Operation Hasta: ಆಪರೇಷನ್ ಗಾಳದ ಮೂಲಕ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ; ಗುಟ್ಟು ಬಿಟ್ಟುಕೊಟ್ಟ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್‌ 18: 2024 ರ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದೆ. ಇತ್ತ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಸದ್ದು ಜೋರಾಗೊದ್ದು, ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದೆಂದು ಹೇಳುವ ಮೂಲಕ ಆಪರೇಷನ್​ ಗುಟ್ಟು ಬಿಟ್ಟುಕೊಟ್ಟಿದ್ದಾರೆ.

ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರಲು ಸಿದ್ಧವಿದ್ದರೆ ಸೇರಿಸಿಕೊಳ್ಳಿ ಎಂದು ಹೇಳಿದ್ದೇನೆ. ಕೆಲ ಕಾರ್ಯಕರ್ತರು ಬಹಳ ಉತ್ಸಾಹದಿಂದ ಕೆಲಸ ಮಾಡ್ತಿದ್ದಾರೆ. ವೋಟ್​ ಶೇರ್ ಜಾಸ್ತಿ ಮಾಡಿಕೊಳ್ಳಲು ಕಾರ್ಯಕರ್ತರಿಗೆ ಹೇಳಿದ್ದೇವೆ. ಸೋಮಶೇಖರ್ ಪಕ್ಷ ಸೇರ್ಪಡೆ ಬಗ್ಗೆ ವೈಯಕ್ತಿಕವಾಗಿ ಹೇಳಿರಬಹುದು. ಆ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ, ಯಾವಾಗ ಏನು ಬೇಕಾದರೂ ಆಗಬಹುದು. ಆದ್ರೆ, ಯಾರು ಬರುತ್ತಾರೆ ಏನು ಎಂಬುವುದನ್ನ ನಾನು ಹೇಳುವುದಿಲ್ಲ ಎಂದು ಹೇಳಿದ್ದಾರೆ.

dcm-dk-shivakumar

ಪಕ್ಷದ ಮತ ಪ್ರಮಾಣ ಹೆಚ್ಚಿಸಿಕೊಳ್ಳಿ ಎಂದು ನಮ್ಮ ಕಾರ್ಯಕರ್ತರಿಗೆ ಸಂದೇಶ ನೀಡಿದ್ದೇವೆ. ಹೀಗಾಗಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಸೇರ್ಪಡೆ ಮಾಡಿಕೊಳ್ಳಲು ತಿಳಿಸಿದ್ದೇನೆ. ಉಳಿದಂತೆ ನನ್ನವರೆಗೂ ಯಾರದೇ ಪಕ್ಷ ಸೇರ್ಪಡೆ ವಿಚಾರ ಬಂದಿಲ್ಲ ಎಂದು ತಿಳಿಸಿದರು.

ನೀವು ಬೇರೆ ಪಕ್ಷದ ಶಾಸಕರ ಜೊತೆ ಖುದ್ದಾಗಿ ಮಾತನಾಡಿದ್ದೀರಿ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಿಮ್ಮ ಮಾಹಿತಿ ಸಂಪೂರ್ಣ ಸುಳ್ಳು. ಬಿಜೆಪಿಯವರು ಯಾರ ಜೊತೆ ಮಾತನಾಡಿದ್ದಾರೆ ಎಂಬುದರ ಬಗ್ಗೆ ನೀವು ಚರ್ಚೆ ಮಾಡುತ್ತಿಲ್ಲ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ಅವರು ಭಾವಿಸಿದ್ದಾರೆ. ಅವರು ಕಲಿಸಿ ಕೊಟ್ಟಿರುವ ಪಾಠ ನಮಗೆ ನೆನಪಿದೆ. ಜನ ನಮಗೆ 135 ಸಂಖ್ಯಾಬಲ ನೀಡಿದ್ದಾರೆ.

ನಾವು ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಬಿಜೆಪಿ ಹಾಗೂ ದಳದವರಿಗೆ ನೆಮ್ಮದಿ ಇಲ್ಲ. ಅದಕ್ಕೆ ಅವರೇ ಔಷಧಿ ಕಂಡುಕೊಳ್ಳಬೇಕು. ಗೆದ್ದಿರುವವರು, ಸೋತಿರುವವರು ಮಾತನಾಡುತ್ತಿದ್ದಾರೆ. ಯಾರು ಏನು ಮಾತನಾಡುತ್ತಿದ್ದಾರೆ ಎಂದು ನಾವು ಗಮನಿಸುತ್ತಿದ್ದೇವೆ. ನಾವು ಯಾರ ಮಾತಿಗೂ ಬೀಗ ಹಾಕುವುದಿಲ್ಲ ಎಂದು ತಿಳಿಸಿದರು.

ಬಿಜೆಪಿ ನಾಯಕರು ಸರ್ಕಾರ ಬೀಳಿಸುವ ಪ್ರಯತ್ನ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ಸಾಬೀತುಪಡಿಸಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದ ಅವರು, ಜೆಡಿಎಸ್ ನ 13 ಶಾಸಕರು ನಿಮ್ಮ ಸಂಪರ್ಕದಲ್ಲಿದ್ದು, ಮುಂದೆ ಅವರು ನಿಮಗೆ ಬೆಂಬಲ ನೀಡಲಿದ್ದಾರೆ ಎಂಬ ಮಾಹಿತಿ ಇದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಈ ವಿಚಾರ ನನಗೆ ಗೊತ್ತಿಲ್ಲ. ನಿಮ್ಮಿಂದಲೇ ಈಗ ಮಾಹಿತಿ ಕೇಳುತ್ತಿದ್ದೇನೆ. ನನಗೆ 224 ಶಾಸಕರು ಪರಿಚಯಸ್ಥರು. ಎಲ್ಲರ ಜತೆ ರಾಜಕೀಯವಾಗಿ ಅಲ್ಲದಿದ್ದರೂ ವೈಯಕ್ತಿಕ ಸಂಬಂಧ ಇದೆ. ಅವರ ಹೆಸರಿಗೆ ನಾವು ಧಕ್ಕೆ ಯಾಕೆ ತರೋಣ? ಎಂದು ತಿಳಿಸಿದರು.

40% ಕಮಿಷನ್ ವಿಚಾರ ತನಿಖೆಗೆ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚನೆ ಕುರಿತು ಮಾತನಾಡಿ, ಈ ವಿಚಾರವಾಗಿ ನಾನು ಏನನ್ನೂ ಹೇಳುವುದಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಉತ್ತರ ನೀಡಲಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ತನಿಖೆಗೆ ಸಮಿತಿ ರಚನೆ ಮಾಡಿದ್ದು, ಅವರು ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+