ಚಂದನ ವಾಹಿನಿಯಲ್ಲಿ ವಿಡಿಯೋ ಪಾಠ ಪ್ರಸಾರ; ವೇಳಾಪಟ್ಟಿ
ಬೆಂಗಳೂರು, ಜುಲೈ 02; ಕರ್ನಾಟಕ ಸರ್ಕಾರ ಎಸ್. ಎಸ್. ಎಲ್. ಸಿ. ಪರೀಕ್ಷಾ ದಿನಾಂಕಗಳನ್ನು ಘೋಷಣೆ ಮಾಡಿದೆ. 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಮನೆಯಲ್ಲಿಯೇ ಕಲಿಕೆಯಲ್ಲಿ ತೊಡಗಿದ್ದಾರೆ. ದೂರದರ್ಶನ ಚಂದನ ವಾಹಿನಿ ವಿಡಿಯೋ ಪಾಠದ ಮೂಲಕ ವಿದ್ಯಾರ್ಥಿಗಳಿಗೆ ನೆರವಾಗಲಿದೆ.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಶಾಲೆಗಳು ಆರಂಭವಾಗಿಲ್ಲ. 10ನೇ ತರಗತಿ ಪರೀಕ್ಷಾ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಮಕ್ಕಳು ಮನೆಯಲ್ಲಿಯೇ ಅಭ್ಯಾಸಗಳನ್ನು ಮುಂದುವರೆಸಬೇಕಿದೆ.
ಕಳೆದ ವರ್ಷದಂತೆ ಈ ವರ್ಷವೂ ಸಹ ದೂರದರ್ಶನ ಚಂದನ ವಾಹಿನಿ ವಿಡಿಯೋ ಪಾಠಗಳನ್ನು 1 ರಿಂದ 10ನೇ ತರಗತಿಯವರೆಗೆ ಪ್ರಸಾರ ಮಾಡಲು ಕ್ರಮ ಕೈಗೊಂಡಿದೆ. ಜುಲೈ 5ರಿಂದ ವಿಡಿಯೋ ಪಾಠಗಳಲ್ಲಿ ವೀಕ್ಷಣೆ ಮಾಡಲಾಗುತ್ತದೆ.

ದೂರದರ್ಶನ ಚಂದನ ವಾಹಿನಿಯಲ್ಲಿ 1 ರಿಂದ 10 ನೇ ತರಗತಿಯವರೆಗೆ ಜುಲೈ 5 ರಿಂದ ವೀಡಿಯೋ ಪಾಠಗಳನ್ನು ಪ್ರಸಾರ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ವೀಕ್ಷಣೆ ಮಾಡಿ, ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಈ ಕಾರ್ಯಕ್ರಮ ಸದುಪಯೋಗವಾಗಲು ಶಿಕ್ಷಕರು, ಪೋಷಕರು ಹಾಗೂ ಸಮುದಾಯ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಅಂದಹಾಗೆ ಈ ಬಾರಿಯ ಎಸ್. ಎಸ್. ಎಲ್. ಸಿ. ಪರೀಕ್ಷೆ ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆಯಂತೆ ಜುಲೈ 19 ಮತ್ತು 22 ರಂದು ನಡೆಯಲಿದೆ. 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತದೆ.
ವಿಡಿಯೋ ಕ್ಲಾಸ್ ವೇಳಾಪಟ್ಟಿ ಇಲ್ಲಿದೆ
ದೂರದರ್ಶನ ಚಂದನ ವಾಹಿನಿಯಲ್ಲಿ 1 ರಿಂದ 10 ನೇ ತರಗತಿಯವರೆಗೆ ಜುಲೈ 5 ರಿಂದ ವೀಡಿಯೋ ಪಾಠಗಳನ್ನು ಪ್ರಸಾರ ಮಾಡಲಿದ್ದು, ವೇಳಾಪಟ್ಟಿಯ ವಿವರ ಇಲ್ಲಿದೆ.@CMofKarnataka @ddchandanabng pic.twitter.com/uBE3tfLCZ4
— DIPR Karnataka (@KarnatakaVarthe) July 2, 2021












Click it and Unblock the Notifications