‌IPL 2025 Final: ಆರ್‌ಸಿಬಿ ಜರ್ಸಿ ತೊಟ್ಟು ತಂಡಕ್ಕೆ ಶುಭ ಹಾರೈಸಿದ ಡಿ ಕೆ ಶಿವಕುಮಾರ್ ಶುಭಾಶಯ: ವಿಡಿಯೋ ಇಲ್ಲಿದೆ

ಬೆಂಗಳೂರು, ಜೂನ್‌ 03: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡ 2016ರ ನಂತರ ಹಾಗೂ ಒಟ್ಟಾರೆ 4ನೇ ಬಾರಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಫೈನಲ್‌ ಪ್ರವೇಶಿಸಿದೆ. ಇಂದು(ಜೂನ್‌ 03)ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಇತ್ತ ಆರ್‌ ಸಿ ಬಿ ತಂಡ ಗೆಲುವು ಸಾಧಿಸಲಿ ಎಂದು ಅಭಿಮಾನಿಗಳು ರಾಜ್ಯಾಧ್ಯಂತ ಪೂಜೆ, ಹೋಮ-ಹವನವನ್ನ ಮಾಡುತ್ತಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡ ಗೆದ್ದು ಬರಲಿ ಎಂದು ಅಭಿಮಾನಿಗಳು ಸೇರಿದಂತೆ ಸಿನಿಮಾ ನಟ-ನಟಿಯರು ರಾಜಕೀಯ ನಾಯಕರು ಆರ್‌ಸಿ ಬಿ ತಂಡಕ್ಕೆ ಶುಭರೋರಿದ್ದಾರೆ. ಕರ್ನಾಟಕದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಕ್ರಿಕೆಟ್ ಪ್ರೇಮಿ ಮತ್ತು ಕಾಲೇಜು ದಿನಗಳಲ್ಲಿ ಆಟ ಆಡಿದ್ದೂ ಉಂಟು. ಅವರು ಆರ್ಸಿಬಿ ಟೀಮ್‌ನ ದೊಡ್ಡ ಅಭಿಮಾನಿಯೂ ಹೌದು. ಹೀಗಾಗಿ ಬೆಂಗಳೂರಿನ ತಂಡ ಐಪಿಎಲ್ 18ನೇ ಸೀಸನ್ನ ಫೈನಲ್ ಆಡಲಿರುವ ಸಂದರ್ಭದಲ್ಲಿ ಡಿಸಿಎಂ ಶಿವಕುಮಾರ್ ಟೀಮ್‌ಗೆ ಶುಭ ಹಾರೈಸಿದ್ದಾರೆ.

DCM DK Shivakumar takes to social media to wish RCB

ಡಿ ಕೆ ಶಿವಕುಮಾರ್‌ ಅವರು ಆಟಗಾರರನ್ನು ಹುರಿದುಂಬಿಸಲು ಅವರು ಅರ್ಸಿಬಿ ಜೆರ್ಸಿ ತೊಟ್ಟಿರುವುದು ವಿಶೇಷ. ಕಳೆದ 18 ವರ್ಷಗಳಿಂದ ಆರ್ಸಿಬಿ ತಂಡ ಐಪಿಎಲ್ ಚಾಂಪಿಯನ್ಶಿಪ್ ಗೆಲ್ಲಲಿ ಅಂತ ಹಾರೈಸುತ್ತಿದ್ದೇವೆ, ಇವತ್ತು ಮತ್ತೊಂದು ಅವಕಾಶ, ಇಡೀ ಕರ್ನಾಟಕ ಮಾತ್ರ ಅಲ್ಲ ಭಾರತವೂ ನಿಮ್ಮೊಂದಿಗಿದೆ, ನಿಮ್ಮ ಪರಿಶ್ರಮ ಗಮನಿಸುತ್ತಿದ್ದೇವೆ, ಗೆಲುವು ನಿಮ್ಮದೇ, ಈ ಸಲ ಕಪ್ ನಮ್ದೇ ಎಂದು ಶಿವಕುಮಾರ್ ಅವರು ಆರ್‌ಸಿಬಿ ತಂಡಕ್ಕೆ ವಿಡಿಯೋ ಮೂಲಕ ಶುಭ ಹಾರೈಸಿದ್ದಾರೆ. ಡಿ ಕೆ ಶಿವಕುಮಾರ್‌ ಶುಭ ಹಾರೈಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣವೊಂದರ ಸಖತ್‌ ವೈರಲ್‌ ಆಗುತ್ತಿದೆ.

ಈ ಬಾರಿಯ ಐಪಿಎಲ್ ಟೂರ್ನಿಯನ್ನು ನಮ್ಮ ಆರ್ ಸಿಬಿ ತಂಡ ಗೆಲ್ಲಬೇಕು ಎಂದು ರಾಜ್ಯ ಹಾಗೂ ದೇಶದ ಅಭಿಮಾನಿಗಳು ಬಯಸುತ್ತಿದ್ದಾರೆ. ರಾಜ್ಯದ ಜನರ ಪರವಾಗಿ ಆರ್ ಸಿಬಿ ತಂಡದ ಆಟಗಾರರಿಗೆ ಶುಭಕೋರುತ್ತೇನೆ. ಈ ಬಾರಿ ಐಪಿಎಲ್ ಕಪ್ ಅನ್ನು ಗೆದ್ದು ತರಬೇಕು. ಫೈನಲ್ ಪಂದ್ಯದ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು, ಆಟಗಾರರು ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸಲಿ ಎಂದು ಶುಭ ಹಾರೈಸುತ್ತೇನೆ ಎಂದು ತಿಳಿಸಿದರು.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್‌ಸಿಬಿ ತಂಡಕ್ಕೆ ಶುಭಕೋರಿದ್ದಾರೆ. ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್‌ಸಿಬಿ ತಂಡಕ್ಕೆ ಶುಭ ಹಾರೈಕೆಗಳು. ಆರ್‌ಸಿಬಿ ತಂಡದ ಸೋಲು - ಗೆಲುವು, ಏಳು - ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ - ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ. "ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ", ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್‌ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+