ಶಾಲೆಯಲ್ಲಿ ಸುರಕ್ಷೆ: ಗಡುವು ಮುಗಿದರೂ ಮಾಹಿತಿ ಸಿಕ್ಕಿಲ್ಲ
ಬೆಂಗಳೂರು, ಡಿ. 1: ರಾಜ್ಯಾದ್ಯಂತ ಶಾಲೆಗಳಲ್ಲಿ ಮಕ್ಕಳ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಸಂಚಲನ ಉಂಟುಮಾಡಿತ್ತು. ಆದರೆ, ಸರ್ಕಾರ ನೀಡಿದ್ದ ಗಡುವು ಶನಿವಾರವೇ ಅಂತ್ಯವಾಗಿದ್ದರೂ ಶಾಲೆಗಳಲ್ಲಿ ಕೈಗೊಳ್ಳಲು ಸೂಚಿಸಿದ್ದ ಸುರಕ್ಷತಾ ಕ್ರಮಗಳ ಜಾರಿ ಮಾತ್ರ ಆಮೆ ವೇಗದಲ್ಲಿ ಸಾಗಿದೆ. [ಬಾಲಕಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ]
ಸರ್ಕಾರ ಸೂಚಿಸಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡು ವೆಬ್‌ಸೈಟ್‌ನಲ್ಲಿ ಅಳವಡಿಸಿದ ಶಾಲೆಗಳ ಸಂಖ್ಯೆ ಶೇ. 10 ಮಾತ್ರ. ಇಲಾಖೆಯ ಮಾಹಿತಿಯಂತೆ ರಾಜ್ಯಾದ್ಯಂತ ಅನುದಾನಿತ ಹಾಗೂ ಅನುದಾನ ರಹಿತ ಸೇರಿ 21, 893 ಶಾಲೆಗಳಿವೆ. ಆದರೆ ಸುರಕ್ಷತಾ ಕ್ರಮಗಳ ಕುರಿತು ವಿವರಣೆ ನೀಡಿರುವ ಶಾಲೆಗಳ ಸಂಖ್ಯೆ 2,300.
ಆದರೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೇಳುವ ಪ್ರಕಾರ ಸರ್ವರ್‌ನ ವೇಗ ಅತ್ಯಂತ ದುರ್ಬಲಗೊಂಡಿರುವುದೇ ಮಾಹಿತಿ ಅಳವಡಿಕೆ ನಿಧಾನವಾಗಲು ಕಾರಣ. [ಚನ್ನಮ್ಮ ಶಾಲೆಯಲ್ಲಿ ಅಡುಗೆ ಭಟ್ಟನಿಂದ ಲೈಂಗಿಕ ದೌರ್ಜನ್ಯ]

ಸರ್ಕಾರದ ಸೂಚನೆಯಂತೆ ಮೂವರು ಸದಸ್ಯರ ಸಮಿತಿ ಸಾಕಷ್ಟು ಶಾಲೆಗಳಿಗೆ ಭೇಟಿ ನೀಡಿವೆ. ಪ್ರತಿ ಶಾಲೆಗೆ 2 ಗಂಟೆಗಳಂತೆ ಸಮಯ ತಗಲುತ್ತದೆ. ಆದರೆ, ಕೆಲವು ಶಾಲೆಗಳಲ್ಲಿ ಆಡಳಿತ ಮಂಡಳಿ ಸದಸ್ಯರು ಗೈರಾಗಿದ್ದ ಕಾರಣ ವಾಪಸ್ ಬಂದಿದ್ದಾರೆ. ಈಗ ಸಂಗ್ರಹಿಸಿರುವ ಮಾಹಿತಿಯನ್ನು ಅಂತರ್ಜಾಲದಲ್ಲಿ ಅಳವಡಿಸಲು ಇನ್ನೂ ಕನಿಷ್ಠ ಒಂದು ವಾರ ಬೇಕಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
- ರಾಜ್ಯದಲ್ಲಿರುವ ಶಾಲೆಗಳ ಸಂಖ್ಯೆ 21,893
- ಅಂತರ್ಜಾಲದಲ್ಲಿ ದತ್ತಾಂಶ ಅಳವಡಿಸಿದ ಶಾಲೆಗಳು 2,300
- ಸಮಿತಿ ಸದಸ್ಯರು ಭೇಟಿ ನೀಡಿದಾಗ ಪಾಲಕರ ಹಾಜರಿ ಅತ್ಯಂತ ಕಡಿಮೆ
- ಅಂತರ್ಜಾಲದಲ್ಲಿ ಮಾಹಿತಿ ಅಳವಡಿಸಲು ಒನ್ನೊಂದು ವಾರ ಬೇಕು [ಲೈಂಗಿಕ ದೌರ್ಜನ್ಯ: ಶಿಕ್ಷಕ ಪೊಲೀಸ್ ವಶಕ್ಕೆ]
ಪಾಲಕರಲ್ಲಿನ್ನೂ ಜಾಗೃತಿ ಬಂದಿಲ್ಲ: ಇಲಾಖೆ ಪ್ರತಿನಿಧಿಗಳು ಶಾಲೆಗೆ ಭೇಟಿ ನೀಡಿದ್ದಾಗ ಪಾಲಕರೂ ಹಾಜರಾಗುವಂತೆ ನೋಡಿಕೊಳ್ಳಲು ಸೂಚಿಸಲಾಗಿತ್ತು. ಪಾಲಕರೇ ಇರುವಂತಹ ಎಸ್‌ಡಿಎಂಸಿ ರಚನೆ ವ್ಯವಸ್ಥೆ ಇದ್ದರೂ ಅವರ ಹಾಜರಾತಿ ಅತ್ಯಂತ ಕಡಿಮೆಯಾಗಿತ್ತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. [ಕೇಂಬ್ರಿಡ್ಜ್ ಶಾಲೆ ಎದುರು ಪಾಲಕರ ಪ್ರತಿಭಟನೆ]
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮ್ಮದ್ ಮೊಹ್ಸಿನ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಈಗಾಗಲೇ ದತ್ತಾಂಶವನ್ನು ಸಂಗ್ರಹಿಸಿದ್ದಾರೆ. ಅವರು ಶೀಘ್ರ ಅಂತರ್ಜಾಲಕ್ಕೆ ಅಪ್‌ಲೋಡ್ ಮಾಡಬೇಕು ಎಂದಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications