ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುತ್ರನ ಆರೋಗ್ಯ ಗಂಭೀರ: ಡಿಸಿಎಂ ಗೋವಿಂದ ಕಾರಜೋಳ ಮನ ಮಿಡಿಯುವ ಪೋಸ್ಟ್

|
Google Oneindia Kannada News

ಉಪಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಖಾತೆಯ ಸಚಿವ ಗೋವಿಂದ ಕಾರಜೋಳ ಅವರಿಗೆ ಒಂದೆಡೆ ಮನೆಮಂದಿಗೆಲ್ಲಾ ಕೊರೊನಾ ಸಮಸ್ಯೆ. ಇನ್ನೊಂದೆಡೆ, ಸಾರ್ವಜನಿಕ ವಲಯದಲ್ಲಿ ಎದುರಾಗುತ್ತಿರುವ ಟೀಕೆ.

ಶಿರಾ ಅಸೆಂಬ್ಲಿ ಕ್ಷೇತ್ರದ ಉಪಚುನಾವಣೆಯ ಪಕ್ಷದ ಅಭ್ಯರ್ಥಿ ಡಾ.ರಾಜೇಶ್ ಗೌಡ ನಾಮಪತ್ರ ಸಲ್ಲಿಕೆಯ ವೇಳೆ ಹಾಜರಾಗಿದ್ದ ಕಾರಜೋಳ ಅವರಿಗೆ, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡದೇ ಇರುವ ಆಪಾದನೆ ಎದುರಾಗಿದೆ. ಈ ಸಂದರ್ಭದಲ್ಲಿ ಕಾರಜೋಳ, ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಅದರ ಯಥಾವತ್ ಕಾಪಿ ಹೀಗಿದೆ:

ಡಿಸಿಎಂಗೋವಿಂದ ಕಾರಜೋಳ ಪುತ್ರ ಡಾ.ಗೋಪಾಲ ಸ್ಥಿತಿ ಗಂಭೀರಡಿಸಿಎಂಗೋವಿಂದ ಕಾರಜೋಳ ಪುತ್ರ ಡಾ.ಗೋಪಾಲ ಸ್ಥಿತಿ ಗಂಭೀರ

ಸಾರ್ವಜನಿಕ ಬದುಕಿನಲ್ಲಿರುವವರ ವೈಯಕ್ತಿಕ ಸಂತಸ- ಸಂಕಟಗಳು ಸಾರ್ವಜನಿಕರಿಗೆ ಅಷ್ಟಾಗಿ ತಿಳಿದಿರುವುದಿಲ್ಲ. ಸಂತಸಗಳು ಕೆಲವೊಮ್ಮೆ ಹೊರಗೆ ಬರುತ್ತವೆ. ಆದರೆ ಸಂಕಷ್ಟಗಳು ಯಾವತ್ತಿಗೂ ಅನಾಥ. ಅದನ್ನು ಅನುಭವಿಸಿದರಿಗಷ್ಟೇ ಅದರ ಪ್ರಖರತೆ ಗೊತ್ತು. ಇದ ಪರಿಣಾಮವಾಗಿ ಸಾರ್ವಜನಿಕ ಬದುಕಿನಲ್ಲಿರುವವರ ಹಾಜರಿ ಅಥವಾ ಗೈರುಹಾಜರಿಗಳನ್ನು ಕನ್ನಡಕ ಹಾಕಿ ನೋಡುವ ಪ್ರೌವೃತ್ತಿ ಹೆಚ್ಚಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಲಾರದು.

ಜನರ ತೀವ್ರ ಆಕ್ರೋಶಕ್ಕೆ ಗುರಿಯಾಯ್ತು ಡಿಸಿಎಂ ಗೋವಿಂದ್ ಕಾರಜೋಳ್ ನಡೆ!ಜನರ ತೀವ್ರ ಆಕ್ರೋಶಕ್ಕೆ ಗುರಿಯಾಯ್ತು ಡಿಸಿಎಂ ಗೋವಿಂದ್ ಕಾರಜೋಳ್ ನಡೆ!

ನನ್ನ ಪುತ್ರ ಡಾ. ಗೋಪಾಲ ಕಾರಜೋಳ ಕಳೆದ 23 ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನನ್ನ ಧರ್ಮ ಪತ್ನಿ ಕೂಡಾ ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಆಸ್ಪತ್ರೆಯಿಂದ ಹಿಂದಿರುಗಿದ್ದಾರೆ. ನಾನೂ ಕೂಡಾ ಕೋವಿಡ್ 19ಕ್ಕೆ ಒಳಗಾಗಿ ಗುಣಮುಖನಾಗಿ ಹಿಂದಿರುಗಿದ್ದೇನೆ. ಮುಂದೆ ಓದಿ...

ನಮ್ಮ ಕುಟುಂಬದ ಒಟ್ಟಾರೆ 8 ಮಂದಿಗೆ ಕೊರೊನಾ ಸೋಂಕು

ನಮ್ಮ ಕುಟುಂಬದ ಒಟ್ಟಾರೆ 8 ಮಂದಿಗೆ ಕೊರೊನಾ ಸೋಂಕು

ನಮ್ಮ ಕುಟುಂಬದಲ್ಲಿ ಒಟ್ಟಾರೆ 8 ಮಂದಿ ಕೊರೊನಾ ಸೋಂಕಿನಿಂದ ಒಳಗಾಗಿದ್ದೇವೆ. ಇದು ವಸ್ತುಸ್ಥಿತಿ. ಇಂತಹ ಗತ್ಯಂತರ ಸಂದರ್ಭದಲ್ಲಿ ನಾನು ಎಲ್ಲೂ ಹೊರಗಡೆ ಹೋಗುವುದು ಸೂಕ್ತವಲ್ಲ. ಅನಿವಾರ್ಯವಿದ್ದ ಪ್ರಸಂಗದಲ್ಲಿ ಮಾತ್ರ ಮುನ್ನೆಚ್ಚರಿಕೆಯಿಂದ ಆಯಾಸವಾಗದಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ವೈದ್ಯರು ಸಲಹೆ ಇದೆ. ದೂರದ ಪ್ರಯಾಣ ನಿಷಿದ್ಧ ಎಂಬುದು ವೈದ್ಯರು ಕೊಟ್ಟಿರುವ ಎಚ್ಚರಿಕೆ. ಈ ಎಲ್ಲಾ ಅಂಶಗಳು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರ ಗಮನದಲ್ಲಿದೆ. ಅವರೂ ಕೂಡಾ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಸೂಚಿಸಿದ್ದಾರೆ.

ಪ್ರವಾಹ ಪೀಡಿತ ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ ಹಾಗೂ ವಿಜಯಪುರ

ಪ್ರವಾಹ ಪೀಡಿತ ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ ಹಾಗೂ ವಿಜಯಪುರ

ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುವುದೇನೆಂದರೆ ಪ್ರವಾಹ ಪೀಡಿತ ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಂತ್ರಸ್ತರ ಪರಿಹಾರಕ್ಕೆ ಕೈಗೊಳ್ಳಬೇಕಾದ ಮಾರ್ಗೋಪಾಯಗಳನ್ನು ಜಿಲ್ಲಾಡಳಿತಕ್ಕೆ ಖಚಿತವಾಗಿ ನಿರ್ದೇಶಿಸಿದ್ದೇನೆ. ಅದರ ಸತತ ಉಸ್ತುವಾರಿಯಲ್ಲಿ ಇದ್ದೇನೆ. ಪರಿಸ್ಥಿತಿಯ ಅನಿವಾರ್ಯತೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ನಾನು ಭೇಟಿ ನೀಡಿಲ್ಲದಿರಬಹುದು ಆದರೆ ಜವಾಬ್ದಾರಿಯಿಂದ ಉಪಮುಖ್ಯಮಂತ್ರಿಯಾಗಿ, ಜಿಲ್ಲಾಉಸ್ತುವಾರಿ ಸಚಿವರಾಗಿ ತ್ರಿಕರನ ಸುದ್ದಿಯಿಂದ ನೊಂದವರ ಪರಿಹಾರಕ್ಕೆ ಶ್ರಮಿಸುತ್ತಿದ್ದೇನೆ.

ಟೀಕೆ ಟಿಪ್ಪಣಿಗಳಿಂದ ಸಂತ್ರಸ್ತರ ಪರಿಹಾರ ಕಾರ್ಯ ಆಗಲಾರದು

ಟೀಕೆ ಟಿಪ್ಪಣಿಗಳಿಂದ ಸಂತ್ರಸ್ತರ ಪರಿಹಾರ ಕಾರ್ಯ ಆಗಲಾರದು

ಮಾತುಗಳಿಂದ ಇಲ್ಲವೇ ಘೋಷಣೆಗಳಿಂದ ಅಥವಾ ಟೀಕೆ ಟಿಪ್ಪಣಿಗಳಿಂದ ಸಂತ್ರಸ್ತರ ಪರಿಹಾರ ಕಾರ್ಯ ಆಗಲಾರದು. ಅದಕ್ಕೆ ಬೇಕಾದುದು ಸರ್ಕಾರದ ದೃಢ ಸಂಕಲ್ಪ. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಟೀಕೆ ಟಿಪ್ಪಣಿಗಳಿಗೆ ಮಾರುಹೋಗದೇ ಸರ್ಕಾರದ ವಿಶ್ವಾಸಾರ್ಹ ಕ್ರಮಗಳನ್ನು ಗಮನಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಯುಗಾದಿಯಿಂದ ಆರಂಭವಾದ ಈ ಕೊರೊನಾ ವೈರಾಣು ನಿವಾರಣೆ ಹಾಗೂ ನೊಂದವರ ಕಲ್ಯಾಣಕ್ಕೆ ನಾನು ಕೈಗೊಂಡಿರುವ ಕಾರ್ಯ, ಪರಿಹಾರಕ್ರಮಗಳು ಎಲ್ಲರಿಗೂ ಗೊತ್ತಿರುವ ಸಂಗತಿ.

ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ್ದನ್ನು ಸ್ಮರಿಸಬೇಕು. 2009ರ ಅತಿವೃಷ್ಟಿ ಸಂದರ್ಭದ ಪರಿಸ್ಥಿತಿಯಲ್ಲಿ ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಸಂತ್ರಸ್ತರ ರಕ್ಷಣಾ ಕಾರ್ಯ, ಪರಿಹಾರಕಾರ್ಯಗಳನ್ನು ಕೈಗೊಂಡಿರುವ ಕ್ರಮದ ಬಗ್ಗೆ ತಮ್ಮಲ್ಲರಿಗೂ ತಿಳಿದ ಸಂಗತಿಯಾಗಿದೆ. ವರ್ತಮಾನದ ಒಂದು ಘಟನೆಯಿಂದಷ್ಟೇ ವ್ಯಕ್ತಿಯನ್ನು ಅಳೆಯಲು ಹೋಗಬಾರದು.

Recommended Video

Political Popcorn with Lavanya : Dr BL Shankar, ಈಗ ಆಗಿರೋದೆ ಸಾಕು ಇನ್ಮೇಲೆ ಚುನಾವಣೆಗೆ ನಿಲ್ಲಲ್ಲಾ!?! Part2
ಸೇವೆ ನನ್ನದು - ಸ್ವೀಕಾರ ನಿಮ್ಮದು. ಗೋವಿಂದ ಎಂ ಕಾರಜೋಳ, ಉಪಮುಖ್ಯಮಂತ್ರಿಗಳು

ಸೇವೆ ನನ್ನದು - ಸ್ವೀಕಾರ ನಿಮ್ಮದು. ಗೋವಿಂದ ಎಂ ಕಾರಜೋಳ, ಉಪಮುಖ್ಯಮಂತ್ರಿಗಳು

ಹಿಂದಿನ ವಿದ್ಯಾಮಾನಗಳು ಈಗಿನ ಸ್ಥಿತಿಯನ್ನು ಗುರುತಿಸಲು ಯಾವತ್ತಿಗೂ ನಿರ್ಣಾಯಕ ಎಂಬುದು ನನ್ನ ತಿಳುವಳಿಕೆ. ಈ ಸಂದರ್ಭದಲ್ಲಿ ಪರಂಪರೆಯ ಬೆಳಕಿನಲ್ಲಿ ವರ್ತಮಾನದ ಕತ್ತಲನ್ನು ಓಡಿಸಿ ಭವಿಷ್ಯಕ್ಕೆ ಬೆಳಕನ್ನು ತರುವ ಕಡೆ ಸರ್ಕಾರದ ಆಡಳಿತ ಯಂತ್ರವನ್ನು ಬಳಸಿಕೊಂಡು ಮುನ್ನಡೆಯುವುದು ನಾನು ತೊಟ್ಟಿರುವ ಧೀಕ್ಷೆ. ಇದಕ್ಕೆ ಇಡೀ ಕರ್ನಾಟಕದ ಜನತೆಯ ಆರೈಕೆ/ ಹಾರೈಕೆ ಅಗತ್ಯ. ಸೇವೆ ನನ್ನದು - ಸ್ವೀಕಾರ ನಿಮ್ಮದು. ಗೋವಿಂದ ಎಂ ಕಾರಜೋಳ, ಉಪಮುಖ್ಯಮಂತ್ರಿಗಳು.

English summary
DCM Govind Karjol FB Post On His Family Health Status And Three District Flood Relief Action.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X