ಬಿಎಸ್‌ವೈಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ ಆದೇಶ
ಬೆಂಗಳೂರು, ನವೆಂಬರ್, 24: ಮಾಜಿ ಸಿಎಂ, ಸಂಸದ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ರಾಜ್ಯಪಾಲರಾದ ಹಂಸರಾಜ್ ಭಾರದ್ವಾಜ್ ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ರದ್ದು ಮಾಡಿದೆ.
ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಪೀಠದ ಹಂಗಾಮಿ ಸಿಜೆ ಎಸ್ ಕೆ ಮುಖರ್ಜಿ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.[ಬೆಂಗಳೂರಲ್ಲಿ ಪೊಲೀಸರಿಂದ ಯಡಿಯೂರಪ್ಪ ಬಂಧನ]

ಭೂ ಹಗರಣ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಕಾರಣ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ಕೋರಿ ವಕೀಲರಾದ ಸಿರಾಜಿನ್ ಬಾಷಾ ಹಾಗೂ ಬಾಲರಾಜ್ ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಗೆ ಮನವಿ ಸಲ್ಲಿಕೆ ಮಾಡಿದ್ದರು. ಇದನ್ನು ರಾಜ್ಯಪಾಲರು ನಂತರ ಪುರಸ್ಕರಿಸಿದ್ದರು.
ಇದಾದ ಮೇಲೆ ರಾಜ್ಯದಲ್ಲಿ ಗಮನಾರ್ಹ ರಾಜಕೀಯ ಬೆಳವಣಿಗೆಗಳಿ ನಡೆದು ಹೋಗಿದ್ದವು. ಬಿಎಸ್ ವೈ ಅಧಿಕಾರ ಕಳೆದುಕೊಳ್ಳಬೇಕಾಗಿ ಬಂದಿತ್ತು. ರದ್ದು ಕೋರಿ ಬಿಎಸ್ ವೈ ಸಲ್ಲಿಕೆ ಮಾಡಿದ್ದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.[ಬಿಎಸ್ ವೈ ವಿರುದ್ಧ 13ನೇ ಎಫ್ ಐಆರ್]
ಯಡಿಯೂರಪ್ಪ ಅವರ ಮೇಲಿನ 5 ಪ್ರಕರಣಗಳು ರದ್ದಾದ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಸದ್ಯ ನಿರಾಳವಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತಂದಿದ್ದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಿಂದ ಯಡಿಯೂರಪ್ಪ ಹೊರಬಂದಂತಾಗಿದೆ. ಇದು ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣ ಮತ್ತು ಬಿಜೆಪಿ ರಾಜಕಾರಣದ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications