• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾತ್ರಿ ಕರ್ಫ್ಯೂ ವಿಸ್ತರಣೆ ಬಗ್ಗೆ ಏಪ್ರಿಲ್ 20ರ ನಂತರ ನಿರ್ಧಾರ: ಯಡಿಯೂರಪ್ಪ

|

ಬೆಂಗಳೂರು, ಏಪ್ರಿಲ್ 16: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ್ದಾರೆ.

   ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಸಿಎಂ, ಏ.20ರವರೆಗೆ ಯಥಾಸ್ಥಿತಿ ಮುಂದುವರೆಯಲಿದೆ ಎಂದ ಬಿಎಸ್‌ವೈ | Oneindia Kannada

   ಸಭೆ ನಂತರ ಮಾತನಾಡಿದ ಅವರು, "8 ಜಿಲ್ಲೆಗಳಲ್ಲಿ ಏಪ್ರಿಲ್ 20ವರೆಗೂ ರಾತ್ರಿ ಕರ್ಫ್ಯೂ ಮುಂದುವರಿಯುವುದು. ರಾತ್ರಿ 10 ರಿಂದ ಬೆಳಿಗ್ಗೆ 6 ತನಕ ನೈಟ್ ಕರ್ಫ್ಯೂ ಇರುವುದು. ಇತರೆ ಜಿಲ್ಲೆಗಳಿಗೆ ಕರ್ಫ್ಯೂ ವಿಸ್ತರಣೆ ಕುರಿತು ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.

   ಇತರ ಜಿಲ್ಲೆಗಳಿಗೂ ರಾತ್ರಿ ಕರ್ಫ್ಯೂ ವಿಸ್ತರಣೆ?: ಸಿಎಂ ಬಿಎಸ್‌ವೈ ಸುಳಿವುಇತರ ಜಿಲ್ಲೆಗಳಿಗೂ ರಾತ್ರಿ ಕರ್ಫ್ಯೂ ವಿಸ್ತರಣೆ?: ಸಿಎಂ ಬಿಎಸ್‌ವೈ ಸುಳಿವು

   ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಅಧಿಕಾರಿಗಳ ಸಭೆ ನಡೆಸಲಾಗಿದೆ. ಏಪ್ರಿಲ್ 20ರಂದು ಮತ್ತೊಮ್ಮೆ ಚರ್ಚೆ ನಡೆಸಿ, ಕರ್ಫ್ಯೂ ಬಗ್ಗೆ ನಿರ್ಧಾರ ಮಾಡಲಾಗುವುದು. ಲಾಕ್ ಡೌನ್, ಇನ್ನಷ್ಟು ಕಠಿಣ ಕ್ರಮ ಬಗ್ಗೆ ಪ್ರಧಾನಿ ಮೋದಿ ಹಾಗೂ ಆರೋಗ್ಯ ಸಚಿವಾಲಯದ ಸೂಚನೆಯಂತೆ ಕ್ರಮ ಜರುಗಿಸಲಾಗುವುದು. ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆಯಲ್ಲೂ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು. ನಮ್ಮ ರಾಜ್ಯದ ಪರಿಸ್ಥಿತಿಯನ್ನು ಬೇರೆ ರಾಜ್ಯದ ಜೊತೆ ಹೋಲಿಸಬೇಡಿ ಎಂದರು.

   ಗುರುವಾರ ರಾಜ್ಯದಲ್ಲಿ 14,738 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 66 ಮಂದಿ ಸಾವನ್ನಪ್ಪಿದ್ದರು. ಬೆಂಗಳೂರು ಒಂದರಿಂದಲೇ 10,497 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಬೆನ್ನಲ್ಲೇ ತುರ್ತು ಸಭೆ ಕರೆದಿದ್ದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

   English summary
   Coronavirus Cases in Karnataka: Night curfew in Karnataka to continue till april 20 says CM BS Yediyurappa after covid 19 review meeting with officials. Know more,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   loader
   X