Government Employee: ಕರ್ನಾಟಕ ಸರ್ಕಾರಿ ನೌಕರರ ತುಟ್ಟಿಭತ್ಯೆ ಏರಿಕೆ, ಸ್ಪಷ್ಟನೆ

ಬೆಂಗಳೂರು, ನವೆಂಬರ್ 20: ಕೇಂದ್ರ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ತನ್ನ ನೌಕರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಏರಿಕೆ ಮಾಡಿ ದೀಪಾವಳಿ ಹಬ್ಬದ ಉಡುಗೊರೆ ನೀಡಿದೆ. ಆದರೆ ಕೇಂದ್ರದಲ್ಲಿ ಡಿಎ ಏರಿಕೆ ಆದೇಶವಾಗಿ ಒಂದು ತಿಂಗಳು ಕಳೆದರೂ ಸಹ ಇನ್ನೂ ಕರ್ನಾಟಕ ರಾಜ್ಯ ಸರ್ಕಾರ ಡಿಎ ಹೆಚ್ಚಳದ ಕುರಿತು ಆದೇಶ ಹೊರಡಿಸಿಲ್ಲ. ಈ ಕುರಿತು ಸರ್ಕಾರಿ ನೌಕರರು ಬೇಸರಗೊಂಡಿದ್ದಾರೆ.

ಸಂಪ್ರದಾಯದಂತೆ ಕೇಂದ್ರದಲ್ಲಿ ಡಿಎ ಹೆಚ್ಚಳ ಮಾಡಿದ ಬಳಿಕ ಕರ್ನಾಟಕದಲ್ಲಿಯೂ ರಾಜ್ಯ ಸರ್ಕಾರಿ ನೌಕರರ ಡಿಎ ಏರಿಕೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸಿನ ಅನ್ವಯ ಡಿಎ ಹೆಚ್ಚಳ ಮಾಡಬೇಕು. ಸಾಮಾಜಿಕ ಜಾಲತಾಣದಲ್ಲಿ ಡಿಎ ಹೆಚ್ಚಳದ ಕುರಿತು ಹಲವು ಸುದ್ದಿಗಳು ಹರಿದಾಡುತ್ತಿವೆ.

Dearness Allowance Hike For Karnataka Government Employees Clarification

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಕುರಿತು ಸ್ಪಷ್ಟನೆಯನ್ನು ನೀಡಿದೆ. ಸದ್ಯದ ಮಾಹಿತಿ ಪ್ರಕಾರ ಡಿಎ ಹೆಚ್ಚಳದ ಕುರಿತು ಸರ್ಕಾರ ಯಾವುದೇ ಆದೇಶವನ್ನು ಹೊರಡಿಸಿಲ್ಲ. ರಾಜ್ಯ ಸರ್ಕಾರಿ ನೌಕರರ ಸಂಘ ಈ ಕುರಿತು ಸರ್ಕಾರದ ಮಟ್ಟದಲ್ಲಿ ಪ್ರಯತ್ನವನ್ನು ನಡೆಸುತ್ತಿದೆ. ಆದರೆ ಆದೇಶ ಪ್ರಕಟವಾಗಬೇಕಿದೆ.

ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ: ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸ್ಪಷ್ಟನೆ ನೀಡಲಾಗಿದೆ. 'ಆತ್ಮೀಯ ನೌಕರರು ಬಂಧುಗಳೇ, ಎಲ್ಲಾ ಸರ್ಕಾರಿ ನೌಕರರಿಗೆ ತಿಳಿಯಪಡಿಸುವುದೇನೆಂದರೆ ಮಾನ್ಯ ಸರ್ಕಾರವು ಯಾವುದೇ ತುಟ್ಟಿ ಭತ್ಯೆ ಕುರಿತು ಯಾವುದೇ ಆದೇಶಗಳನ್ನು ಹೊರಡಿಸಿರುವುದಿಲ್ಲ. ಸಂಘದಿಂದ ಎಲ್ಲಾ ನೌಕರರ ಪರವಾಗಿ ಆದಷ್ಟು ಬೇಗನೆ ಆದೇಶ ಹೊರಡಿಸಲು ಪ್ರಯತ್ನಿಸಲಾಗುತ್ತಿದೆ' ಎಂದು ಸ್ಪಷ್ಟನೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಅವರು ತುಟ್ಟಿ ಭತ್ಯೆ ಬಿಡುಗಡೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಅವರಿಗೆ ಪತ್ರವನ್ನು ಬರೆದಿದ್ದರು. ನವೆಂಬರ್‌ ಮೊದಲ ವಾರವೇ ಈ ಕುರಿತು ಆದೇಶವನ್ನು ಹೊರಡಿಸಬೇಕು ಎಂದು ಮನವಿ ಮಾಡಿದ್ದರು. ಆದರೆ ಸರ್ಕಾರ ಇನ್ನೂ ಈ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಮತ್ತೊಮ್ಮೆ ಸಿ. ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗ ಇದೇ ವಿಚಾರದಲ್ಲಿ ಎಲ್‌. ಕೆ. ಅತೀಕ್ ಭೇಟಿಯಾಗಿತ್ತು. ಆಗ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡಲಾಗಿತ್ತು. ಆದರೆ ಸರ್ಕಾರ ಯಾವುದೇ ಆದೇಶವನ್ನು ಇನ್ನೂ ಹೊರಡಿಸಿಲ್ಲ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ನಂಬಬೇಡಿ ಎಂದು ಮನವಿ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 16ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿತ್ತು. ನೌಕರರಿಗೆ ಶೇ. 3ರಷ್ಟು ಹೆಚ್ಚುವರಿ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರಕ್ಕೆ ಸಂಪುಟ ಅನುಮೋದನೆ ಕೊಟ್ಟಿತ್ತು. ಸಿ. ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ 01-07-2024ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು.

ಕೇಂದ್ರ ಸರ್ಕಾರ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ದಿನಾಂಕ 01-07-2024ರಿಂದ ಅನ್ವಯವಾಗುವಂತೆ ನೌಕರರಿಗೆ ಶೇ. 3ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿದೆ. ಈಗ ಕರ್ನಾಟಕದ ಸರ್ಕಾರಿ ನೌಕರು ದಿನಾಂಕ 01-07-2024 ರಿಂದ ಅನ್ವಯವಾಗುವಂತೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+