ಸಚಿವ ಸಂಪುಟ ಪುನಾರಚನೆ; ಮಂತ್ರಿಗಳಿಗೆ 3 ತಿಂಗಳ ವರದಿ ಕೇಳಿದ ಹೈಕಮಾಂಡ್: ವರದಿ ಬಗ್ಗೆ ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 31: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ಬಹುದಿನಗಳಿಂದ ಚರ್ಚೆ ನಡೆಯುತ್ತಿದೆ. ನವೆಂಬರ್ ತಿಂಗಳಲ್ಲಿ ಸರ್ಕಾರಕ್ಕೆ ಎರಡುವರೆ ವರ್ಷ ತುಂಬಲಿದೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ನಡೆಯಲಿದೆ ಎಂಬ ಚರ್ಚೆ ಮುನ್ನಲೆಗೆ ಬಂದಿದ್ದು, ಇದರ ನಡುವೆ ಸಚಿವ ಸಂಪುಟ ಪುನಾರಚನಗೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಹೀಗಾಗಿ ಸಿದ್ದರಾಮಯ್ಯ ಸಂಪುಟದ ಹಲವು ಹಿರಿ ಸಚಿವರಿಗೆ ಕೊಕ್ ಕೊಟ್ಟು ಹೊಸಬರಿಗೆ ಅವಕಾಶ ನೀಡಲು ಹೈಕಮಾಂಡ್ ಸಚಿವರುಗಳ ಮೂರು ತಿಂಗಳ ವರದಿಯನ್ನ ಕೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಸಚಿವ ಸಂಪುಟ ಪುನಾರಚನೆ ಸಂಬಂಧ ಹೈಕಮಾಂಡ್ ಗೆ ಸಚಿವರು ಮೂರು ತಿಂಗಳ ವರದಿ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಬೇರೆ ವಿಚಾರ ಅಥವಾ ಸಚಿವರ ಬಗ್ಗೆ ವರದಿ ಕೇಳಿರುವುದು ನನಗೆ ಗೊತ್ತಿಲ್ಲ. ನನ್ನ ಹಾಗೂ ಶಾಸಕರ ಬಗ್ಗೆ ಪ್ರತಿ ತಿಂಗಳು ನಮ್ಮ ಪಕ್ಷದಲ್ಲಿ ಸಮೀಕ್ಷೆ ನಡೆಯುತ್ತಲೇ ಇರುತ್ತದೆ. ಕ್ಷೇತ್ರ, ಪಕ್ಷ, ಸರ್ಕಾರದಲ್ಲಿ ಏನು ಕೆಲಸ ಮಾಡುತ್ತಿದ್ದಾರೆ, ಹಾಗೂ ಏನೇನು ಚಟುವಟಿಕೆಗಳು ನಡೆಯಿತು ಎಂಬುದರ ಬಗ್ಗೆ ನಿಯಮಿತವಾಗಿ ಹೈಕಮಾಂಡ್ ಗೆ ವರದಿ ಹೋಗುತ್ತಿರುತ್ತದೆ. ಅವರ ಪಾಡಿಗೆ ವರದಿ ತರಿಸಿಕೊಳ್ಳುತ್ತಾರೆ. ನಾವು ಸಹ ಪಕ್ಷದ ಚಟುವಟಿಕೆಗಳು ಏನಿದೆ ಎಂದು ಪ್ರತಿ ತಿಂಗಳೂ ವರದಿ ಕಳುಹಿಸುತ್ತೇವೆ ಎಂದರು.

ಧರ್ಮಸ್ಥಳ ಪ್ರಕರಣ ರದ್ದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಕುರಿತು ಕೇಳಿದಾಗ ಉತ್ತರಿಸಿದ ಶಿವಕುಮಾರ್ ಅವರು, ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಧರ್ಮಸ್ಥಳ ಪ್ರಕರಣ ವಿಚಾರದಲ್ಲಿ ವ್ಯಕ್ತಿ, ಕುಟುಂಬ ಮತ್ತು ಸಂಸ್ಥೆಗೆ ಎಷ್ಟು ಹಾನಿ ಮಾಡಬೇಕೋ ಅದನ್ನು ಈಗಾಗಲೇ ಮಾಡಲಾಗಿದೆ. ಒಟ್ಟಿನಲ್ಲಿ ಧರ್ಮ ಮತ್ತು ನ್ಯಾಯ ಉಳಿಯಬೇಕು ಎಂಬುದು ನಮ್ಮ ಅಭಿಲಾಷೆ ಎಂದರು.
ವೀರೇಂದ್ರ ಹೆಗ್ಗಡೆಯವರ ವ್ಯಕ್ತಿತ್ವವೇ ಬೇರೆ. ಆ ಸಂಸ್ಥೆಯ ಹೆಸರಿಗೆ ಹಾನಿಯಾಗುತ್ತಿದೆಯಲ್ಲ ಎಂದು ಬೇಸರವಾಗಿತ್ತು. "ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ". ತಿರುಪತಿಯಲ್ಲಿ ಕಾಸಿನ ಹರಕೆ, ಧರ್ಮಸ್ಥಳದಲ್ಲಿ ಮಾತಿನ ಹರಕೆ ಕಟ್ಟಿಕೊಂಡರೆ ಬಿಡುವಂತಿಲ್ಲ. ಇಂತಹ ಪದ್ಧತಿಯಲ್ಲಿ ನಡೆದುಕೊಂಡು ಹೋಗುವ ಕಡೆ ಯಾವುದೇ ಸಮಸ್ಯೆ ಇಲ್ಲ ಎಂಬುದು ನನ್ನ ನಂಬಿಕೆ ಎಂದರು. ನನ್ನ ವೈಯಕ್ತಿಕ ಮಾಹಿತಿ ಪ್ರಕಾರ ಹಾಗೂ ಧರ್ಮಸ್ಥಳದಲ್ಲಿ ಯಾವ ಪದ್ಧತಿ ನಡೆಯುತ್ತಿದೆ, ಅಲ್ಲಿ ಯಾವ ಸಂಪ್ರದಾಯಗಳನ್ನು ಆಚರಿಸಲಾಗುತ್ತಿದೆ ಎನ್ನುವ ಬಗ್ಗೆ ನನ್ನ ಅನುಭವದ ಆಧಾರದಲ್ಲಿ ಮಾತನಾಡಿದ್ದೇನೆ" ಎಂದರು.
ಧರ್ಮಸ್ಥಳ ಪ್ರಕರಣದ ಕುರಿತಾಗಿ ಎಸ್ ಐಟಿ ಸರ್ಕಾರಕ್ಕೆ ವರದಿ ಸಲ್ಲಿಸಿದೆಯೇ, ಇಲ್ಲವೇ ಎನ್ನುವ ಬಗ್ಗೆ ನನಗೆ ಮಾಹಿತಿಯಿಲ್ಲ. ವರದಿಯನ್ನು ಶೀಘ್ರದಲ್ಲೇ ನೀಡಬೇಕು ಎಂದು ಗೃಹಸಚಿವರು ಹೇಳಿರುವ ಹೇಳಿಕೆಯನ್ನು ಗಮನಿಸಿದ್ದೇನೆ. ಎಸ್ ಐಟಿ ವರದಿ ಬಂದ ನಂತರ ಏನಿದೆ ಎಂಬುದನ್ನು ಗಮನಿಸೋಣ. ಅದರಲ್ಲಿ ಏನಿದೆ ಎಂಬುದು ನನಗೆ ತಿಳಿದಿಲ್ಲ. ಮಾಧ್ಯಮಗಳಲ್ಲಿ ಬಂದಷ್ಟು ಮಾಹಿತಿ ಮಾತ್ರ ನನಗೆ ತಿಳಿದಿದೆ. ನಾನು ಯಾವ ಅಧಿಕಾರಿಯ ಬಳಿಯೂ ಯಾವುದೇ ವರದಿ ಕೇಳಲು, ಮಾತನಾಡಲು ಹೋಗಿಲ್ಲ ಎಂದರು.
ಅವರು ಸಾವಿರಾರು ಅರ್ಜಿಗಳನ್ನು ನ್ಯಾಯಲಯಕ್ಕೆ ಹಾಕಿಕೊಂಡಿರಬಹುದು. ನಾನು, ನೀವು ಅಥವಾ ಬೇರೆಯವರು ಏನಾದರೂ ಅಪರಾಧ ಮಾಡಿದ್ದ ಸಂದರ್ಭದಲ್ಲಿ ತಪ್ಪಾಯಿತು ಎಂದು ಕ್ಷಮಾಪಣೆ ಕೇಳುವ ಅವಕಾಶ ಈ ದೇಶದ ಕಾನೂನಿನಲ್ಲಿ ಇದೆಯೇ ಎಂಬುದರ ಬಗ್ಗೆ ಮಾಧ್ಯಮಗಳು ವಿಮರ್ಶೆ ಮಾಡಬೇಕು ಎಂದು ಡಿ ಕೆ ಶಿವಕುಮಾರ್ ಹೇಳಿದರು.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ












Click it and Unblock the Notifications