ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್ ದರ ಏರಿಕೆ : ಶೀಘ್ರವೇ ಪ್ರವಾಸಿ ಟ್ಯಾಕ್ಸಿ ದರ ಹೆಚ್ಚಳ

By Gururaj
|
Google Oneindia Kannada News

ಬೆಂಗಳೂರು, ಜುಲೈ 14 : ಪೆಟ್ರೋಲ್, ಡೀಸೆಲ್ ದರಗಳು ಇಂದಿನಿಂದ ಏರಿಕೆಯಾಗಿವೆ. ಖಾಸಗಿ ಪ್ರವಾಸಿ ಟ್ಯಾಕ್ಸಿ ಮಾಲೀಕರು ಸಹ ದರ ಏರಿಕೆ ಮಾಡಲು ಸಿದ್ಧರಾಗುತ್ತಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 2018-19ನೇ ಸಾಲಿನ ಬಜೆಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಏರಿಸಿದ್ದರು. ಈ ದರ ಇಂದಿನಿಂದ ಅನ್ವಯವಾಗಿದ್ದು, ತೈಲ ಬೆಲೆ ಹೆಚ್ಚಾಗಿದೆ.

ಕುಮಾರಸ್ವಾಮಿ ಬಜೆಟ್ 2018: ಯಾವುದು ಏರಿಕೆ? ಯಾವ್ದು ಇಳಿಕೆ?ಕುಮಾರಸ್ವಾಮಿ ಬಜೆಟ್ 2018: ಯಾವುದು ಏರಿಕೆ? ಯಾವ್ದು ಇಳಿಕೆ?

ಪ್ರಸ್ತುತ ತೈಲ ಬೆಲೆ ಪ್ರತಿನಿತ್ಯ ಪರಿಷ್ಕರಣೆಯಾಗುತ್ತದೆ. ಇದರ ಜೊತೆಗೆ ಕರ್ನಾಟಕದಲ್ಲಿ 1 ರೂ. ಹೆಚ್ಚುವರಿ ಹೊರೆ ಬೀಳಲಿದೆ. ಆದ್ದರಿಂದ, ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಸಿ ಟ್ಯಾಕ್ಸಿ ಮಾಲೀಕರು ಸಹ ದರ ಹೆಚ್ಚಳಕ್ಕೆ ಮುಂದಾಗಿದ್ದಾರೆ.

Decision on increasing tourist taxi fares expected soon

ಕರ್ನಾಟಕ ಟೂರಿಸ್ಟ್ ಟ್ಯಾಕ್ಸಿ ಮಾಲೀಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಮುಂದಿನ ವಾರದಲ್ಲಿ ಸಭೆ ನಡೆಸಿ ದರ ಹೆಚ್ಚಳದ ಕುರಿತು ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ' ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlightsಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlights

ಕರ್ನಾಟಕ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಿರುವುದರಿಂದ ಪೆಟ್ರೋಲ್ ಬೆಲೆ 1.14 ರೂ. ಮತ್ತು ಡೀಸೆಲ್ ಬೆಲೆ 1.12 ರೂ. ಹೆಚ್ಚಳವಾಗುತ್ತಿದೆ. ಆದ್ದರಿಂದ, ದರ ಏರಿಕೆ ಅನಿವಾರ್ಯ ಎಂಬುದು ಟ್ಯಾಕ್ಸಿ ಮಾಲೀಕರ ವಾದವಾಗಿದೆ.

ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ 79.36 ರೂ. ಮತ್ತು ಡೀಸೆಲ್ ದರ 70.74 ರೂ.ಗಳು. ಎಕ್ಸ್ ಟ್ರಾ ಪ್ರೀಮಿಯಂ ಪೆಟ್ರೋಲ್ ಬೆಲೆ 80ರ ಗಡಿ ದಾಟಿದೆ.

English summary
After Petrol and Diesel cess hike tourist taxi owner now decided to hike fares. Tourist Taxi Owner's Association president K.Radhakrishna Holla said that, next week will announce decision on fare hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X