಸ್ತಾಪಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ನಟ ದರ್ಶನ್ ಪತ್ನಿ ಭೇಟಿ ಮಾಡಲು ಸಮಯ ಕೇಳಿದ್ದಾರೆ. ಬುಧವಾರ ಬೆಳಿಗ್ಗೆ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನೂ ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುವೆ. ಆದರೆ, ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದು ಕರಗ ಮಹೋತ್ಸವದಲ್ಲಿ ನಟ ದರ್ಶನ್ ವಿಚಾರ ಪ್ರಸ್ತಾಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+