ದೀಪಕ್ ಹತ್ಯೆ NIA ತನಿಖೆಗೆ ವಹಿಸುವಂತೆ ರಾಜನಾಥ್ ಸಿಂಗ್ ಗೆ ಮನವಿ

Posted By:
Subscribe to Oneindia Kannada

ನವದೆಹಲಿ, ಜನವರಿ 04 : ಮಂಗಳೂರಿನ ಕಾಟಿಪಳ್ಳದಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಅವರ ಕೊಲೆ ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸುವಂತೆ ಗುರುವಾರ ರಾಜ್ಯ ಬಿಜೆಪಿ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

In Pics : ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ರಾಜ್ಯ ಬಿಜೆಪಿ ಸಂಸದರು, ಬಳಿಕ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ದೀಪಕ್ ರಾವ್ ಹತ್ಯೆ ಪ್ರಕರಣವನ್ನು ಎನ್ ಐಎಗೆ ತನಿಖೆಗೆ ವಹಿಸುವಂತೆ ಮನವಿ ಪತ್ರ ಸಲ್ಲಿಸಿದರು.

Deepak Murder: State BJP MP's meet Home Minister Rajnath Singh demanded NIA probe

ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ನಳಿನ್ ಕಮಾರ್ ಕಟೀಲ್ ಸೇರಿದಂತೆ ಇತರೆ ರಾಜ್ಯ ಬಿಜೆಪಿ ಸಂಸದರು ಇದ್ದರು. ಜನವರಿ 3ರಂದು ಮಂಗಳೂರಿನ ಹೊರವಲಯದ ಕಾಟಿಪಳ್ಳದಲ್ಲಿ ದೀಪಕ್ ರಾವ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ದೀಪಕ್ ರಾವ್ ಯಾರು? ಕೊಲೆ ಆಗಲು ಕಾರಣವೇನು?

ಹತ್ಯೆಯಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಮಿಂಚಿನ ಕಾರ್ಯಚರಣೆ ನಡೆಸಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು (ಗುರುವಾರ)ಜನತಾ ಕಾಲೋನಿಯಲ್ಲಿರುವ ಹಿಂದೂ ರುದ್ರಭೂಮಿ ದೀಪಕ್ ರಾವ್ ಅಂತ್ಯಕ್ರಿಯೆ ನಡೆಯಿತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP MP's meet Union Home Minister Rajnath Singh in New Delhi and demanded NIA probe into alleged political murders. State BJP leaders also demanded compensation for Deepak Rao's family.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ