ಪ್ರದೀಪ್ ಈಶ್ವರ್‌ನನ್ನು ಮೊದಲ ಬಾರಿಗೆ ನೋಡಿ ಯಾರೋ ಹುಚ್ಚ ಅನ್ಕೊಂಡಿದ್ದೆ: ಡಿ.ಕೆ. ಶಿವಕುಮಾರ್
ಬೆಂಗಳೂರು, ಜೂನ್ 22: ಪ್ರದೀಪ್ ಈಶ್ವರ್ ಅವರನ್ನು ಶಾಸಕರಾಗಿ ಆಯ್ಕೆ ಮಾಡಿದ್ದೀರಿ. ಅವರ ಮಾತು, ಆಚಾರ ವಿಚಾರ ಪ್ರಚಾರ ಮಾಡಿ ವಿಧಾನಸೌಧಕ್ಕೆ ಬಂದಿದ್ದಾರೆ. ಶಿವಶಂಕರ್ ಅವರು ಪ್ರದೀಪ್ ಈಶ್ವರ್ ಅವರನ್ನು ನನ್ನ ಬಳಿ ಕರೆದುಕೊಂಡು ಬಂದಾಗ, ಯಾರೋ ಹುಚ್ಚನನ್ನು ಕರೆದುಕೊಂಡು ಬಂದಿದ್ದೀರಿ ಎಂದಿದ್ದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಈ ಸಂದರ್ಭದಲ್ಲಿ ಶಿವಶಂಕರ್ ಅವರು ಇಲ್ಲ ಈತ ಉಪಯೋಗಕ್ಕೆ ಬರುತ್ತಾರೆ, ಒಂದು ಅವಕಾಶ ನೀಡಿ ಎಂದರು. ಅವರು ಈಗ ರಾಜ್ಯದಲ್ಲೇ ಹೊಸ ಇತಿಹಾಸ ಸೃಷ್ಟಿ ಮಾಡಿ ಶಾಸಕನಾಗಿದ್ದಾರೆ. ವಿಧಾನಸಭೆಯಲ್ಲೂ ತಮ್ಮ ಆಚಾರ, ವಿಚಾರ ಪ್ರತಿಪಾದನೆ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಒಬ್ಬ ವ್ಯಕ್ತಿ ಹಿಂದೆ ಎಷ್ಟು ಜನ ಇರುತ್ತಾರೆ ಎಂಬುದಕ್ಕಿಂತ ಒಬ್ಬ ವ್ಯಕ್ತಿ ಎಷ್ಟು ಜನ ನಾಯಕರನ್ನು ತಯಾರು ಮಾಡುತ್ತಾರೆ ಎಂಬುದು ಮುಖ್ಯ. ನಾಯಕರು ಎಂದರೆ ರಾಜಕಾರಣಿ ಮಾತ್ರವಲ್ಲ. ಎಲ್ಲಾ ವರ್ಗದಲ್ಲಿ ನಾಯಕತ್ವ ಗುಣ ಇರುವವರು. ಇಲ್ಲಿ ಅನೇಕ ವಿದ್ಯಾರ್ಥಿಗಳಿದ್ದೀರಿ. ಕೂಲಿ ಮಾಡುವವರು, ಚಾಲಕರ ಮಕ್ಕಳಿಗೂ ಇಂದು ನಾವು ಸನ್ಮಾನ ಮಾಡಿದ್ದೇವೆ. ಆ ಪೋಷಕರಿಗೆ ಇದಕ್ಕಿಂತ ಇನ್ನೇನು ಬೇಕು ಹೇಳಿ.
ನಾನು ಇಂದು ಉಪಮುಖ್ಯಮಂತ್ರಿಯಾಗಿರಬಹುದು. ಆದರೆ ಒಂದು ಕಾಲದಲ್ಲಿ ನಾನು ಪದವೀಧರ ಆಗಲಿಲ್ಲ ಎಂಬ ಕೊರಗು ಇತ್ತು. ನಾನು ಮಂತ್ರಿಯಾದ ನಂತರ 48 ನೇ ವಯಸ್ಸಿನಲ್ಲಿ ಪರೀಕ್ಷೆ ಬರೆದು ಪದವೀಧರನಾದೆ. ವಿಧಾನಸೌಧದ ಮುಂದೆ ಸಚಿವ ಸಂಪುಟ ಸಭೆಯಲ್ಲಿ ಮಂತ್ರಿಯಾಗಿದ್ದಕ್ಕಿಂತ ಮೈಸೂರಿನಲ್ಲಿ ಪದವೀಧರನಾಗಿ ಪ್ರಮಾಣಪತ್ರ ಪಡೆದಾಗ ಹೆಚ್ಚು ಸಂತೋಷವಾಯಿತು.
ಪ್ರಪಂಚವನ್ನು ಬದಲಿಸಲು ಶಿಕ್ಷಣ ಅತಿ ಶಕ್ತಿಶಾಲಿ ಅಸ್ತ್ರ. ಅದೇ ರೀತಿ ಈ ಮಕ್ಕಳು. ಈ ಸಂಸ್ಥೆಯವರು ಇಲ್ಲಿನ ಮಕ್ಕಳನ್ನು ಯಾವ ರೀತಿ ತಯಾರು ಮಾಡಿದ್ದಾರೆ ಎಂದರೆ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ 250 ಸೀಟುಗಳಿದ್ದರೆ ಅದರಲ್ಲಿ 150ರಿಂದ 180 ಮಕ್ಕಳು ಈ ಸಂಸ್ಥೆಯಲ್ಲಿ ಶಿಕ್ಷಣ ಪಡೆದವರೇ ಆಗಿದ್ದಾರೆ. ಇದಕ್ಕಿಂತ ದೊಡ್ಡ ಸಾಧನೆ ಬದಲಾವಣೆ ಯಾರೂ ಮಾಡಲು ಸಾಧ್ಯವಿಲ್ಲ. ಪ್ರದೀಪ್ ಈಶ್ವರ್ ಅವರು ಈ ಸಂಸ್ಥೆಗಾಗಿ ಸ್ವಂತ ಕಟ್ಟಡ ಬೇಕು ಎಂದು ಮನವಿ ಮಾಡಿದ್ದಾರೆ. ನೀವೆಲ್ಲ ಸೇರಿ ನನಗೆ ಅಧಿಕಾರ ಕೊಟ್ಟಿದ್ದು ನನ್ನ ಅವಧಿಯಲ್ಲಿ ಜಾಗ ಮಂಜೂರು ಮಾಡುವುದಾಗಿ ಭರವಸೆ ನೀಡುತ್ತೇನೆ.

ನೋಬಲ್ ಪ್ರಶಸ್ತಿ ವಿಜೇತರಾದ ಬಾಂಗ್ಲಾದೇಶದ ಕರಾವಳಿ ಭಾಗದ ಮೊಹಮದ್ ಯೂನಿಸ್ ಅವರು ಒಂದು ಮಾತು ಹೇಳಿದ್ದಾರೆ. "ನೀವು ಒಬ್ಬ ವ್ಯಕ್ತಿಗೆ ಮೀನನ್ನು ತಿನ್ನಿಸಿದರೆ ಅದು ಆತನ ಒಂದು ದಿನದ ಊಟ. ಆದರೆ ಅದೇ ವ್ಯಕ್ತಿಗೆ ನೀವು ಮೀನುಗಾರಿಕೆ ಮಾಡುವುದನ್ನು ಕಲಿಸಿದರೆ ಅವನಿಗೆ ಜೀವನಪೂರ್ತಿ ನೆರವಾಗುತ್ತದೆ ಎಂದರು.
ಅದೇ ರೀತಿ ನನ್ನ ಸ್ನೇಹಿತ ಪ್ರದೀಪ್ ಈಶ್ವರ್ ನಿಮ್ಮೆಲ್ಲರಿಗೂ ಶಿಕ್ಷಣ ನೀಡುತ್ತಿದ್ದಾರೆ. ನಿಂಬೆಗಿಂತ ಶ್ರೇಷ್ಠವಾದ ಹುಳಿ ಇಲ್ಲ, ದುಂಬಿ ಮೈಯಲ್ಲಿರುವ ಕಪ್ಪು ಬಣ್ಣಕ್ಕಿಂತ ಶ್ರೇಷ್ಠ ಕಪ್ಪು ಇಲ್ಲ, ಶಿವನಿಗಿಂತ ಅಧಿಕ ದೇವರಿಲ್ಲ, ನಂಬಿಕೆಗಿಂತ ದೊಡ್ಡ ಗುಣವಿಲ್ಲ. ನೀವೆಲ್ಲರೂ ಪ್ರದೀಪ್ ಈಶ್ವರ್ ಅವರ ಮೇಲೆ ನಂಬಿಕೆ ಇಟ್ಟು ನಿಮ್ಮ ಮಕ್ಕಳನ್ನು ಅವರ ಸಂಸ್ಥೆಗೆ ಸೇರಿಸಿದ್ದೀರಿ. ನಿಮ್ಮ ನಂಬಿಕೆಗೆ ಕೋಟಿ ನಮನಗಳು.
ಮಕ್ಕಳಿಗೆ ಒಂದು ಮಾತು ಹೇಳಲು ಬಯಸುತ್ತೇನೆ. ನಿಮ್ಮ ಪೋಷಕರು, ಶಿಕ್ಷಕರು ನಿಮ್ಮ ಜೀವನದಲ್ಲಿ ಅಫಾರ ಕೊಡುಗೆ ನೀಡಿದ್ದಾರೆ. ಅವರ ತ್ಯಾಗ ಅವಿಸ್ಮರಣೀಯ. ಶಿಕ್ಷಕ ವೃತ್ತಿ ಸುಲಭವಾದುದಲ್ಲ. ನಿಮ್ಮನ್ನು ತಿದ್ದಿ ತೀಡಿ ಜನ ಗುರುತಿಸುವಂತೆ ಮಾಡುವವರು ಶಿಕ್ಷಕರು. ನೀವು ಅವರನ್ನು ಮರೆಯಬಾರದು. ನಿಮ್ಮ ಮೂಲವನ್ನು ಮರೆತರೆ ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ಪರಿಶ್ರಮ ಸಂಸ್ಥೆ ಇಂದು ವಿದ್ಯಾರ್ಥಿಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದ್ದಾರೆ. ನೀವೆಲ್ಲರೂ ಈ ಸಂಸ್ಥೆಯ ರಾಯಭಾರಿಗಳಾಗಿದ್ದೀರಿ. ನೀವು ಈ ಸಂಸ್ಥೆಗೆ ಶಕ್ತಿ ತುಂಬಬೇಕು ಎಂಧು ಹೇಳಿದರು.
-
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications