ಕೊನೆಗೂ ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ; ಪ್ರತಿ ಟನ್ ಕಬ್ಬಿಗೆ ರೂ.3,200 ನೀಡಲು ನಿರ್ಧಾರ: ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು, ನವೆಂಬರ್ 06: ಕಬ್ಬಿನ ದರ ಹೆಚ್ಚಳ ಮಾಡುವಂತೆ ಬೆಳಗಾವಿ ಜಿಲ್ಲೆಯ ರೈತರು ಪ್ರತಿಭಟನೆ ಮಾಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬೆಳಿಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಸಭೆ ನಡೆಸುತ್ತೇನೆ ಎಂದು ಸಚಿವ ಸಂಪುಟ ಸಭೆಯವಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಕಳೆದ ಕೆಲವು ದಿನಗಳಿಂದ ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ನನಗೆ ಸ್ಪಷ್ಟ ಮಾಹಿತಿ ಇದೆ. ಹಾಗಾಗಿ ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿ ರೈತರು ಹಾಗೂ ಕಾರ್ಖಾನೆಗಳ ಮಾಲೀಕರ ಜೊತೆ ಚರ್ಚೆ ನಡೆಸುವಂತೆ ಸೂಚಿಸಲಾಗಿತ್ತು.

ಅದರಂತೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿ ಶೇ. 11.25 ರಿಕವರಿ ಬಂದರೆ 3,200 ರೂ. ಹಾಗೂ ಶೇ.10.25 ರಿಕವರಿ ಬಂದರೆ 3100 ರೂ. ಗಳನ್ನು (ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) ಪಾವತಿಸುವಂತೆ ಕಾರ್ಖಾನೆಗಳ ಮಾಲೀಕರಿಗೆ ಮನವೊಲಿಸಿದ್ದಾರೆ. ಹಾಗೆಯೇ, ರೈತರಿಗೂ ಮನವೊಲಿಸುವ ಕೆಲಸ ಮಾಡಿದ್ದಾರೆ. ಆದರೆ, ವಿರೋಧ ಪಕ್ಷಗಳವರು ಈ ವಿಚಾರವನ್ನು ರಾಜಕಾರಣಕ್ಕೆ ಬಳಸುತ್ತಿರುವುದರಿಂದ ವಿಷಯ ತುಸು ಗೊಂದಲಕರವಾಗಿದೆ.
ವಾಸ್ತವವಾಗಿ ನೋಡಿದರೆ, ಕಬ್ಬು ಮತ್ತು ಸಕ್ಕರೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಅತ್ಯಂತ ನಗಣ್ಯವಾಗಿದೆ. ಕೇಂದ್ರ ಸರ್ಕಾರವು ಪ್ರತಿ ವರ್ಷ FRP (Fair and Remunerative Price) ಯನ್ನು ನಿಗದಿಪಡಿಸುತ್ತದೆ. ಅದರಂತೆ, ದಿನಾಂಕ:06.05.2025 ರಂದು ಕೇಂದ್ರ ಸರ್ಕಾರದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯವು ಹೊರಡಿಸಿರುವ ಆದೇಶದ ಪ್ರಕಾರ, ಈ ದರವನ್ನು ಕೇಂದ್ರ ಸರ್ಕಾರವೆ ನಿಗದಿ ಮಾಡಿದೆ. ಕೇಂದ್ರ ಸರ್ಕಾರವು ನಿಗದಿ ಮಾಡಿರುವ ದರ ರೈತರಿಗೆ ಲಭಿಸುತ್ತಿದೆಯೇ ಎಂದು ನೋಡಿಕೊಳ್ಳುವುದು ಹಾಗೂ ರೈತರಿಗೆ ತೂಕ, ಬೆಲೆ, ಹಾಗೂ ನಿಗದಿತ ಅವಧಿಯಲ್ಲಿ ಪಾವತಿ ಇತ್ಯಾದಿಗಳನ್ನು ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ.
ಇದು ಹಿಂದಿನಿಂದಲೂ ನಡೆದುಕೊಂಡು ಬಂದ ಪದ್ಧತಿ ಹಾಗೂ ಕಬ್ಬು ನಿಯಂತ್ರಣಕ್ಕೆ ಸಂಬಂಧಪಟ್ಟ ಕಾಯ್ದೆಯಲ್ಲಿ ಸ್ಪಷ್ಟವಾಗಿ ಪ್ರಸ್ತಾಪಿಸಲಾಗಿದೆ. FRP (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ಯನ್ನು ನಿಗದಿಪಡಿಸುವುದಷ್ಟೆ ಕೇಂದ್ರ ಸರ್ಕಾರದ ಜವಾಬ್ದಾರಿಯಲ್ಲ. ಸಕ್ಕರೆ ಮೇಲಿನ ನಿಯಂತ್ರಣವನ್ನು ಅಗತ್ಯ ವಸ್ತುಗಳ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಹೊಂದಿರುತ್ತದೆ. ಹಿಂದೆ ಯುಪಿಎ ಸರ್ಕಾರದ ಅವಧಿಯಿಂದಲೂ 2017-18 ರವರೆಗೆ ರಿಕವರಿ ಪ್ರತಿ ಕ್ವಿಂಟಾಲಿಗೆ ಶೇ. 9.5 ರಷ್ಟನ್ನು ನಿಗದಿಪಡಿಸಲಾಗುತ್ತಿತ್ತು. 2018-19 ನಿಂದ 2021-22 ರವರೆಗೆ ಅದನ್ನು ಶೇ.10 ಕ್ಕೆ ಹೆಚ್ಚಿಸಲಾಯಿತು. 2022-23 ರಿಂದ ಈಚೆಗೆ ಎಫ್.ಆರ್.ಪಿ. ಯನ್ನು ಶೇ. 10.25 ಕ್ಕೆ ಏರಿಕೆ ಮಾಡಲಾಗಿದೆ. ಈ ವಿಚಾರದಲ್ಲೂ ನಮ್ಮ ರೈತರಿಗೆ ಅನ್ಯಾಯ ಮಾಡಲಾಗಿದೆ.
ಸಕ್ಕರೆಗೆ 2019 ರಲ್ಲಿ ಎಂ.ಎಸ್.ಪಿ ಯನ್ನು ಕಡೆಯದಾಗಿ ನಿಗದಿಪಡಿಸಲಾಯಿತು. ಆಗ, ಪ್ರತಿ ಕೆ.ಜಿ. ಗೆ 31 ರೂ. ನಿಗದಿ ಮಾಡಲಾಗಿತ್ತು. ಆನಂತರ ಎಂ.ಎಸ್.ಪಿ ಯನ್ನು ಪರಿಷ್ಕರಿಸಲಿಲ್ಲ. ಜೊತೆಗೆ, ಕಳೆದ ಕೆಲವು ವರ್ಷಗಳಿಂದಲೂ ಕೇಂದ್ರ ಸರ್ಕಾರವು ಸಕ್ಕರೆ ರಫ್ತನ್ನು ನಿಲ್ಲಿಸಿದೆ. ಕಳೆದ ವರ್ಷ ಇಡೀ ದೇಶಕ್ಕೆ ಕೇವಲ 10 ಲಕ್ಷ ಮೆಟ್ರಿಕ್ ಟನ್ ರಫ್ತು ಮಾಡಲು ಮಾತ್ರ ಅವಕಾಶ ನೀಡಲಾಗಿತ್ತು. ಕರ್ನಾಟಕವೊಂದರಲ್ಲೆ 41 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗಿತ್ತು. ಈ ಕಾರಣದಿಂದಲೂ ರೈತರಿಗೆ ಸಮಸ್ಯೆಯಾಗುತ್ತಿದೆ.
ಇದಷ್ಟೆ ಅಲ್ಲದೆ, ಎಥನಾಲ್ ವಿಚಾರದಲ್ಲೂ ಸಹ ಕೇಂದ್ರ ಸರ್ಕಾರವು ತಾರತಮ್ಯ ಧೋರಣೆಯನ್ನು ಅನುಸರಿಸುತ್ತಿದೆ. ಕರ್ನಾಟಕದಲ್ಲಿ 270 ಕೋಟಿ ಲೀಟರ್ ಉತ್ಪಾದನಾ ಸಾಮರ್ಥ್ಯ ಇದ್ದರೂ ಸಹ 2024-25 ರಲ್ಲಿ 47 ಕೋಟಿ ಲೀಟರ್‌ಗಳನ್ನು ತೈಲ ಕಂಪನಿಗಳಿಗೆ ಖರೀದಿ ಮಾಡಲು ಹಂಚಿಕೆ ಮಾಡಲಾಗಿದೆ. ಇದು ಕೇಂದ್ರ ಸರ್ಕಾರವು ರಾಜ್ಯದ ರೈತರ ಬದುಕಿನೊಂದಿಗೆ ಆಡುತ್ತಿರುವ ಚೆಲ್ಲಾಟಕ್ಕೆ ಸ್ಪಷ್ಟ ನಿದರ್ಶನವಾಗಿದೆ.
ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ತೂಕದಲ್ಲಿ ನಡೆಯುತ್ತಿದ್ದ ಮೋಸವನ್ನು ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲೂ ಡಿಜಿಟಲ್ ತೂಕ ಯಂತ್ರವನ್ನು ಅಳವಡಿಸಲಾಗಿದೆ. ಸರ್ಕಾರದ ವತಿಯಿಂದಲೇ 11 ಜಾಗಗಳಲ್ಲಿ ಡಿಜಿಟಲ್ ತೂಕ ಯಂತ್ರಗಳನ್ನು ಅಳವಡಿಸಲು ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ. ಇದರ ಜೊತೆಗೆ ತೂಕ, ಇಳುವರಿ, ಕಟಾವು ಮತ್ತು ಬಿಲ್ ಪಾವತಿಗಳಿಗೆ ಸಂಬಂಧಪಟ್ಟಂತೆ ಪರಿಶೀಲನೆಗೆ ಸಮಿತಿಗಳನ್ನು ರಚಿಸಲಾಗಿದೆ. ಸರ್ಕಾರವು ಉಚಿತವಾಗಿ ಎಪಿಎಂಸಿ ಗಳಲ್ಲಿ ಸ್ಥಾಪಿಸಿರುವ ತೂಕದ ಯಂತ್ರಗಳಲ್ಲಿ ಉಚಿತವಾಗಿ ತೂಕ ಮಾಡಿಕೊಡುವ ವ್ಯವಸ್ಥೆ ಕಲ್ಪಿಸಿದ್ದೇವೆ.
2024-25 ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳು 522 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆದಿವೆ. ರೈತರಿಗೆ ಈ ಅವಧಿಯಲ್ಲಿ 18,221.88 ಕೋಟಿ ರೂ. ಗಳನ್ನು ಎಫ್.ಆರ್. ಪಿ. ದರದಂತೆ ಪಾವತಿಸಬೇಕಾಗಿತ್ತು. ಆದರೂ ಸಹ ಕೆಲವು ಕಡೆ ರಿಕವರಿ (ಸಕ್ಕರೆ ಇಳುವರಿ) ಹೆಚ್ಚು ಬಂದ ಕಾರಣ 19,569.15 ಕೊಟಿ ರೂ. ಗಳನ್ನು ರೈತರಿಗೆ ಪಾವತಿಸುವಂತೆ ನೋಡಿಕೊಳ್ಳುವಲ್ಲಿ ರಾಜ್ಯ ಸರ್ಕಾರವು ಕ್ರಮ ಕೈಗೊಂಡಿದೆ. ಇಷ್ಟೆಲ್ಲಾ ಮಾಡಿದ್ದರೂ ಸಹ, ರೈತರ ಮುಗ್ಧತೆಯನ್ನು ವಿರೋಧ ಪಕ್ಷದವರು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ಬಿ.ಜೆ.ಪಿ. ಯವರ ಮರಳು ಮಾತುಗಳಿಗೆ ಬಲಿಯಾಗಬಾರದು.
ನಮ್ಮ ಸರ್ಕಾರವು ಸಂವಾದದಲ್ಲಿ ಮತ್ತು ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ನಂಬಿಕೆ ಇಟ್ಟುಕೊಂಡಿದೆ ಮತ್ತು ನಿರಂತರವಾಗಿ ರೈತ ಪರವಾದ ತೀರ್ಮಾನಗಳನ್ನು ಕೈಗೊಳ್ಳುತ್ತಾ ಬಂದಿದೆ. ಆದ್ದರಿಂದ, ನಾಳೆ ಬೆಳಿಗ್ಗೆ 11.00 ಗಂಟೆಗೆ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರುಗಳ ಜೊತೆ ಹಾಗೂ ಮಧ್ಯಾಹ್ನ 1.00 ಗಂಟೆಗೆ ರೈತ ಮುಖಂಡರುಗಳ ಜೊತೆ ಚರ್ಚಿಸಲು ಸಭೆ ಕರೆದಿದ್ದೇವೆ. ಸದರಿ ಸಭೆಯಲ್ಲಿ ಎರಡೂ ಕಡೆಯ ಅಹವಾಲುಗಳನ್ನು ಆಲಿಸಿ ಸೂಕ್ತ ತೀರ್ಮಾನವನ್ನು ರಾಜ್ಯ ಸರ್ಕಾರವು ತನ್ನ ಮಿತಿಯಲ್ಲಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದರು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications