Government Employees: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಅಪ್‌ಡೇಟ್
ಬೆಂಗಳೂರು, ಅಕ್ಟೋಬರ್ 06: ರಾಜ್ಯದಲ್ಲಿ ಹಳೆ ಪಿಂಚಣಿ ಜಾರಿ ಆಗಬೇಕು ಎಂಬುದು ಸರ್ಕಾರಿ ನೌಕಕರರ ಬಹು ದಿನಗಳ ಬೇಡಿಕೆ. ಸರ್ಕಾರಕ್ಕೆ ಆಗುತ್ತಿರುವ ಆರ್ಥಿಕ ಹೊರೆಯನ್ನು ತಪ್ಪಿಸುವ ಉದ್ದೇಶದಿಂದ 2004ರಲ್ಲಿ ಕೇಂದ್ರ ಸರ್ಕಾರ ಹಳೆ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದೇಶದಾದ್ಯಂತ ಅನ್ವಯಿಸಿತು. ಹೀಗಾಗಿ ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆಯ ಮರು ಜಾರಿಗೆ ಒತ್ತಾಯಿಸಿದ್ದಾರೆ. ಇನ್ನೂ ಕರ್ನಾಟದಲ್ಲಿ ಸರ್ಕಾರಿ ನೌಕರರ ಬೇಡಿಕೆಗೆ ಮಣಿದಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಳೆ ಪಿಂಚಣಿ ಜಾರಿಗೆ ಗಂಭೀರ ಚಿಂತನೆ ನಡೆಸಿದೆ. ಈ ನಡುವೆ ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಟ್ಟಿಭತ್ಯೆ ಕುರಿತು ಮಹತ್ವದ ಹೇಳಿಕೆಯನ್ನ ನೀಡಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನ (ಡಿಎ) 3 ಶೇಕಡಾ ಹೆಚ್ಚಳದ ಘೋಷಣೆಗೆ ಬೆನ್ನಲ್ಲೆ ಕರ್ನಾಟಕ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ಡಿಎ ಹೆಚ್ಚಳ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಘೋಷಣೆಯಿಂದ ರಾಜ್ಯದ ಸುಮಾರು 6 ಲಕ್ಷ ನೌಕರರು ಮತ್ತು ನಿವೃತ್ತರಾದವರಿಗೆ ತಕ್ಷಣದ ಆರ್ಥಿಕ ಉಪಶಮನ ಸಿಗುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡಿದ ನಂತರ, ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ಡಿಎ ಹೆಚ್ಚಳ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನ (ಡಿಎ) 3 ಶೇಕಡಾ ಹೆಚ್ಚಳದ ಬಗ್ಗೆ ಘೋಷಣೆಯು ದೀಪಾವಳಿ ಹಬ್ಬಕ್ಕೆ ಮುಂಚಿತವಾಗಿ ಬಂದಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲೂ ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.ಕೇಂದ್ರ ಸರ್ಕಾರದ ಈ ಹೆಚ್ಚಳವು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದರಂತೆ, ಕೇಂದ್ರ ನೌಕರರ ಡಿಎ ಶೇ.55 ರಿಂದ ಶೇ.58ಕ್ಕೆ ಏರಿಕೆಯಾಗಿದ್ದು, ಇದು 2025ರ ಜುಲೈ 1ರಿಂದ ಜಾರಿಗೆ ಬರುತ್ತದೆ.
ಇನ್ನೂ ಕೇಂದ್ರ ಸರ್ಕಾರ ತುಟ್ಟಿ ಭತ್ಯೆ ಹೆಚ್ಚಳದ ಬೆನ್ನಲ್ಲೇ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಮುಂದಾಗಿದೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಹ ತುಟ್ಟಿಭತ್ಯೆ ಹೆಚ್ಚಿಸುವುದಾಗಿ ಭರವಸೆ ನೀಡಿರುವುದು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ.
ಇನ್ನೂ ಕೇಂದ್ರ ಸರ್ಕಾರವು ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್‌ನ ಅರಿಯರ್‌ಗಳನ್ನು ಅಕ್ಟೋಬರ್ ವೇತನದೊಂದಿಗೆ ನೀಡಲಾಗುವುದು. ಈ ಹೆಚ್ಚಳದಿಂದ ಸುಮಾರು 49 ಲಕ್ಷ ಕೇಂದ್ರ ನೌಕರರು ಮತ್ತು 69 ಲಕ್ಷ ನಿವೃತ್ತರಾದವರಿಗೆ ತಿಂಗಳಿಗೆ ಸರಾಸರಿ ₹1,000ಕ್ಕೂ ಹೆಚ್ಚು ಆರ್ಥಿಕ ಲಾಭ ಸಿಗಲಿದೆ. ದೇಶದ ಏರುತ್ತಿರುವ ಬೆಲೆಯ ಏರಿಕೆ ಸಂಬಂಧಿಸಿದಂತೆ ಆಧಾರವು ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮೂಲಗಳು ತಿಳಿಸಿವೆ.












Click it and Unblock the Notifications