Get Updates
Get notified of breaking news, exclusive insights, and must-see stories!

ಕರಡಿ ಸಂಗಣ್ಣಗೆ ಕೈ ತಪ್ಪಿದ ಟಿಕೆಟ್;‌ ಕಾರ್ಯಕರ್ತರಿಂದ ಅಸಮಾಧಾನ- ಮಾಜಿ ಸಿಎಂ ಕೊಟ್ಟ ಭರವಸೆ ಏನು?

ಬೆಂಗಳೂರು,ಮಾರ್ಚ್‌ 26: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಹೈಕಮಾಂಡ್‌ ಕೆಲ ಹಾಲಿ ಸಂಸದರಿಗೆ ಶಾಕ್‌ ನೀಡಿದ್ದು, ಹೊಸ ಮುಖಗಳಿಗೆ ಮಣೆ ಹಾಕಿದೆ. ಕೊಪ್ಪಳ ಹಾಲಿ ಸಂಸದರಾದ ಕರಡಿ ಸಂಗಣ್ಣ ಅವರಿಗೆ ಟಿಕೆಟ್‌ ಕೈ ತಪ್ಪಿದ್ದು, ಡಾ ಬಸವರಾಜ್‌ ಕ್ಯಾವಟೂರು ಅವರಿಗೆ ಟಿಕೆಟ್‌ ನೀಡಿದೆ.

ಕರಡಿ ಸಂಗಣ್ಣ ಅವರಿಗೆ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ತೀವ್ರ ಅಸಮಾಧಾನಗೊಂಡಿರುವ ಕರಡಿ ಸಂಗಣ್ಣ ಅವರು ಅಸಮಾಧಾನವನ್ನ ಹೊರ ಹಾಕಿದ್ದಾರೆ. ಈ ಕುರಿತು ಕೊಪ್ಪಳ ಸಂಸದ ಕರಡಿ ಸಂಗಣ್ಣ ಹಾಗೂ ಅವರ ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

Decision To Bring Opinion Of Workers Of Koppal To Attention Of High Command Says Bommai

ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಭಾವನೆಯನ್ನು ಪಕ್ಷದ ಹೈಕಮಾಂಡ್ ಗೆ ತಿಳಿಸುವ ಕೆಲಸವನ್ನು ಮಾಡುವುದಾಗಿ ರಾಜ್ಯ ನಾಯಕರು ಹೇಳಿದ್ದಾರೆ. ಹೈಕಮಾಂಡ್ ನಾಯಕರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೊ ಅದಕ್ಕೆ ಎಲ್ಲರೂ ಬದ್ದರಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ ಅವರು, ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ತಪ್ಪಿರುವುದರಿಂದ ಅವರ ಬೆಂಬಲಿಗರೊಂದಿಗೆ ಬಂದು ತಮಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ. ಅವರ ಭಾವನೆಗಳನ್ನು ಪಕ್ಷದ ಮುಖಂಡರ ಗಮನಕ್ಕೆ ತರುತ್ತೇನೆ. ಕಾರ್ಯಕರ್ತರ ಅಭಿಪ್ರಾಯವನ್ನು ಹೈಕಮಾಂಡ್ ಗೆ ತಿಳಿಸಲಾಗುವುದು. ಅವರ ತೀರ್ಮಾನದಂತೆ ಎಲ್ಲರೂ ನಡೆದುಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಕೆಲಸ ಮಾಡಬೇಕು ಎಂದು ಸೂಚಿಲಾಗಿದೆ. ಇನ್ನೂ ಕರಡಿ ಸಂಗಣ್ಣ ಅವರ ಜನಪ್ರೀಯತೆ ಎಲ್ಲರಿಗೂ ಗೊತ್ತಿದೆ. ಪಕ್ಷ ಮುಂದಿನ ದಿನಗಳಲ್ಲಿ ಅವರಿಗೆ ಸೂಕ್ತ ಸ್ಥಾನ ನೀಡುವ ಬಗ್ಗೆಯೂ ಆಲೋಚನೆ ಮಾಡಲಾಗಿದೆ ಎಂದು ಹೇಳಿದರು.

ಇನ್ನೂ ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿ ಬಂದಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ. ಜನಾರ್ದನ ರೆಡ್ಡಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. ಅವರು ಪಕ್ಷಕ್ಕೆ ವಾಪಸ್ ಬಂದಿರುವುದರಿಂದ ಆ ಭಾಗದಲ್ಲಿ ಪಕ್ಷಕ್ಕೆ ದೊಡ್ಡ ಮಟ್ಟದ ಅನುಕೂಲ ಅನುಕೂಲವಾಗಲಿದೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+