ಕೈ ಪಾಳಯದಲ್ಲಿ ಸಿಎಂ ಗದ್ದುಗೆ ಗುದ್ದಾಟ; ಅಮೇರಿಕಾದಲ್ಲಿ ರಾಹುಲ್‌ ಭೇಟಿಯ ಸತ್ಯ ಬಿಚ್ಚಿಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಸೆಪ್ಟೆಂಬರ್‌ 17: ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಮೇರಿಕಾದಲ್ಲಿ ರಾಹುಲ್‌ ಗಾಂಧಿ ಅವರನ್ನ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ ಅಮೇರಿಕಾ ಪ್ರವಾಸ ಮುಗಿಸಿಕೊಂಡ ಬಂದ ಡಿ ಕೆ ಶಿವಕುಮಾರ್‌ ಅವರು ರಾಹುಲ್‌ ಗಾಂಧಿ ಭೇಟಿಯ ಸತ್ಯ ಬಿಚ್ಚಿಟ್ಟಿದ್ದಾರೆ.

ಅಮೇರಿಕ ಪ್ರವಾಸದಿಂದ ಮರಳಿದ ನಂತರ ಮಂಗಳವಾರ ಮುಂಜಾನೆ ಸದಾಶಿವನಗರದ ನಿವಾಸದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ಪಕ್ಷದ ನಾಯಕರನ್ನು ಭೇಟಿಯಾಗಲು ಯಾರ ಅನುಮತಿ ಕೇಳಬೇಕು? ರಾಹುಲ್ ಗಾಂಧಿ ಅವರ ಬಳಿ ಏನು ಮಾತನಾಡಿದೆ ಎಂದು ನಿಮಗೆ (ಮಾಧ್ಯಮದವರಿಗೆ) ಹೇಳಲಾಗುತ್ತದೆಯೇ? ನನ್ನ ತಮ್ಮ, ಹೆಂಡತಿ ಮತ್ತು ಸ್ವಾಮೀಜಿಯವರ ಬಳಿ ಏನು ಮಾತನಾಡುತ್ತೇನೆ ಎಂಬುದನ್ನು ನಿಮ್ಮ ಬಳಿ ಹೇಳಲು ಆಗುತ್ತದೆಯೇ? ಎಂದು ಪ್ರಶ್ನಿಸಿದರು.

DCM DK Shivakumar Reaction On Rahul Gandhi s Visit To America

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ಪ್ರಕರಣದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಸರ್ಕಾರ, ಪೊಲೀಸ್ ಇಲಾಖೆಯು ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೊ ಅದನ್ನು ಮಾಡುತ್ತದೆ ಎಂದು ತಿಳಿಸಿದರು.

ಶಾಸಕ ಮುನಿರತ್ನ ಅವರು ದಲಿತರು ಮತ್ತು ಒಕ್ಕಲಿಗ ಸಮುದಾಯದ ಬಗ್ಗೆ ಮಾಡಿರುವ ಅವಹೇಳನದ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿ, ದೊಡ್ಡ ದೊಡ್ಡ ನಾಯಕರಿದ್ದಾರೆ, ಅವರು ಮಾತಾಡಬೇಕು. ಇಂತಹ ವಿಚಾರದಲ್ಲಿ ಬಿಜೆಪಿಯವರೇ ಪ್ರತಿಕ್ರಿಯೆ ನೀಡಬೇಕು. ಮುನಿರತ್ನ ಮಾತನಾಡಿರುವುದು ಸರಿಯೋ ತಪ್ಪೋ? ಒಳ್ಳೆಯದೋ, ಕೆಟ್ಟದ್ದೋ ಎಂಬುದನ್ನು ತಿಳಿಸಬೇಕು. ಸರಿಯಿದ್ದರೆ ಸರಿ, ತಪ್ಪಿದ್ದರೆ ತಪ್ಪು ಎಂದು ಹೇಳಬೇಕು" ಎಂದರು.

ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ಅವರು ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಪೊಲೀಸರ ಬಂಧನಕ್ಕೆ ಮುಂಚಿತವಾಗಿ ನನ್ನ ವಿಚಾರದಲ್ಲಿ ಅಣ್ಣ- ತಮ್ಮರ ಆಟ ಶುರುವಾಗಿದೆ ಎನ್ನುವ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ, "ನನಗೆ ಈ ವಿಚಾರ ಗೊತ್ತೇ ಇಲ್ಲ, ತಿಳಿದು ಮಾತಾಡ್ತೀನಿ. ನನಗೆ ಇನ್ನು ಸರಿಯಾಗಿ ಮಾಹಿತಿ ಗೊತ್ತಿಲ್ಲ. ಸಾಂವಿಧಾನಿಕ ಹುದ್ದೆ ಹೊಂದಿರುವ ಆರ್ ಅಶೋಕ್, ವಿಜಯೇಂದ್ರ, ಕೇಂದ್ರ ಸಚಿವರು ಇದ್ದಾರೆ. ಅವರು ದೊಡ್ಡ ನಾಯಕರಿದ್ದಾರೆ. ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+