ದೀಪಾವಳಿ ಹಬ್ಬ: ದೇಶದ ರೈತರಿಗೆ ಬಂಪರ್ ಗುಡ್‌ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ!
Minimum Support price for Paddy: ಕೇಂದ್ರ ಬಿಜೆಪಿ ಸರ್ಕಾರವು ದೀಪಾವಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ದೇಶದ ರೈತರಿಗೆ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ದೇಶದಲ್ಲಿ ದೀಪಾವಳಿ ಸಂಭ್ರಮಾಚರಣೆ ಜೋರಾಗಿದೆ. ದೇಶದ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಬೆಳೆಗೆ ಕೇಂದ್ರ ಸರ್ಕಾರವು ಬರೋಬ್ಬರಿ 2,300 ಬೆಂಬಲ ಬೆಲೆ ಘೋಷಿಸಿದೆ.
ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಂತೆ ಕೇಂದ್ರ ಬಿಜೆಪಿ ಸರ್ಕಾರವು ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಭತ್ತದ ಬೆಂಬಲ ಬೆಲೆಯನ್ನು ಬರೋಬ್ಬರಿ 2,300 ರೂಪಾಯಿ ಹೆಚ್ಚಳ ಮಾಡಿ ಆದೇಶಿಸಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರು ಈ ವಿಷಯವನ್ನು ತಿಳಿಸಿದ್ದಾರೆ. ಭತ್ತದ ಬೆಂಬಲ ಬೆಲೆಯನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಮಾಡುವ ಮೂಲಕ ರೈತರ ಸಂತೋಷವನ್ನು ಹೆಚ್ಚಿಸಲಾಗಿದೆ.

ಎರಡು ಪಟ್ಟು ಬೆಂಬಲ ಬೆಲೆ: ಇದೀಗ ಕೇಂದ್ರ ಸರ್ಕಾರವು ಬೆಂಬಲ ಬೆಲೆಯನ್ನು ಹೆಚ್ಚಳ ಮಾಡುವ ಮೂಲಕ ಭತ್ತದ ಮೇಲಿನ ಬೆಂಬಲ ಬೆಲೆಯು 2,00 ರೂಪಾಯಿಗೆ ತಲುಪಿದೆ. 2013-14ರಿಂದ ಪ್ರತಿ ಕ್ವಿಂಟಲ್ ಭತ್ತಕ್ಕೆ 1,310 ರೂಪಾಯಿ ನೀಡಲಾಗುತ್ತಿತ್ತು. ಈಗ ಅದನ್ನು 2,300 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಈ ಬಾರಿಯ ಮುಂಗಾರು ಹಂಗಾಮಿನ ಬರೋಬ್ಬರಿ 185 ಲಕ್ಷ ಟನ್ ಭತ್ತ ಹಾಗೂ 124 ಲಕ್ಷ ಟನ್ ಅಕ್ಕಿ ಸಂಗ್ರಹ ಮಾಡುವ ಗುರಿಯನ್ನು ಹಾಕಿಕೊಂಡಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮುಂಗಾರಿನಲ್ಲಿ ಭತ್ತ ಸಂಗ್ರಹಿಸುವುದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಅಲ್ಲದೇ ಈ ಬಾರಿ 14 ಎಲ್‌ಎಂಟಿ (ಮೆಟ್ರಿಕ್ ಟನ್) ಭತ್ತ ಸಂಗ್ರಹ ಮಾಡುವುದಕ್ಕೆ ಬೇಕಾಗಿರುವ ಸ್ಥಳಾವಕಾಶ ಇದೆ. ಅಲ್ಲದೇ ಪಂಜಾಬಿನಲ್ಲಿ ಸಂಗ್ರಹಿಸಲಾಗಿರುವ ಅಕ್ಕಿಯನ್ನು ಬೇಗ ಸ್ಥಳಾಂತರ ಮಾಡಲಾಗುತ್ತಿದೆ. ಅಕ್ಟೋಬರ್ 1ರಿಂದ 2700 ಕಡೆಗಳಲ್ಲಿ ಭತ್ತ ಸಂಗ್ರಹಣೆ ಪ್ರಾರಂಭಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 50 LMT (ಮೆಟ್ರಿಕ್ ಟನ್) ಭತ್ತವನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ ಸಲಾಗಿದೆ ಎಂದರು.
ಹಿಂದೂ ಹಬ್ಬಕ್ಕೆ ಮಾತ್ರ ನಿರ್ಬಂಧವೇಕೆ ?
ಇನ್ನು ರಾಜ್ಯ ಸರ್ಕಾರ ಹಿಂದೂಗಳ ಹಬ್ಬಕ್ಕೆ ಮಾತ್ರ ಏಕೆ ಈ ರೀತಿ ನಿರ್ಬಂಧ ಹೇರುತ್ತಿದೆ ಎಂದು ಪ್ರಹ್ಲಾದ್ ಜೋಶಿ ಇದೇ ಸಂದರ್ಭದಲ್ಲಿ ಪ್ರಶ್ನೆ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದೂಗಳ ಹಬ್ಬ ಬಂದ ಸಂದರ್ಭದಲ್ಲಿ ಮಾತ್ರ ಕೆಲವು ನಿರ್ದಿಷ್ಟ ಷರತ್ತುಗಳನ್ನು ಜಾರಿ ಮಾಡ್ತಿದೆ. ಈ ಸರ್ಕಾರದ ಪೌರುಷ ಹಿಂದೂ ಹಬ್ಬಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಹಸಿರು ಪಟಾಕಿಗೆ ಅವಕಾಶ ನೀಡಿದೆ. ಕೆಲವು ನಿರ್ದಿಷ್ಟ ಪಟಾಕಿಗಳನ್ನು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ನಿಷೇಧಿಸುತ್ತಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ. ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.












Click it and Unblock the Notifications