DK Shivakumar Tweet: ಕರ್ನಾಟಕ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಡಿಸಿಎಂ ಡಿ.ಕೆ ಶಿವಕುಮಾರ್ ಟ್ವೀಟ್

DK Shivakumar Tweet: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ - ರಾಜಕೀಯ ಚರ್ಚೆಯು ಸದ್ದಿಲ್ಲದೆ ಕಾವು ಪಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ.

ಕಳೆದ ಐದಾರು ತಿಂಗಳಿನಿಂದಲೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಒಂದು ಸಾಲಿನ ಟ್ವೀಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವುದು ಇದೆ. ಈಗ ಅವರು ಮಾಡಿರುವ ಟ್ವೀಟ್‌ಗೂ ಕನ್ನಡಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

DK Shivakumar Tweet

ಇಷ್ಟು ಶಾಸಕರೂ ನನ್ನ ಬೆಂಬಲ

ಮುಖ್ಯಮಂತ್ರಿಯೂ ಸೇರಿದಂತೆ 139 ಶಾಸಕರೂ ನನ್ನ ಬಲ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ, ಸಿಎಂ ಸೇರಿ 139 ಶಾಸಕರೂ ನನ್ನ ಬಲ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ 139 ಶಾಸಕರೂ ನನ್ನ ಬಲ. ಸಿಎಂ ಸಿದ್ದರಾಮಯ್ಯ ಅವರು ಶೇ 100ರಷ್ಟು ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ನಾವಿಬ್ಬರೂ ಪರಸ್ಪರ ಕೈಜೋಡಿಸಿ, ಜತೆಯಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ಮುಂದೆಯೂ ಕೆಲಸ ಮಾಡುತ್ತೇವೆ. ನಾವು ಜನಕ್ಕೆ ಮಾತು ಕೊಟ್ಟಿದ್ದು, ಆ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆಯುತ್ತಿದ್ದೇವೆ, ಮುಂದೆಯೂ ನಡೆಯುತ್ತೇವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಡಿ.ಕೆ ಶಿವಕುಮಾರ್ ಟ್ವೀಟ್‌ಗೆ ಕನ್ನಡಿಗರ ಪ್ರತಿಕ್ರಿಯೆ ಹೇಗಿದೆ ?

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಟ್ವೀಟ್‌ಗೆ ಕನ್ನಡಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಡಿ.ಕೆ ಶಿವಕುಮಾರ್‌ ಅವರ ಅಭಿಮಾನಿಗಳು ಅಣ್ಣ ನೀವು ಮುಖ್ಯಮಂತ್ರಿ ಆಗುತ್ತಿರೋ ಇಲ್ಲವೋ ಹೇಳಿ ಎಂದಿದ್ದಾರೆ. ಹೋಗ್ಲಿ ಬಿಡಣ್ಣ, ಎಲ್ಲರೂ ನನ್ನ ಜೊತೆಗಿದ್ದಾರೆ ಎನ್ನುವ ಭ್ರಮೆಯಲ್ಲಿರುವುದು ಕೂಡ ಒಳ್ಳೆಯದು. ಅಂದಹಾಗೆ, ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಂದಕ್ಕೆ ಹೋಗಿದ್ದು ಏಕೆ ಎಂದು ಚೆಲುವೆಗೌಡ ಎನ್ನುವವರು ವ್ಯಂಗ್ಯವಾಗಿ ಕಾಮೆಂಟ್ ಮಾಡಿದ್ದಾರೆ.

ಡಿ.ಕೆ ಸುರೇಶ್ ಟ್ವೀಟ್ ರಾಜಕೀಯ ಚರ್ಚೆ

ಇನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ ಸುರೇಶ್ ಅವರ ಟ್ವೀಟ್‌ ಸಹ ಈಚೆಗೆ ಭಾರೀ ಚರ್ಚೆಗೆ ಕಾರಣವಾಗಿತ್ತು. ತಾಳ್ಮೆಯನ್ನು ಅಸಹಾಯಕತೆ ಅಂದುಕೊಳ್ಳಬಾರದು. ತಾಳ್ಮೆಯ ಹಿಂದಿನ ತಯಾರಿ ಬಹಳ ಗಟ್ಟಿಯಾಗಿರುತ್ತದೆ ಎಂದು ಡಿ.ಕೆ ಸುರೇಶ್ ಅವರು ಈಚೆಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿಕೊಂಡಿದ್ದರು. ಈ ಟ್ವೀಟ್ ಸಹ ರಾಜಕೀಯವಾಗಿ ಭಾರೀ ಚರ್ಚೆಗೆ ಕಾರಣವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+