DK Shivakumar: ಸಂವಿಧಾನ ಬದಲಿಸುತ್ತೇವೆ ಅಂದ್ರಾ ಡಿಕೆ ಶಿವಕುಮಾರ್?
ಬೆಂಗಳೂರು, ಮಾರ್ಚ್ 24: ಸಂವಿಧಾನ ಬದಲಾವಣೆ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ರಾಜ್ಯಸಭೆಯಲ್ಲಿ ಭಾರೀ ಗದ್ದಲಕ್ಕೆ ಕಾರಣವಾಯಿತು. ಸೋಮವಾರ ರಾಜ್ಯಸಭೆ ಕಲಾಪ ಶುರುವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದರು. ಖಾಸಗಿ ಸುದ್ದಿವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಸಂವಿಧಾನ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿದ್ದರು. ಡಿ ಕೆ ಶಿವಕುಮಾರ್ ಅವರ ಮಾತನಾಡಿದ್ದಾರೆ ಎನ್ನಲಾಗಿದ್ದ ವಿಚಾರ ಇದೀಗ ಸಾಕಷ್ಟು ಸದ್ದು ಮಾಡುತ್ತಿದೆ.
ಮುಸ್ಲಿಮರಿಗೆ ಮೀಸಲಾತಿ ನೀಡುವ ಮೂಲಕ ಸಂವಿಧಾನವನ್ನು ಬದಲಿಸುತ್ತೇನೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವವರು ಸಂವಿಧಾನವನ್ನು ಬದಲಿಸುತ್ತೇನೆ ಎಂದಿದ್ದಾರೆ. ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏನು ಹೇಳ್ತಾರೆ ಎಂಬುದನ್ನು ನೋಡಬೇಕು. ಯಾಕೆ ಸಂವಿಧಾನ ಬದಲಿಸುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತಿದೆ ಎಂದು ಹೇಳಬೇಕು ಎಂದು ಆಗ್ರಹಿಸಿದರು. ಇದರ ಬೆನ್ನಲ್ಲೇ ಮಾತನಾಡಿದ ಸಚಿವ ಜೆಪಿ ನಡ್ಡಾ, ಸಂವಿಧಾನದ ರಕ್ಷಕ ಎಂದು ಕರೆದುಕೊಳ್ಳುತ್ತಿರುವ ಕಾಂಗ್ರೆಸ್ ಅಂಬೇಡ್ಕರ್ ಸಂವಿಧಾನಕ್ಕೆ ಬೆಲೆ ಕೊಡುತ್ತಿಲ್ಲ. ಡಾ ಬಿಆರ್ ಅಂಬೇಡ್ಕರ್ ಅವರ ನೀತಿಗಳಿಗೆ ವಿರುದ್ಧವಾಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಸಂವಿಧಾನಕ್ಕೆ ವಿರುದ್ಧವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಿದ್ದಾರೆ ಎಂದು ಕಿಡಿಕಾರಿದರು.

ಇತ್ತ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಕಿಡಿಕಾರಿದ್ದು, ಭಾರತದ ಪ್ರಜಾತಂತ್ರ ವ್ಯವಸ್ಥೆಯ ಸಾರ್ವಭೌಮ ಎಂದು ಗೌರವಿಸುವ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನೇ ತಿದ್ದುಪಡಿ ಮಾಡಿದರೂ ಸರಿ ಮುಸ್ಲಿಮರಿಗೆ ಮೀಸಲಾತಿ ನೀಡುವುದೇ ನಮ್ಮ ಪ್ರಥಮ ಆದ್ಯತೆ, ದೇಶ, ಸಂವಿಧಾನಕ್ಕಿಂತ ಮುಸ್ಲಿಮರಿಗೆ ಮೀಸಲಾತಿ ಕೊಡುವುದು ನಮ್ಮ ಕರ್ತವ್ಯ" ಎಂಬ ಅರ್ಥದಲ್ಲಿ ರಾಷ್ಟ್ರೀಯ ವಾಹಿನಿಯೊಂದರ ಸಂದರ್ಶನದಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್ ಅವರು ಕಾಂಗ್ರೆಸ್ ನ ಮುಖ್ಯ ಅಜೆಂಡಾ ಏನು ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಕಳೆದ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ವಿರುದ್ಧ ಸಂವಿಧಾನ ಬದಲಾಯಿಸುತ್ತಾರೆ ಎಂಬ ವ್ಯವಸ್ಥಿತ ಅಪಪ್ರಚಾರ ನಡೆಸಿ ಶೋಷಿತ ಸಮುದಾಯಗಳಲ್ಲಿ ಗೊಂದಲವೆಬ್ಬಿಸಿ ಅಧಿಕಾರ ಕಬಳಿಸಲು ಕಸರತ್ತು ನಡೆಸಿದ್ದ ಕಾಂಗ್ರೆಸ್'ನ ಅಸಲಿ ಮುಖವಾಡ ಏನು ಎಂಬುದನ್ನು ಇಂದು ರಾಜ್ಯ ಹಾಗೂ ದೇಶದ ಜನತೆ ಅರ್ಥ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.

ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ನಾನು ಹೇಳಿಲ್ಲ:ಡಿಕೆಶಿ
ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುಸ್ಲಿಮರಿಗೆ ಮೀಸಲು ನೀಡಲು ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದೀರಿ ಎಂದು ಬಿಜೆಪಿಯವರು ಟ್ವಿಟರ್ ನಲ್ಲಿ ಹಾಗೂ ಸಂಸತ್ ನಲ್ಲಿ ಟೀಕೆ ಮಾಡುತ್ತಿರುವ ಕುರಿತು ಡಿ ಕೆ ಶಿವಕುಮಾರ್ ಅವರು ಮಾತನಾಡಿ. ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ಎಂದು ತಿಳಿಸಿದ್ದಾರೆ.
ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಕಳೆದ 36 ವರ್ಷಗಳಿಂದ ಶಾಸಕನಾಗಿ ವಿಧಾನಸಭೆಯಲ್ಲಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತಲೂ ನಾನು ಉತ್ತಮ ಸೂಕ್ಷ್ಮತೆ ಇರುವ ರಾಜಕಾರಣಿ. ಆದರೆ ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ನಾನು ಈ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಿಲ್ಲ ಎಂದು ಹೇಳಿದರು.
ನ್ಯಾಯಾಲಯಗಳ ತೀರ್ಪಿನ ಅನುಸಾರ ತಿದ್ದುಪಡಿ ತಂದಿರುವ ನಿದರ್ಶನವಿದೆ ಎಂದು ಹೇಳಿದ್ದೇನೆಯೇ ಹೊರತು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿರುವ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ನಮ್ಮದು ರಾಷ್ಟ್ರೀಯ ಪಕ್ಷ, ಸಂವಿಧಾನವನ್ನು ಜಾರಿಗೆ ತಂದಿದ್ದೇ ನಮ್ಮ ಪಕ್ಷ. ಸಂವಿಧಾನದ ಮಹತ್ವ ಬೇರೆಲ್ಲರಿಗಿಂತ ನಮಗೆ ಚೆನ್ನಾಗಿ ಗೊತ್ತಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ವಿಫಲವಾಗಿದೆ. ಬಜೆಟ್ ನಲ್ಲಿ ಏನೂ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಈ ರೀತಿ ಇಲ್ಲಸಲ್ಲದ ವಿಚಾರವನ್ನು ಪ್ರಸ್ತಾವ ಮಾಡುತ್ತಿದೆ. ಇದೊಂದು ನನ್ನ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಮುಂದುವರೆದಿರುವ ರಾಜಕೀಯ ಪಿತೂರಿ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯ ಅಮಿತ್ ಮಾಳವಿಯಾ ಅವರ ಎಕ್ಸ್ (ಟ್ವೀಟ್) ಬಗ್ಗೆ ಕೇಳಿದಾಗ, ರಾಜಕೀಯ ವ್ಯಕ್ತಿಯಾದ ಅವರು ಇಡೀ ದೇಶವನ್ನು ತಪ್ಪು ಹಾದಿಗೆ ಎಳೆಯುತ್ತಿದ್ದಾರೆ. ಬಿಜೆಪಿ ಯಾವಾಗಲೂ ದೇಶವನ್ನು ತಪ್ಪು ಹಾದಿಗೆ ಎಳೆಯುವ ಕೆಲಸ ಮಾಡುತ್ತಲೇ ಬಂದಿದೆ. ನಾನು ಎಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂದು ಹೇಳಿದ್ದೇನೆ ಎಂದು ತೋರಿಸಲಿ. ಬಿಜೆಪಿಯವರು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ನನ್ನ, ಸೋನಿಯಾ ಗಾಂಧಿ ಅವರ ಕುಟುಂಬದ ಹಾಗೂ ಕಾಂಗ್ರೆಸ್ ಪಕ್ಷದ ಹೆಸರು ತೆಗೆದುಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಲ್ಲಿ ಸಂವಿಧಾನ ಬದಲಾವಣೆಗೆ ನಾವು ಅವಕಾಶ ನೀಡುವುದಿಲ್ಲ ಎಂದಿದ್ದಾರಲ್ಲ ಎಂದು ಕೇಳಿದಾಗ, ನಾವು ಈ ದೇಶಕ್ಕೆ ಸಂವಿಧಾನ ನೀಡಿದವರು. ಅದನ್ನು ಕಾಪಾಡುವುದು ನಮ್ಮ ಹಕ್ಕು. ಬಿಜೆಪಿಯು ತನ್ನ ಲೋಪಗಳನ್ನು ಮುಚ್ಚಿಕೊಳ್ಳಲು ಇಂತಹ ಸುಳ್ಳು ವಿಚಾರಗಳನ್ನು ವಿಚಾರ ಮುನ್ನೆಲೆಗೆ ತರುತ್ತಿದೆ" ಎಂದರು. ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಯಾವ ಆಧಾರದಲ್ಲಿ ನೀಡಲಾಗಿದೆ ಎಂಬುದನ್ನು ಸ್ಪಷ್ಟಪಡಿಸುವಂತೆ ಕೇಳಿದಾಗ, "ರಾಜ್ಯದ ಹಿಂದುಳಿದ ವರ್ಗಗಳ ವರದಿ ಆಧಾರದ ಮೇಲೆ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲಾಗಿದೆ. ಮಹಾರಾಷ್ಟ್ರ, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮೀಸಲಾತಿ ವಿಚಾರವಾಗಿ ನ್ಯಾಯಲಯಗಳ ಮೆಟ್ಟಿಲೇರಲಾಗಿದ್ದು, ಆ ನ್ಯಾಯಾಲಯಗಳ ತೀರ್ಪುಗಳ ಆಧಾರದ ಮೇಲೆ ಕೆಲವು ಬದಲಾವಣೆ ಮಾಡಿ ಅವಕಾಶ ನೀಡಲಾಗಿದೆ ಎಂದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications