B Khata: ಇ-ಖಾತಾ ಇಲ್ಲದ ಆಸ್ತಿ ಮಾಲೀಕರಿಗೆ ಬಿ-ಖಾತಾ ನೀಡಲು ತೀರ್ಮಾನ
B Khata: ಬೆಂಗಳೂರಿನಲ್ಲಿ ಆಸ್ತಿಗಳಿಗೆ ಸಂಬಂಧಿಸಿದಂತೆ ಆಗಾಗ ಅಪ್ಡೇಟ್ ಮಾಹಿತಿಗಳು ಹೊರಬೀಳುತ್ತಲೇ ಇರುತ್ತವೆ. ಇದೀಗ ಬೆಂಗಳೂರು ಬಿಟ್ಟು ರಾಜ್ಯದ ಇತರ ಸಂಸ್ಥೆಗಳ ನಗರ ಪ್ರದೇಶ ವ್ಯಾಪ್ತಿಯಲ್ಲಿ ಇ ಖಾತಾ ಹೊಂದಿಲ್ಲದ 30ರಿಂದ 32 ಲಕ್ಷ ಆಸ್ತಿಗಳಿಗೆ ಬಿ-ಖಾತಾ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಇಂದು (ಜನವರಿ 27) ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳು ಇವೆ. ಈ ಪೈಕಿ 22 ಲಕ್ಷ ಆಸ್ತಿಗಳ ಮಾಲೀಕರು ಇ-ಖಾತಾ ಮಾಡಿಸಿದ್ದಾರೆ. ಆದರೆ, 30ರಿಂದ 32 ಲಕ್ಷ ಸ್ವತ್ತುಗಳಿಗೆ ಯಾವುದೇ ರೀತಿಯ ಇ-ದಾಖಲೆಗಳಿಲ್ಲ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರು ಇದೇ ಜನವರಿ 7ರಂದು ಸಭೆ ನಡಡಸಿ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಇ-ಆಸ್ತಿ ನಮೂದಿಸಿ ಬಿ-ಖಾತೆಗೆ ಸಮಾನಾಂತರ ದಾಖಲೆ ನೀಡಬೇಕೆಂದು ಸೂಚನೆ ನೀಡಿದ್ದಾರೆ. ಆದ್ದರಿಂದ ಮುಖ್ಯಕಾರ್ಯದರ್ಶಿಯವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಲಾಗಿದೆ. ಫೆಬ್ರವರಿ 10ರೊಳಗೆ ಸುತ್ತೋಲೆ ಹೊರಡಿಸಿ, ಬಾಕಿಯಿರುವ ಆಸ್ತಿಗಳಿಗೆ ಗರಿಷ್ಠ 3 ತಿಂಗಳೊಳಗೆ ಅಭಿಯಾನ ಮಾದರಿಯಲ್ಲಿ ಬಿ-ಖಾತಾ ಮಾಡಿಸಿಕೊಡಬೇಕೆಂದು ಸೂಚಿಸಲಾಗಿದೆ ಎಂದರು.
ಅನಧಿಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಅದನ್ನು ಪಾಲಿಸಬೇಕಾದ ತುರ್ತು ಎದುರಾಗಿದೆ. ಆದ್ದರಿಂದ ಎಷ್ಟು ಸ್ವತ್ತುಗಳಿವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಬಳಿಕ ರಾಜ್ಯದಲ್ಲಿ ಬಿ-ಖಾತಾ ವ್ಯವಸ್ಥೆ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೂ ಇದೇ ಮಾದರಿ ಆರಂಭಿಸಲಾಗುವುದು ಎಂದು ತಿಳಿಸಿದರು.
ಪಟ್ಟಣಗಳಿಗೆ ಮೂಲಸೌಕರ್ಯ: ತೆರಿಗೆ ಪಾವತಿಸದವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಸರ್ಕಾರ ಸಮರ ಸಾರಲು ಮುಂದಾಗಿದೆ. ಹಾಗಾದರೆ ಯಾವೆಲ್ಲ ನಿಯಮಗಳನ್ನು ರೂಪಿಸಲು ನಿರ್ಧರಿಸಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬಿಬಿಎಂಪಿ ಮಾದರಿಯಲ್ಲಿ ರಾಜ್ಯದ ಉಳಿದ ಪೌರ ಸಂಸ್ಥೆಗಳಲ್ಲಿಯೂ ಬಿ ಖಾತಾ ಸಮಸ್ಯೆ ಬಗೆಹರಿಸಲು ಕಾಯ್ದೆಗೆ ಬದಲಾವಣೆ ಮಾಡಲಾಗಿದ್ದು, ಇದಕ್ಕೆ ತಕ್ಕಂತೆ ನಿಯಮಾವಳಿ ರೂಪಿಸಲಾಗುತ್ತಿದೆ. ಆಸ್ತಿ ತೆರಿಗೆ ಪರಿಷ್ಕರಿಸಿ ಅನಧಿಕೃತ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತಂದಾಗ ಪೌರ ಸಂಸ್ಥೆಗಳು ಸಶಕ್ತ ಆಗುತ್ತದೆ. ಇದರಿಂದ ನಗರ ಹಾಗೂ ಪಟ್ಟಣಗಳಿಗೆ ಮೂಲಸೌಕರ್ಯ ಒದಗಿಸಬಹುದಾಗಿದೆ.
ನಿಯಮಾವಳಿಗಳ ಪ್ರಕಾರ, ಆಸ್ತಿಗಳ ಮೇಲಿನ ಆಸ್ತಿ ತೆರಿಗೆ, ಸೆಸ್ ದಂಡ ಪಾವತಿಸದ ಪಾವತಿಸದವರು ಬಾಕಿದಾರ ಎಂದು ಪರಿಗಣಿಸಲ್ಪಡುತ್ತಾರೆ. ಅವರಿಗೆ ಶೋಕಾಸ್ ನೋಟಿಸ್ ನೀಡಲಾಗುವುದು. ನಂತರ ಆಸ್ತಿಗಳ ಪರಿಶೀಲನೆ ನಡೆಸಲಾಗುತ್ತದೆ.












Click it and Unblock the Notifications