Deepavali 2025: ಕರ್ನಾಟಕದಲ್ಲಿ ಪಟಾಕಿ ಸಿಡಿಸುವವರು ಗಮನಿಸಬೇಕಾದ ಪ್ರಮುಖ ಅಂಶಗಳು
Deepavali 2025: ದೀಪಾವಳಿಗೆ ಇನ್ನೂ ಕೇವಲ ಎರಡು ದಿನಗಳು ಮಾತ್ರ ಬಾಕಿ ಇವೆ. ಈಗಾಗಲೇ ಹಬ್ಬಕ್ಕೆ ಎಲ್ಲಾ ತಯರಿಗಳನ್ನು ಜನರು ಮಾಡಿಕೊಂಡಿದ್ದಾರೆ. ಅದರಲ್ಲೂ ಇದೀಗ ಪಟಾಕಿ ಸಿಡಿಸುವ ಮೂಲಕ ಈ ಹಬ್ಬವನ್ನು ಸಂಭ್ರಸುವವರೇ ಹೆಚ್ಚು. ಆದ್ದರಿಂದ ಪ್ರತಿಬಾರಿಯಂತೆ ಈ ಬಾರಿಯೂ ರಾಜ್ಯದಲ್ಲಿ ಪಟಾಕಿ ಬಳಕೆ ಸಂಬಂಧಪಟ್ಟಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಹಾಗಾದ್ರೆ, ಅದರಲ್ಲಿ ಏನಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೇವಲ ಎರಡೇ ದಿನಗಳಲ್ಲಿ ದೀಪಾವಳಿ ಎಂಟ್ರಿ ಕೊಡಲಿದ್ದು, ಬಹುತೇಕ ಮಂದಿ ಈ ವೇಳೆ ಪಟಾಕಿ ಹೊಡೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಹಿನ್ನೆಲೆ ಪಟಾಕಿ ಬಳಕೆ ಸಂಬಂಧಪಟ್ಟಂತೆ ಇದೀಹ ಮಹತ್ವದ ಆದೇಶವೊಂದು ಹೊರಬಿದ್ದಿದೆ. ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಒತ್ತು ನೀಡುವ ದೃಷ್ಟಿಯಿಂದ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಕೆ ಮಾಡಬೇಕು ಎಂದು ಮಂಡಳಿ ಸ್ಪಷ್ಟನೆ ನೀಡಿದೆ.

ಪಟಾಕಿ ಸಿಡಿಸುವ ಸಮಯಗಳ ವಿವರ: ರಾಜ್ಯದ ಯಾವುದೇ ಭಾಗದಲ್ಲಿ ರಾತ್ರಿ 10 ಗಂಟೆಯ ಬಳಿಕ ಪಟಾಕಿ ಸಿಡಿಸುವಂತಿಲ್ಲ. ಜೊತೆಗೆ ಅಧಿಕ ಹೊಗೆ ಹಾಗೂ ನಿಗದಿತ ಡೆಸಿಬಲ್‌ಗಿಂತ ಅಧಿಕ ಶಬ್ಧ ಮಾಡುವ ಎಲ್ಲಾ ರೀತಿಯ ಪಟಾಕಿಗಳನ್ನೂ ನಿಷೇಧಿಸಲಾಗಿದೆ. ನಿಗದಿತ ಅವಧಿಯೊಳಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಿ ಪರಿಸರ ಸಂರಕ್ಷಣೆಗೆ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಅಕ್ಟೋಬರ್ 21 ಮತ್ತು 22ರಂದು ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದ್ರೆ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಡಳಿ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಇನ್ನು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಿದೆ.
ಅಲ್ಲದೆ, ನಿಷೇಧಿತಗೊಂಡ ಪಟಾಕಿಗಳನ್ನು ಮಾರಾಟ ಮಾಡುವವರು ಮತ್ತು ಕಾನೂನುಬಾಹಿರವಾಗಿ ಸಂಗ್ರಹಿಸಿಡುವವರ ವಿರುದ್ಧವೂ ಪರಿಸರ ಸಂರಕ್ಷಣಾ ಕಾಯಿದೆಯ ಅಡಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಿದೆ. ಹಬ್ಬದ ಸಮಯದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಹೇಳಾಗುತ್ತಿದೆ.
ಸಾಮಾನ್ಯವಾಗಿ ದೀಪಾವಳಿ ಹಬ್ಬ ಬಂತೆಂದರೆ ಸಾಕು ಬಹುತೇಕ ಮಂದಿ ಹೆಚ್ಚು ಶಬ್ಧ ಬರುವ ಡೆಸಿಬಲ್ ಜಾಸ್ತಿ ಇರುವ ಪಟಾಕಿಗಳ ಮೊರೆ ಹೋಗುತ್ತಿರುವುದು ಹೆಚ್ಚಾಗುತ್ತಿದೆ. ಇದರಿಂದ ಪರಿಸರಕ್ಕೆ ಜೀವಸಂಕುಲಗಳಿಗೆ ಹಾನಿಕರಕ. ಆದ್ದರಿಂದ ಇವುಗಳ ಬದಲಾಗಿದೆ ಹಸಿರು ಪಟಾಕಿಗಳನ್ನೇ ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ.
ಯಾರೆಲ್ಲಾ ಕ್ರಮ ಕೈಗೊಳ್ಳಬಹುದು?: ಪಟಾಕಿ ಸಂಗ್ರಹ ಮತ್ತು ಮಾರಾಟ ನಿಷೇಧಿಸಲು ಹಾಗೂ ಕ್ರಮ ಕೈಗೊಳ್ಳಲು ನಗರ ಪಾಲಿಕೆಗಳು, ಸ್ಥಳೀಯ ಸಂಸ್ಥೆಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ಪೊಲೀಸ್ ಮಹಾ ನಿರ್ದೇಶಕರು, ಪೊಲೀಸ್ ಆಯುಕ್ತರು, ಸಾರಿಗೆ ಆಯುಕ್ತರು, ವಾಣಿಜ್ಯ, ಪಶುಸಂಗೋಪನೆ, ಶಿಕ್ಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಅಗ್ನಿಶಾಮಕ ಮಹಾ ನಿರ್ದೇಶಕರಿಗೆ ಅಧಿಕಾರ ನೀಡಲಾಗಿದೆ. ಇನ್ನು ಸಾಂಪ್ರದಾಯಿಕ ಪಟಾಕಿಗಳಿಗೆ ಹೋಲಿಸಿದರೆ ಕಡಿಮೆ ವಾಯು ಮತ್ತು ಶಬ್ದ ಮಾಲಿನ್ಯವನ್ನು ಉಂಟುಮಾಡುವ ಪರಿಸರ ಸ್ನೇಹಿ ಪಟಾಕಿಗಳೇ ಹಸಿರು ಪಟಾಕಿಗಳಾಗಿದೆ. ಇವುಗಳು ಪರಿಸರಕ್ಕೆ ಅಷ್ಟೊಂದು ಮಾರಕ ಪರಿಣಾಮ ಬಿರುವುದಿಲ್ಲ. ಇವು ಸಾಮಾನ್ಯ ಪಟಾಕಿಗಳಿಗಿಂತ ಕಡಿಮೆ ವಾಯು ಮಾಲಿನ್ಯವನ್ನು ಹೊರಸೂಸುತ್ತವೆ. ಈ ಹಸಿರು ಪಟಾಕಿಗಳಲ್ಲಿ ಲೀಥಿಯಂ, ಆರ್ಸೆನಿಕ್, ಬೇರಿಯಂ ನೈಟ್ರೇಟ್ ಮತ್ತು ಸತುವಿನಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸುವುದಿಲ್ಲ. ಆದ್ದರಿಂದ ಇವುಗಳಿ ಪರಿಸರಕ್ಕೆ ಹಾನಿಕಾರಕ ಅಲ್ಲ. ಆದ್ದರಿಂದ ಈ ಹಸಿರು ಪಟಾಕಿಗಳನ್ನೇ ಬಳಕೆ ಮಾಡಿ ಎಂದು ಸೂಚನೆ ನೀಡಲಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications