ದೀಪಾವಳಿ; ಹಸಿರು ಪಟಾಕಿಗಳನ್ನು ಗುರುತಿಸುವುದು ಹೇಗೆ?
ಬೆಂಗಳೂರು, ನವೆಂಬರ್ 12; ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಶನಿವಾರದಿಂದಲೇ ಪಟಾಕಿ ಸಿಡಿಸುವುದು ಆರಂಭವಾಗಿದೆ. ಹಬ್ಬದ ಸಮಯದಲ್ಲಿ ಹಸಿರು ಪಟಾಕಿ ಸಿಡಿಸಿ, ಪರಿಸರ ರಕ್ಷಣೆ ಸಹಕರಿಸಿ ಎಂದು ಜನರಿಗೆ ಮನವಿ ಮಾಡಲಾಗಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗದಿಪಡಿಸಿರುವ ಮಾನದಂಡಗಳನ್ನು ಅನುಷ್ಠಾನಗೊಳಿಸಲು ಜನರು ಸಹಕಾರ ನೀಡಬೇಕು ಎಂದು ಕರೆ ನೀಡಲಾಗಿದೆ.

ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯತಕ್ಕದ್ದು ಎಂದು ತಿಳಿಸಲಾಗಿದೆ.
ಹಸಿರು ಪಟಾಕಿಗಳನ್ನು ಮಾತ್ರ ಬಳಸಿ; ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ ಹಸಿರು ಪಟಾಕಿಗಳ ಹೊರತು ಪಡಿಸಿ ಉಳಿದ ಪಟಾಕಿಗಳನ್ನು ಬಳಕೆ ಮಾಡಬಾರದು. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ.
ಹಸಿರು ಪಟಾಕಿಗಳು ಕಡಿಮೆ ಗಾತ್ರದಲ್ಲಿರುತ್ತವೆ. ಇವುಗಳ ತಯಾರಿಕೆಯಲ್ಲಿ ಬಳಸುವ ರಾಸಾಯನಿಕವು ಶೇ.30 ರಿಂದ 40 ರಷ್ಟು ಕಡಿಮೆ ಪ್ರಮಾಣದಲ್ಲಿರುತ್ತದೆ. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಹೊರಸೂಸುವ ರಾಸಾಯನಿಕ ಹೊಗೆ ಧೂಳನ್ನು ಕಡಿಮೆ ಮಾಡುವ ವಾತಾವರಣ ಪರಿವೇಷ್ಠಕ ಗಾಳಿಯಲ್ಲಿ ತೇಲಾಡುವ ಧೂಳಿನ ಕಣಗಳು So2 ಮತ್ತು No2 ಅಂಶಗಳ ಪ್ರಮಾಣವು ಶೇ.30 ರಷ್ಟು ಕಡಿಮೆಯಾಗಿರಲಿದೆ.
125 ಡೆಸಿಬಲ್‍ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ನವದೆಹಲಿಯ ಹಸಿರು ನ್ಯಾಯ ಪೀಠದ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್ ಕೋಡ್ ಇರುವ ಹಸಿರು ಪಟಾಕಿ (ಕಡಿಮೆ ಮಾಲಿನ್ಯ ಉಂಟುಮಾಡುವ) ಗಳನ್ನು ಮಾತ್ರ ಮಾರಾಟ ಮಾಡಬೇಕಿದೆ.
ದಿನದ ಯಾವುದೇ ಸಮಯದಲ್ಲಿ ನಿಶಬ್ಧವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳಲ್ಲಿ (ಆಸ್ಪತ್ರೆ, ಶಾಲೆ, ಪ್ರಾರ್ಥನಾಮಂದಿರ, ವೃದ್ಧಾಶ್ರಮ ಇತ್ಯಾದಿಗಳು) ಸುತ್ತ ಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುತ್ತದೆ. ಆದುದರಿಂದ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ ಹಾಗೂ ವಾಯು ಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿ, ಪರಿಸರ ಸ್ನೇಹಿ ದೀಪಾವಳಿಯನ್ನಾಗಿ ಆಚರಿಸಲು ಮನವಿ ಮಾಡಲಾಗಿದೆ.
ದೀಪಾವಳಿ ಸಂದರ್ಭದಲ್ಲಿ ಪಟಾಕಿಗಳನ್ನು ಸಿಡಿಸುವುದರಿಂದ ಉಂಟಾಗುವ ಶಬ್ದಮಾಲಿನ್ಯದಿಂದ ಸಾಕು ಪ್ರಾಣಿ, ಜಾನುವಾರುಗಳು ಆತಂಕ ಹಾಗೂ ಭೀತಿಪಡುವ, ಹಲವು ದಿನಗಳ ಕಾಲ ಆಹಾರವನ್ನು ತ್ಯಜಿಸುವ ಹಾಗೂ ಮೂಲ ಸ್ಥಾನದಿಂದ ಪಲಾಯನ ಮಾಡುವ ಸಂಭವವಿರುತ್ತದೆ ಎಂದು ಮಾಹಿತಿ ನೀಡಲಾಗಿದೆ.
ಭಾರಿ ಶಬ್ದ ಬರುವ ಪಟಾಕಿಗಳನ್ನು ಹಚ್ಚದಂತೆ ಮನವಿ ಮಾಡಲಾಗಿದೆ. ಸಿಡಿಮದ್ದುಗಳನ್ನು ಸ್ಪೋಟಿಸುವುದರಿಂದ ಪರಿಸರ ಮಾಲಿನ್ಯ, ಶಬ್ದಮಾಲಿನ್ಯದಿಂದ ಸಾಕು ಪ್ರಾಣಿ, ಜಾನುವಾರುಗಳಿಗೆ ಹಾಗೂ ಅನಾರೋಗ್ಯ ಪೀಡಿತ ಜಾನುವಾರುಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ.
ಪ್ರತಿಜ್ಞೆಯನ್ನು ಮಾಡಿ; ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ಪರಿಸರ ಸ್ನೇಹಿ ಹಬ್ಬವನ್ನಾಗಿ ಆಚರಿಸಲು ಎಲ್ಲರಿಗೂ ಮನವಿ ಮಾಡಲಾಗಿದೆ. ದೀಪಾವಳಿ ಆಚರಿಸುವ ಸಂದರ್ಭದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಪೋಟಿಸುವುದರಿಂದ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಮತ್ತು ತ್ಯಾಜ್ಯ ಉತ್ಪಾದನೆಯಾಗಲಿದ್ದು, ಅದನ್ನು ತಡೆಗಟ್ಟಲು ಪರಿಸರಸ್ನೇಹಿ ವಸ್ತುಗಳನ್ನು ಬಳಸುವುದು ಹಾಗೂ ತ್ಯಾಜ್ಯದಿಂದ ಉಪಯುಕ್ತ ವಸ್ತುಗಳನ್ನು ಸಿದ್ಧಪಡಿಸಿ ದೀಪಾವಳಿ ಉಡುಗೊರೆ ನೀಡಬಹುದು.
https://pledge.mygov.in/swachh.divali-shubh-diwali ಲಿಂಕ್ ಮೂಲಕ ಸ್ವಚ್ಛ ದೀಪಾವಳಿ ಶುಭ ದೀಪಾವಳಿ ಆಚರಿಸುವ ಬಗ್ಗೆ ಪ್ರತಿಜ್ಞೆ ಪಡೆದು ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಜನರಿಗೆ ಮನವಿ ಮಾಡಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications