Government Employee: ಕರ್ನಾಟಕ ಸರ್ಕಾರಿ ನೌಕರರ ತುಟ್ಟಿಭತ್ಯೆ ಏರಿಕೆ, ಅಪ್‌ಡೇಟ್‌

ಬೆಂಗಳೂರು, ನವೆಂಬರ್ 07: ಕೇಂದ್ರದ ಎನ್‌ಡಿಎ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಏರಿಕೆ ಮಾಡಿ ದೀಪಾವಳಿ ಹಬ್ಬದ ಉಡುಗೊರೆ ನೀಡಿತ್ತು. ಕೇಂದ್ರದಲ್ಲಿ ಡಿಎ ಏರಿಕೆಯಾದ ಬಳಿಕ ಕರ್ನಾಟಕ ಸರ್ಕಾರ ಸಹ ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಬೇಕಿದೆ. ರಾಜ್ಯ ಸರ್ಕಾರಿ ನೌಕರರು ಡಿಎ ಹೆಚ್ಚಳ ಯಾವಾಗ? ಎಂದು ಕಾದು ಕುಳಿತಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳಿಗೆ ಈ ಕುರಿತು ಪತ್ರವನ್ನು ಬರೆಯಲಾಗಿದೆ. ಆದರೆ ಡಿಎ ಬಿಡುಗಡೆ ಆದೇಶ ಇನ್ನೂ ಆಗಿಲ್ಲ.

ಸಂಪ್ರದಾಯದಂತೆ ಕೇಂದ್ರದಲ್ಲಿ ಡಿಎ ಹೆಚ್ಚಳ ಮಾಡಿದ ಬಳಿಕ ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಡಿಎ ಏರಿಕೆ ಕುರಿತು ಆದೇಶ ಹೊರಡಿಸಲಿದೆ. ಸದ್ಯ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸಿನ ಅನ್ವಯ ರಾಜ್ಯ ಸರ್ಕಾರ ಡಿಎ ಹೆಚ್ಚಳ ಮಾಡಬೇಕಿದೆ. ಸೋಮವಾರ ಅಥವ ಮಂಗಳವಾರ ಈ ಕುರಿತು ಸರ್ಕಾರ ಆದೇಶ ಪ್ರಕಟವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು.

Dearness Allowance Hike For Karnataka Government Employees Update

ಸಿ. ಎಸ್. ಷಡಾಕ್ಷರಿ ಭೇಟಿ: ರಾಜ್ಯ ಸರ್ಕಾರಿ ನೌಕರರ ಬಾಕಿ ತುಟ್ಟಿ ಭತ್ಯೆ ಬಿಡುಗಡೆ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ಎಸ್. ಷಡಕ್ಷರಿ ನೇತೃತ್ವದ ನಿಯೋಗ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಅವರನ್ನು ಭೇಟಿ ಮಾಡಿ, ಬಾಕಿ ಇರುವ ತುಟ್ಟಿ ಭತ್ಯೆಯನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದರು. ಶೀಘ್ರವಾಗಿ ಆದೇಶ ಹೊರಡಿಸುವುದಾಗಿ ಎಲ್‌. ಕೆ. ಅತೀಕ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಡಿಎ ಏರಿಕೆ ಮಾಡಿದ ಬಳಿಕ ಸಿ. ಎಸ್. ಷಡಾಕ್ಷರಿ ರಾಜ್ಯ ಸರ್ಕಾರಿ ನೌಕರರ ಸಂಘದ ಮೂಲಕ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಇವರಿಗೆ ಪತ್ರವನ್ನು ಬರೆದಿದ್ದರು. ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡಲು ಆದೇಶ ಹೊರಡಿಸುವಂತೆ ಮನವಿ ಮಾಡಿದ್ದರು.

ಕಳೆದ ವಾರ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ 'ಆತ್ಮೀಯ ರಾಜ್ಯದ ಸರ್ಕಾರಿ ನೌಕರ ಬಾಂಧವರೇ, ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಬಾಕಿ ಇರುವ ತುಟ್ಟಿ ಭತ್ಯೆ ಆದೇಶದ ಕಡತ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇದ್ದು, ಸೋಮವಾರ ಅಥವಾ ಮಂಗಳವಾರ ಸರ್ಕಾರಿ ಆದೇಶವಾಗಲಿದೆ' ಎಂದು ಮಾಹಿತಿ ನೀಡಲಾಗಿತ್ತು. ಆದರೆ ಇನ್ನೂ ಆದೇಶ ಪ್ರಕಟವಾಗಿಲ್ಲ.

ದೀಪಾವಳಿ ಹಬ್ಬಕ್ಕೂ ಮುನ್ನವೇ ಅಕ್ಟೋಬರ್ 16ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳದ ಕುರಿತು ತೀರ್ಮಾನ ಕೈಗೊಳ್ಳಲಾಗಿತ್ತು. ನೌಕರರಿಗೆ ಶೇ. 3ರಷ್ಟು ಹೆಚ್ಚುವರಿ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರಕ್ಕೆ ಸಂಪುಟ ಅನುಮೋದನೆ ಕೊಟ್ಟಿತ್ತು. ಇದರಿಂದಾಗಿ ನೌಕರರಿಗೆ ಹಬ್ಬದ ಉಡುಗೊರೆ ಸಿಕ್ಕಿತ್ತು.

ಸಿ. ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ 01-07-2024ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು ಮತ್ತು ಕೇಂದ್ರ ಸರ್ಕಾರ ಡಿಎ ಹೆಚ್ಚಳದ ಆದೇಶವನ್ನು ಉಲ್ಲೇಖಿಸಿದ್ದರು.

ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ದಿನಾಂಕ 01-07-2024ರಿಂದ ಅನ್ವಯವಾಗುವಂತೆ ನೌಕರರಿಗೆ ಶೇ. 3ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿದೆ. ಈಗ ಕರ್ನಾಟಕದ ಸರ್ಕಾರಿ ನೌಕರು ದಿನಾಂಕ 01-07-2024 ರಿಂದ ಅನ್ವಯವಾಗುವಂತೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+