Get Updates
Get notified of breaking news, exclusive insights, and must-see stories!

ಕರ್ನಾಟಕದ 15 ಕಡೆ ಬರಲಿವೆ ರೋಪ್ ವೇಗಳು: ರಾಜ್ಯದ ಪ್ರವಾಸೋದ್ಯಮಕ್ಕೆ ಭಾರೀ ಮೆರಗು

ಬೆಳಗಾವಿ, ಡಿಸೆಂಬರ್‌ 17: ರಾಜ್ಯದಲ್ಲಿ 15 ಕಡೆ ರೋಪ್ ವೇಗಳ ನಿರ್ಮಾಣಕ್ಕೆ ಸರ್ಕಾರ ನಿರ್ಣಯ ಕೈಗೊಂಡಿದೆ. ಇವುಗಳ ನಿರ್ಮಾಣ ಮತ್ತು ಕಾರ್ಯನಿರ್ವಹಣೆಯನ್ನು ಅಧಿಕೃತಗೊಳಿಸಿ, ಸುಗಮಗೊಳಿಸುವ ಹಾಗೂ ನಿಯಂತ್ರಿಸುವ ಸಲುವಾಗಿ 2024ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ ಎಂದು ಕಾನೂನು ಸಂಸದೀಯ ವ್ಯವಹಕಾರಗಳು ಮತ್ತು ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಸುವರ್ಣ ಸೌಧದಲ್ಲಿ ಸೋಮವಾರ ವಿಧಾನ ಸಭೆ ಕಲಾಪದಲ್ಲಿ ವಿಧೇಯಕವನ್ನು ಸದನದ ಪರ್ಯಾಲೋಚನೆಗೆ ಎಚ್‌ ಕೆ ಪಾಟೀಲ್‌ ಅವರು ಮಂಡಿಸಿದರು. ರೋಪ್‌ವೇಗಳ ನಿರ್ಮಾಣದಿಂದ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಇಂಬು ದೊರಕಲಿದೆ. ಈ ರೋಪ್‌ವೇಗಳ ನಿರ್ಮಾಣದ ಜೊತೆಗೆ ನಿರ್ವಹಣೆಯನ್ನು ಸಹ ಪ್ರತ್ಯೇಕವಾಗಿ ಇಡಲು ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ವಿಧೇಯಕವನ್ನು ಮಂಡಿಸಲಾಗುತ್ತಿದೆ. ಸದನ ಒಪ್ಪಿಗೆ ನೀಡುವಂತೆ ಅವರು ಕೋರಿದರು.

Decision To Construct Ropeways In 15 Parts Of The State Says HK Patil

ಆರ್.ಅಶೋಕ್ ಮಾತನಾಡಿ, ವಿಧೇಯಕದಡಿ ರಚಿಸಲಾಗುವ ಸಲಹಾ ಪ್ರಾಧಿಕಾರದಲ್ಲಿ ಸರ್ಕಾರದ ಅರಣ್ಯ ಇಲಾಖೆ ಕಾರ್ಯದರ್ಶಿಗಳನ್ನು ಸಹ ಸದಸ್ಯರನ್ನಾಗಿ ನೇಮಿಸಬೇಕು. ರೋಪ್‌ವೇ ನಿರ್ಮಿಸಲು ಉದ್ದೇಶಿಸಿದ ಅನೇಕ ಸ್ಥಳಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಇದರಿಂದ ಶೀಘ್ರವೇ ಅನುಮತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಶಾಸಕ ಡಾ.ಅಶ್ವಥ್ ನಾರಾಯಣ ಮಾತನಾಡಿ, ರೋಪ್‌ವೇಗಳು ಮಲೆನಾಡು ಭಾಗದಲ್ಲಿ ಗುಡ್ಡದ ಮೇಲೆ ಕಾಲುದಾರಿಗಳ ನಿರ್ಮಾಣದಿಂದ ಉಂಟಾಗುವ ಭೂ ಕುಸಿತ ತಡೆಯಲು ಸಹಾಯಕವಾಗಿವೆ ಎಂದು ಅಭಿಪ್ರಾಯಪಟ್ಟರು.

ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ರೋಪ್‌ವೇಗಳ ಸುರಕ್ಷತೆ ಹಾಗೂ ಗುಣಮಟ್ಟ ಪರೀಶಿಲನೆಗೆ ಸರ್ಕಾರ ವಿಧೇಯಕದಲ್ಲಿ ಹೆಚ್ಚಿನ ಮಹತ್ವ ನೀಡಬೇಕು ಎಂದರು. ಶಾಸಕ ಹೆಚ್.ಸಿ.ಬಾಲಕೃಷ್ಣ ಶ್ರವಣಬೆಳಗೊಳದಲ್ಲಿ ರೋಪ್ ವೇ ನಿರ್ಮಿಸಲು ಭಾರತೀಯ ಪುರತತ್ವ ಇಲಾಖೆ ಅನುಮತಿ ನೀಡುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ರೋಪ್ ವೇ ಸಲಹಾ ಪ್ರಾಧಿಕಾರದಲ್ಲಿ ಪುರತತ್ವ ಇಲಾಖೆ ಅಧಿಕಾರಿಗಳನ್ನು ಸಹ ಸದಸ್ಯರನ್ನಾಗಿ ಮಾಡುವಂತೆ ಸಲಹೆ ನೀಡಿದರು. ಶಾಸಕರು ಸಲಹೆ ನೀಡಿದ ಸೂಚನೆಗಳ ತಿದ್ದುಪಡಿಯೊಂದಿಗೆ ವಿಧೇಯಕಕ್ಕೆ ಸದನ ಧ್ವನಿ ಮತದಿಂದೊಂದಿಗೆ ಅಂಗೀಕಾರ ನೀಡಿತು.

ವಿಧೇಯಕ ವಾಪಸ್ಸು: ರಾಜ್ಯಪಾಲರ ಸಲಹೆ ಮೇರೆಗೆ ಸಚಿವ ಎಚ್.ಕೆ.ಪಾಟೀಲ 2024ನೇ ಸಾಲಿನ ಕರ್ನಾಟಕ ವಿಧಾನ ಮಂಡಲ ಅನರ್ಹತಾ ನಿವಾರಣೆ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಸದನದಲ್ಲಿ ಅನುಮತಿ ಕೋರಿದರು. ವಿಧೇಯಕ ಹಿಂಪಡೆಯಲು ಸದನ ಅನುಮತಿ ನೀಡಿತು.

ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಅಂಗೀಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು 2024ನೇ ಸಾಲಿನ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಪರ್ಯಾಲೋಚನೆ ಮಂಡಿಸಿ, ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಜೊತೆಯಲ್ಲೇ ಬಸವನ ಬಾಗೇವಾಡಿ ಅಭಿವೃದ್ಧಿಯನ್ನು ಸದ್ಯ ಕೈಗೊಳ್ಳಲಾಗುತ್ತಿತ್ತು. ಆದರೆ ಬಸವನ ಬಾಗೇವಾಡಿ ಇತಿಹಾಸವನ್ನು ಜನರಿಗೆ ಪರಿಚಯಿಸುವ ಹಾಗೂ ಹೆಚ್ಚಿನ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಠಿಯಿಂದ ಪ್ರತ್ಯೇಕ ಪ್ರಾಧಿಕಾರ ರಚನೆ ಸರ್ಕಾರ ವಿಧೇಯಕ ಮಂಡಿಸಿದೆ. ಇದಕ್ಕೆ ಸದಸ್ಯರು ಪರ್ಯಾಲೋಚಿಸಿ ಅನುಮತಿ ನೀಡಬೇಕು ಎಂದು ಕೋರಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧೇಯಕವನ್ನು ಸ್ವಾಗತಿಸಿ, ಬಸವನಬಾಗೇವಾಡಿ ವ್ಯಾಪ್ತಿ ಲೋಕಸಭಾ ಸದ್ಯಸರನ್ನು ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಬೇಕು. ಇದರಿಂದ ಕೇಂದ್ರ ಸರ್ಕಾರದ ಅನುದಾನ ಪಡೆಯುವಲ್ಲಿ ಸಹಾಯವಾಗುತ್ತದೆ ಎಂದು ತಿಳಿಸಿದರು.

ಲೋಕಸಭಾ ಸದಸ್ಯರು ಹಾಗೂ ಮುದ್ದೇಬಿಹಾಳ ಶಾಸಕರನ್ನು ಸಹ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿಸುವ ತಿದ್ದುಪಡಿಯೊಂದಿಗಿನ ವಿಧೇಯಕಕ್ಕೆ ಸದನದ ಅಂಗೀಕಾರವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತೊಮ್ಮೆ ಸದನದಲ್ಲಿ ಕೋರಿದರು.

ಸಭಾಧ್ಯಕ್ಷ ಯ.ಟಿ.ಖಾದರ್ ತಿದ್ದುಪಡಿಗಳೊಂದಿಗಿನ ವಿಧೇಯಕವನ್ನು ಅಂಗೀಕಾರಕ್ಕಾಗಿ ಸದನದ ಮುಂದೆ ಮಂಡಿಸಿದರು. ವಿಧಾನ ಸಭೆಯ ಸರ್ವಾನುಮತದಿಂದ ವಿಧೇಯಕವನ್ನು ಅಂಗೀಕರಿಸಿತು. ವಿಧಾನ ಪರಿಷತ್‌ನ ಅಂಗೀಕಾರಕ್ಕಾಗಿ ವಿಧೇಯಕ ಕಳುಹಿಸಿಕೊಡಲಾಗುವುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+