ಅರಸು ದಾಖಲೆ ಮುರಿದ ಸಿದ್ದರಾಮಯ್ಯಗೆ ಶುಭವಾಗಲಿ, ಗುಡ್ ಲಕ್ ಎಂದ ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಿದ್ದಾರೆ. ದೇವರಾಜ ಅರಸು ದಾಖಲೆಯನ್ನ ಮುರಿದಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ ಆಗಿದ್ದರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ. ಇದೇ ಹೊತ್ತಲಿ ಸಿದ್ದರಾಮಯ್ಯ ಅವರು ಪೂರ್ಣಾವಧಿ ಪೂರೈಸೋ ವಿಶ್ವಾಸವನ್ನ ವ್ಯಕ್ತಪಸಿದ್ದು, ಸಿಎಂ ರೇಸ್‌ನಲ್ಲಿರುವ ಡಿ ಕೆ ಶಿವಕುಮಾರ್ ಸಿದ್ದರಾಮಯ್ಯಗೆ ಶುಭಕೋರಿದ್ದಾರೆ.
ಸದಾಶಿವನಗರ ನಿವಾಸ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಾತನಾಡಿ, ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್ ಎಂದು ಹೇಳಿದರು. ಪೂರ್ಣಾವಧಿಗೆ ನಾನೇ ಸಿಎಂ ಎಂಬ ಹೇಳಿಕೆ ಕುರಿತು ನೀವುಗಳು (ಮಾಧ್ಯಮಗಳು) ಗೊಂದಲ ಮಾಡಿಕೊಳ್ಳುತ್ತಿದ್ದೀರಿ. ನಮಲ್ಲಿ ಯಾರಿಗೂ ಗೊಂದಲವಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ನಿರ್ಮಿಸುತ್ತಿ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಸಿದ್ದರಾಮಯ್ಯ ಅವರಿಗೆ ಯಶಸ್ಸಾಗಲಿ, ಒಳ್ಳೆಯದಾಗಲಿ. ಅವರಿಗೆ ಹೆಚ್ಚು ಆರೋಗ್ಯ ಸಿಗಲಿ, ಜನರ ಸೇವೆ ಮಾಡುವ ಅವಕಾಶವನ್ನು ಭಗವಂತ ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ಕುಮಾರಸ್ವಾಮಿ ಜೇಬಲ್ಲೇ ಐಟಿ ಇಲಾಖೆ ಇದೆಯಲ್ಲಾ?
ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ನೀಡಿದ ಪರಿಹಾರ ಹಣ ಮೂಲ ಕಾಂಗ್ರೆಸ್ ಪಕ್ಷದ್ದೋ, ಸರ್ಕಾರದಿಂದಲೋ? ಐಟಿ ಇಲಾಖೆ ಏನು ಮಾಡುತ್ತಿದೆ ಎನ್ನುವ ಕುಮಾರಸ್ವಾಮಿ ಹಾಗೂ ಪ್ರತಿಪಕ್ಷಗಳ ಆರೋಪದ ಕುರಿತು ಮಾತನಾಡಿ, ಐಟಿ ಸೇರಿದಂತೆ ಇತರೇ ಎಲ್ಲಾ ಇಲಾಖೆಗಳು ವಿರೋಧ ಪಕ್ಷಗಳ ಹತ್ತಿರವೇ ಇದೆಯಲ್ಲವೇ? ಕುಮಾರಸ್ವಾಮಿ ಜೇಬಲ್ಲೇ ಇದ್ದಾವಲ್ಲ? ಪರಿಹಾರ ಹಣದ ಬಗ್ಗೆ ಜಮೀರ್ ಅವರ ಬಳಿ ಮಾತನಾಡುತ್ತೇನೆ ಎಂದು ಉತ್ತರಿಸಿದರು.
ಬಳ್ಳಾರಿ ಭೇಟಿಯ ಕುರಿತು ಮಾತನಾಡಿ, ನಮಗೆ ಈ ರಾಜ್ಯದಲ್ಲಿರುವ ಹಾಗೂ ಬಳ್ಳಾರಿಯಲ್ಲಿ ಶಾಂತಿಯುತ ವಾತಾವರಣ ಉಳಿಯಬೇಕು. ಬಿಜೆಪಿಯವರು ಹತಾಶರಾಗಿ ಎಲ್ಲಾ ಕಡೆ ಇಂತಹ ಪ್ರಯತ್ನ ನಡೆಸುತ್ತಿದ್ದಾರೆ. ಅಲ್ಲಿ ಹೋಗಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.












Click it and Unblock the Notifications