D.K.Shivakumar: ಕಾಂಗ್ರೆಸ್‌ ನಾಯಕರ ಡಿನ್ನರ್‌ ಮೀಟಿಂಗ್‌ ಬಗ್ಗೆ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ಕಾಂಗ್ರೆಸ್‌ ಸಚಿವ ಸತೀಶ್‌ ಜಾರಕಿಹೊಳಿ ಅವರ ನಿವಾಸದಲ್ಲಿ ಇತ್ತೀಚೆಗೆ ನಡೆದಿದ್ದ ಡಿನ್ನರ್‌ ಮೀಟಿಂಗ್‌ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇದಕ್ಕೆ ಕಾರಣ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ವಿದೇಶದಲ್ಲಿದ್ದಾಗ ಖುದ್ದು ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್‌ ನಾಯಕರು ಒಂದೆಡೆ ಸೇರಿದ್ದು ಹಾಗೂ ಎಲ್ಲರೂ ಸಿದ್ದರಾಮಯ್ಯ ಬಣದ ನಾಯಕರೇ ಡಿನ್ನರ್‌ನಲ್ಲಿ ಭಾಗಿಯಾಗಿದ್ದು.

ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಸಿದ್ದರಾಮಯ್ಯ ಅವರು ಈ ಡಿನ್ನರ್‌ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದು ಹಲವು ಕುತೂಹಲಕ್ಕೆ ಕಾರಣವಾಗಿತ್ತು. ಇದೇ ವಿಚಾರವಾಗಿ ಬಿಜೆಪಿ ಕೂಡ ಡಿ.ಕೆ.ಶಿವಕುಮಾರ್‌ ಅವರನ್ನು ಲೇವಡಿ ಮಾಡಿತ್ತು. ಸದ್ಯ ವಿದೇಶದಿಂದ ಮರಳಿರುವ ಡಿ.ಕೆ.ಶಿವಕುಮಾರ್‌ ಅವರು ಡಿನ್ನರ್‌ ಮೀಟಿಂಗ್‌ ಬಗ್ಗೆ ಮೌನ ಮುರಿದಿದ್ದಾರೆ.

Dcm DK Shivakumar Responds To Congress Dinner Meeting Controversy

ಎಲ್ಲರೂ ಊಟಕ್ಕೆ ಸೇರಿದರೆ ಅದರಲ್ಲಿ ತಪ್ಪೇನಿದೆ? ಔತಣಕೂಟಕ್ಕೆ ಸೇರಿದರೆ ಅದಕ್ಕೆ ರಾಜಕೀಯ ಏಕೆ ಸೇರಿಸುತ್ತೀರಿ? ಎಂದು ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಾನು ಹಲವು ವರ್ಷಗಳಿಂದ ಎಲ್ಲೂ ಹೊರಗಡೆ ಹೋಗಿರಲಿಲ್ಲ. ಈ ಹಿನ್ನೆಲೆ ಕುಟುಂಬದೊಂದಿಗೆ ಹೊಸ ವರುಷಕ್ಕೆ ವಿದೇಶಕ್ಕೆ ಹೋಗಿದ್ದೆ ಎಂದಿದ್ದಾರೆ.

ನಾನು ಹಲವು ಬಾರಿ ಊಟಕ್ಕೆ ಕರೆದಿದ್ದೇನೆ. ಎಲ್ಲರೂ ಊಟಕ್ಕೆ ಸೇರಿದರೆ ತಪ್ಪೇನಿದೆ? ಊಟಕ್ಕೆ ಸೇರಿದ್ದನ್ನು ರಾಜಕೀಯ ಮಾಡುವುದೇನಿದೆ? ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ. ನಿಮ್ಮನ್ನು ಸದಾ ಬ್ಯುಸಿಯಾಗಿಡುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಕ್ಯಾಬಿನೆಟ್‌ ಪುನರ್‌ ರಚನೆ ಅಂತೆಲ್ಲ ದಾರಿ ತಪ್ಪಿಸುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಸಚಿವ ಸತೀಶ್‌ ಜಾರಕಿಹೊಳಿ ಅವರ ನಿವಾಸದಲ್ಲಿ ಕಾಂಗ್ರೆಸ್‌ ನಾಯಕ ಡಿನ್ನರ್‌ ಪಾರ್ಟಿ ನಡೆದಿತ್ತು. ಇದರಲ್ಲಿ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್‌ ಸೇರಿದಂತೆ 35 ಕಾಂಗ್ರೆಸ್‌ ಶಾಸಕರು ಕೂಡ ಭಾಗಿಯಾಗಿದ್ದರು. ಇನ್ನು ಈ ಡಿನ್ನರ್‌ ಮೀಟಿಂಗ್‌ನಲ್ಲಿ ಬಹುತೇಕರು ಸಿದ್ದರಾಮಯ್ಯ ಬಣದ ನಾಯಕರು ಮಾತ್ರವೇ ಸೇರಿದ್ದರಿಂದ ಹಲವು ಸುದ್ದಿಗಳಿಗೆ ರೆಕ್ಕೆಪುಕ್ಕ ಬಂದಿತ್ತು.

Dcm DK Shivakumar Responds To Congress Dinner Meeting Controversy

ಈ ಸಭೆಯಲ್ಲಿ ಅಧಿಕಾರ ಹಂಚಿಕೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಭಾರಿ ಚರ್ಚಗಳು ನಡೆದಿವೆ ಎಂದು ಹೇಳಲಾಗಿತ್ತು. ಅಲ್ಲದೆ ಡಿ.ಕೆ.ಶಿವಕುಮಾರ್‌ ಅವರನ್ನು ಕಟ್ಟಿಹಾಕಲು ಈ ಸಭೆಯಲ್ಲಿ ರಣತಂತ್ರ ರೂಪಿಸಲಾಗಿತ್ತು ಎಂತಲೂ ಹೇಳಲಾಗಿತ್ತು. ಆದರೆ ಸಭೆ ಮುಗಿಸಿ ಹೊರಬಂದ ನಾಯಕರು ಅನೌಪಚಾರಿಕವಾಗಿ ಭೋಜನಕೂಟಕ್ಕೆ ಸೇರಿದ್ದೆವು ಎಂದಿದ್ದರು.

ಸಿಎಂ ಸಿದ್ದರಾಮಯ್ಯ ಕೂಡ ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು. ಊಟಕ್ಕೆ ಎಲ್ಲರೂ ಒಂದು ಕಡೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ತಪ್ಪಾಗಿ ಭಾವಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. ಆದಾಗಿಯೂ ಡಿ.ಕೆ.ಶಿವಕುಮಾರ್‌ ಅವರು ಇಲ್ಲದಾಗ ನಡೆದಿದ್ದ ಈ ಡಿನ್ನರ್‌ ಪಾರ್ಟಿಯು ಮಹತ್ವ ಪಡೆದುಕೊಂಡಿತ್ತು. ಇದೀಗ ಡಿ.ಕೆ.ಶಿವಕುಮಾರ್‌ ಅವರೂ ಈ ಬಗ್ಗೆ ಡೋಂಟ್‌ ಕೇರ್‌ ಎನ್ನುವಂತೆ ಮಾತನಾಡಿದ್ದಾರೆ. ಸದ್ಯ ಡಿನ್ನರ್‌ ಪಾರ್ಟಿ ಬಗ್ಗೆ ಮೂಡಿದ್ದ ಗೊಂದಲಗಳಿಗೆ ಫುಲ್‌ಸ್ಟಾಪ್‌ ಇಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+