ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೀಪಾವಳಿ 2022: ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಹೊಡೆಯಲು ಅನುಮತಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್‌ 19: ಮುಂಬರುವ ದೀಪಾವಳಿ ಹಬ್ಬದಲ್ಲಿ ಪಟಾಕಿಗಳನ್ನು ಸಿಡಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನಾಗರಿಕರಿಗೆ ಕೇವಲ ಎರಡು ಗಂಟೆಗಳ ಕಾಲ ಅಂದರೆ ರಾತ್ರಿ 8 ರಿಂದ 10 ರವರೆಗೆ ಮಾತ್ರ ಅನುಮತಿ ನೀಡಿದೆ.

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಅನುಸರಿಸಿ ಬೆಂಗಳೂರಿನಲ್ಲಿ ವಾಯು ಮತ್ತು ಧ್ವನಿ ಮಾಲಿನ್ಯದ ಮಟ್ಟವನ್ನು ಪರಿಶೀಲಿಸಲು ಈ ಎರಡು ಗಂಟೆಗಳಲ್ಲಿ ಮಾತ್ರ ಪಟಾಕಿ ಸಿಡಿಸುವುದನ್ನು ನಿರ್ಬಂಧಿಸುವಂತೆ ಕೆಎಸ್‌ಪಿಸಿಬಿ, ಬಿಬಿಎಂಪಿ, ಬೆಂಗಳೂರು ಜಿಲ್ಲಾಡಳಿತ ಮತ್ತು ಪೊಲೀಸ್ ಆಯುಕ್ತರಂತಹ ಕಾನೂನು ಜಾರಿ ಸಂಸ್ಥೆಗಳಿಗೆ ಪತ್ರಗಳ ಸರಣಿಯಲ್ಲಿ ಒತ್ತಾಯಿಸಿದೆ. ಅಲ್ಲದೆ, ಬೆಂಗಳೂರಿನಲ್ಲಿ ಕೇವಲ ಹಸಿರು ಪಟಾಕಿ ಮಾರಾಟಕ್ಕೆ ಅನುಮತಿ ನೀಡುವಂತೆ ಕೆಎಸ್‌ಪಿಸಿಬಿ ನಿರ್ದೇಶನ ನೀಡಿದ್ದು, ಪರಿಸ್ಥಿತಿಯನ್ನು ಸಮನ್ವಯಗೊಳಿಸಲು ಮತ್ತು ಮೇಲ್ವಿಚಾರಣೆ ಮಾಡಲು ನಿಯಂತ್ರಣಾಧಿಕಾರಿಗಳನ್ನು ನೇಮಿಸಿದೆ.

Deepavali 2022: Bursting of firecrackers allowed only from 8 to 10 pm only

ಕೆಎಸ್‌ಪಿಸಿಬಿ ಮಂಡಳಿಯು ದೀಪಾವಳಿಯ ಮೊದಲು ಮತ್ತು ಏಳು ದಿನಗಳ ನಂತರ ಗಾಳಿ ಹಾಗೂ ಧ್ವನಿ ಮಟ್ಟಗಳ ಗುಣಮಟ್ಟವನ್ನು ನಿರ್ಣಯಿಸುತ್ತದೆ. ರಿಟ್ ಅರ್ಜಿ 728/2015 ಗೆ ಸಂಬಂಧಿಸಿದಂತೆ ಅಕ್ಟೋಬರ್ 2018ರಲ್ಲಿ ನೀಡಲಾದ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲೇಖಿಸಿ, ಮಾಲಿನ್ಯ ನಿಯಂತ್ರಣ ಸಂಸ್ಥೆಯು ಅವುಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ದೇಶಿಸಿದೆ.

Deepavali 2022: Bursting of firecrackers allowed only from 8 to 10 pm only

ರಾತ್ರಿ 8ರಿಂದ ರಾತ್ರಿ 10 ರವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. ಹಬ್ಬದ ದಿನಗಳ ಇತರ ಸಮಯಗಳಲ್ಲಿ ಪಟಾಕಿಯನ್ನು ನಿಷೇಧಿಸಿದೆ. ಇದಲ್ಲದೆ, ಇದು ಹಸಿರು ಹೊರತುಪಡಿಸಿ ಎಲ್ಲಾ ರೀತಿಯ ಪಟಾಕಿಗಳನ್ನು ನಿಷೇಧಿಸಿದೆ. ಆದ್ದರಿಂದ, ಎಲ್ಲಾ ಸಂಸ್ಥೆಗಳು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಮಾಡಲೇಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಆದಾಗ್ಯೂ, ಕೆಎಸ್‌ಪಿಸಿಬಿ ಅಥವಾ ಯಾವುದೇ ಜಾರಿ ಸಂಸ್ಥೆಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಶಿಕ್ಷೆಗೆ ಮುಂದಾಗಿಲ್ಲ.

English summary
Karnataka State Pollution Control Board has allowed citizens to burst firecrackers during Diwali festival only from 8 pm to 10 pm for two hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X