ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 22 : ಡಾ.ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು.

ಶುಕ್ರವಾರ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ನೇತೃತ್ವದ ಪೀಠ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಇದರಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ 2 ಎಫ್‌ಐಆರ್, ಏನಿದು ಪ್ರಕರಣ?ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ 2 ಎಫ್‌ಐಆರ್, ಏನಿದು ಪ್ರಕರಣ?

De-notification case : HC puts a interim stay on ACB FIR against Yeddyurappa

ಎಸಿಬಿ ಎಫ್ಐಆರ್ ದಾಖಲು ಮಾಡಲು ವಿಳಂಬ ಮಾಡಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪವನ್ನು ಸಾಬೀತು ಮಾಡಲು ಅಗತ್ಯ ದಾಖಲೆಗಳನ್ನು ನೀಡಿಲ್ಲ ಎಂಬ ಅಂಶಗಳನ್ನು ಪರಿಗಣಿಸಿರುವ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್, ಸರ್ಕಾರದ ಸ್ಪಷ್ಟನೆಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್, ಸರ್ಕಾರದ ಸ್ಪಷ್ಟನೆ

ಡಾ.ಡಿ.ಅಯ್ಯಪ್ಪ ಎಂಬುವವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಜೂನ್ನಲ್ಲಿ ನೀಡಿದ್ದ ದೂರಿನ ಅನ್ವಯ ಎರಡು ಎಫ್ಐಆರ್ ಗಳನ್ನು ಎಸಿಬಿ ದಾಖಲು ಮಾಡಿತ್ತು. ಈ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಪ್ರಕರಣದಲ್ಲಿ ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದ್ದರು. ಎಸಿಬಿ ಪರವಾಗಿ ಹಿರಿಯ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಯಡಿಯೂರಪ್ಪ ಬಂಧಿಸದಂತೆ ಹೈಕೋರ್ಟ್ ಎಸಿಬಿಗೆ ಸೂಚನೆ ನೀಡಿತ್ತು.

ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

ಏನಿದು ಪ್ರಕರಣ? : ಬೆಂಗಳೂರಿನಲ್ಲಿ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ಹೊರಡಿಸಲಾಗಿದ್ದ ಅಧಿಸೂಚನೆಯನ್ನು ನಿಯಮ ಬಾಹಿರವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂಬುದು ಆರೋಪವಾಗಿದೆ. ಬಿ.ಎಸ್.ಯಡಿಯೂರಪ್ಪ ಮತ್ತು ಇತರ 6 ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳು.

ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಹೋಬಳಿ, ಅವಲಹಳ್ಳಿ ಗ್ರಾಮದ ಸರ್ವೆ ನಂಬರ್ 109/1ರಲ್ಲಿನ 3ಎಕರೆ ಜಮೀನನ್ನು ಡಿನೋಟಿಕೇಷನ್ ಮಾಡಲಾಗಿದೆ ಎಂದು ಎಫ್ಐಆರ್&ನಲ್ಲಿ ಉಲ್ಲೇಖಿಸಲಾಗಿದೆ. 2009 ರಿಂದ 2012ರ ನಡುವೆ ಅಕ್ರಮ ನಡೆದಿದೆ ಎಂದು ಎಫ್ಐಆರ್‌ನಲ್ಲಿ ತಿಳಿಸಲಾಗಿದೆ.

English summary
The High Court of Karnataka on Friday granted interim stay to Anti Corruption Bureau (ACB) FIR against B.S. Yeddyurappa in connection with Dr.K.Shivarama Karanth layout land de-notification case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X