Government Employee: ಸರ್ಕಾರಿ ನೌಕರರ ವಿರುದ್ಧದ ದೂರು, ಇತ್ಯರ್ಥಕ್ಕೆ ಕಾಲಮಿತಿ ನಿಗದಿ

ಬೆಂಗಳೂರು, ಅಕ್ಟೋಬರ್ 07: ಜನರಿಂದ ಹಾಗೂ ಜನಪ್ರತಿನಿಧಿಗಳಿಂದ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಹಲವು ದೂರುಗಳು ಸಲ್ಲಿಕೆಯಾಗುತ್ತವೆ. ಹೀಗೆ ಸ್ವೀಕೃತಗೊಂಡ ದೂರುಗಳ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ. ಈ ಮಾದರಿಯ ದೂರುಗಳನ್ನು ಇತ್ಯರ್ಥಗೊಳಿಸಲು ಕಾಲಮಿತಿಯನ್ನು ಸಹ ನಿಗದಿ ಮಾಡಿ ಆದೇಶಿಸಲಾಗಿದೆ. ಈ ಕುರಿತು ವಿವರಗಳು ಇಲ್ಲಿವೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಅಪರ ಆಯುಕ್ತರಾದ ಡಾ. ಆಕಾಶ್ ಎಸ್. ಸುತ್ತೋಲೆಯನ್ನು ಹೊರಡಿಸಿದ್ದಾರೆ. ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು 1957 ಉಲ್ಲೇಖಿಸಲಾಗಿದೆ.

Deadline Established For Resolving Complaints Against Government Officials

ಸುತ್ತೋಲೆಯಲ್ಲಿ ಸಾರ್ವಜನಿಕರಿಂದ, ಜನಪ್ರತಿನಿಧಿಗಳಿಂದ ಅಥವಾ ಸಂಘ-ಸಂಸ್ಥೆಗಳಿಂದ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸ್ವೀಕೃತಗೊಂಡ ದೂರುಗಳ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿಯಮಗಳಡಿಯಲ್ಲಿ ಸ್ಪಷ್ಟಪಡಿಸಲಾಗಿರುತ್ತದೆ. ಇಂತಹ ದೂರುಗಳು ಕೆಲವು ಸಂದರ್ಭಗಳಲ್ಲಿ ವೈಯುಕ್ತಿಕ ದ್ವೇಷ, ಅಸೂಯೆ ಅಥವಾ ಪೂರ್ವಾಗ್ರಹ ಪೀಡಿತವಾಗಿರುತ್ತವೆ. ಅಲ್ಲದೆ ದೂರುಗಳಿಗೆ ಪೂರಕವಾದ ಮಾಹಿತಿ/ ದಾಖಲೆಗಳನ್ನು ಸಾಮಾನ್ಯವಾಗಿ ಲಭ್ಯಪಡಿಸಿರುವುದಿಲ್ಲ.

ಇಂತಹ ದೂರುಗಳಿಂದಾಗಿ ಸರ್ಕಾರಿ ಅಧಿಕಾರಿ/ ನೌಕರರ ದೈನಂದಿನ ಕೆಲಸ ಕಾರ್ಯಗಳಲ್ಲಿ ಹಸ್ತಕ್ಷೇಪ ಉಂಟಾಗುವುದಲ್ಲದೇ ದಕ್ಷ ಹಾಗೂ ಪ್ರಾಮಾಣಿಕ ನೌಕರರ ವಿಶ್ವಾಸಾರ್ಹತೆಗೆ ಧಕ್ಕೆ ಉಂಟಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಈ ದೂರುಗಳನ್ನು ಸಮಂಜಸವಾಗಿ ನಿರ್ವಹಿಸದೇ ಇರುವುದರಿಂದ, ಸರ್ಕಾರಿ ನೌಕರರು ಮುಕ್ತ ಮತ್ತು ನಿರ್ಭೀತರಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ.

ಕಾರಣ, ಮುಂದಿನ ದಿನಗಳಲ್ಲಿ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸ್ವೀಕೃತಗೊಂಡ ದೂರುಗಳ ಮೇಲೆ ಹಂತವಾರು ಕ್ರಮ ಕೈಗೊಳ್ಳಲು ಈ ಮೂಲಕ ತಿಳಿಸಿದೆ ಎಂದು ಹೇಳಿದ್ದು, ಒಟ್ಟು 10 ಹಂತಗಳನ್ನು ವಿವರಿಸಲಾಗಿದೆ. ದೂರು ಸ್ವೀಕಾರವಾಗುವ ವಿವಿಧ ವಿಧಗಳಿಂದ ಹಿಡಿದು, ಇಲಾಖಾ ವಿಚಾರಣೆ ತನಕ ವಿವರಣೆಯನ್ನು ನೀಡಲಾಗಿದೆ.

ಹಂತ-10 ಇಲಾಖಾ ವಿಚಾರಣೆ, ಕಾಲಮಿತಿ ನಿಗದಿ: ಸರ್ಕಾರದ ಸುತ್ತೋಲೆ ದಿನಾಂಕ 04.10.2021ರನ್ವಯ ತಿಳಿಸಿರುವಂತೆ, ಕರ್ನಾಟಕ ನಾಗರಿಕ ಸೇವಾ (ವರ್ಗಿಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 11ರಡಿ ಕಠಿಣ ದಂಡನೆಯನ್ನು ವಿಧಿಸಲು ಈ ಕೆಳಕಂಡ ಕಾಲಾವಧಿಯನ್ನು ಪಾಲಿಸುವುದು ಎಂದು ವಿವರಣೆ ಕೊಡಲಾಗಿದೆ.

ಸರ್ಕಾರಿ ನೌಕರರ ಅಕ್ರಮಗಳು, ದುರ್ನಡತೆಗಳು ಶಿಸ್ತಿನ ಪ್ರಾಧಿಕಾರದ ಗಮನಕ್ಕೆ ಬಂದ ದಿನಾಂಕದಿಂದ ದೋಷಾರೋಪಣಾ ಪಟ್ಟಿಯನ್ನು ತಯಾರಿಸುವ ಸಲುವಾಗಿ ದಾಖಲೆಗಳನ್ನು ಪಡೆಯಲು ಅಥವಾ ಪ್ರಾರಂಭಿಕ ತನಿಖೆ, ವಿಚಾರಣೆಯನ್ನು ಅಂತಿಮಗೊಳಿಸಲು ಹಾಗೂ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಜಾರಿಗೊಳಿಸಲು. ಗರಿಷ್ಠ ಕಾಲಮಿತಿ 1 ತಿಂಗಳು.

ದೋಷಾರೋಪಣಾ ಪಟ್ಟಿಗೆ ಸರ್ಕಾರಿ ನೌಕರನ ವಿವರಣೆಯನ್ನು ಪಡೆಯಲು ಹಾಗೂ ವಿಚಾರಣಾ ಅಧಿಕಾರಿ ಮತ್ತು ಮಂಡನಾಧಿಕಾರಿಯನ್ನು ನೇಮಿಸಲು. ಗರಿಷ್ಠ ಕಾಲಮಿತಿ 1 ತಿಂಗಳು. ವಿಚಾರಣೆಯನ್ನು ನಡೆಸಲು ಹಾಗೂ ವಿಚಾರಣಾ ವರದಿಯನ್ನು ಮಂಡಿಸಲು ಗರಿಷ್ಠ ಕಾಲಮಿತಿ 4 ತಿಂಗಳು.

ವಿಚಾರಣಾ ವರದಿಯನ್ನು ಪರಿಶೀಲಿಸಲು ಹಾಗೂ ಅದನ್ನು ಸ್ವೀಕರಿಸುವ ಬಗ್ಗೆ ನಿರ್ಣಯಿಸಲು ಗರಿಷ್ಠ ಕಾಲಮಿತಿ 1 ತಿಂಗಳು. ಕಾರಣ ಕೇಳುವ 2ನೇ ಸೂಚನಾ ಪತ್ರವನ್ನು ವಿಚಾರಣಾ ವರದಿಯ ಜೊತೆಗೆ, ಆಪಾದಿತ ಸರ್ಕಾರಿ ನೌಕರನಿಗೆ ನೀಡಲು ಗರಿಷ್ಠ ಕಾಲಮಿತಿ 1 ತಿಂಗಳು. ಅಂತಿಮ ಆದೇಶವನ್ನು ಹೊರಡಿಸಲು ಗರಿಷ್ಠ ಕಾಲಮಿತಿ 1 ತಿಂಗಳು. ಶಿಸ್ತಿನ ಕ್ರಮ ಜರುಗಿಸಲು ಒಟ್ಟಾರೆ ಕಾಲಮಿತಿ 9 ತಿಂಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+