ಡಿ. ರೂಪಾ ರೋಹಿಣಿ ಸಿಂಧೂರಿ ಪ್ರಕರಣಕ್ಕೆ ಹೊಸ ತಿರುವು

ಬೆಂಗಳೂರು, ಆಗಸ್ಟ್‌ 22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಕಾನೂನು ಹೋರಾಟಕ್ಕೆ ಹೊಸ ತಿರುವು ಸಿಕ್ಕಿದೆ. ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.

ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದೂರನ್ನು ರದ್ದುಪಡಿಸುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Defamation Case Against D Roopa By Rohini Sindhuri HC Refuse To Quash Case

ಡಿ. ರೂಪಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪುನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮೊಗದಂ ಅವರ ಪೀಠ ಸೋಮವಾರ ಪ್ರಕಟಿಸಿದೆ. ವಿವರವಾದ ತೀರ್ಪು ಇನ್ನೂ ಬಿಡುಗಡೆಯಾಗಬೇಕಿದೆ.

ಪ್ರಕರಣದ ಹಿನ್ನೆಲೆ: ಡಿ. ರೂಪಾ ಮೌದ್ಗಿಲ್ ಅವರು 2023ರ ಫೆ.14 ಮತ್ತು 16ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ ಎಂದು ರೋಹಿಣಿ ಸಿಂಧೂರಿ ದೂರು ದಾಖಲಿಸಿದ್ದರು.

ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದ್ದಾರೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾ.3ರಂದು ಅಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆ ಮಾಡಿದ್ದರು.

ಅಲ್ಲದೇ, ಮಾನಹಾನಿ ಮಾಡಿ ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ. ರೂಪಾ ಅವರಿಂದ 1 ಕೋಟಿ ರೂಪಾಯಿಯನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ಈ ದೂರು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಮಾ.24ರಂದು ಆದೇಶಿಸಿತ್ತು. ಡಿ. ರೂಪಾ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.

ಈ ಆದೇಶ ಮತ್ತು ಖಾಸಗಿ ದೂರನ್ನು ರದ್ದುಪಡಿಸುವಂತೆ ಕೋರಿ ರೂಪಾ ಅವರು 2023ರ ಮೇನಲ್ಲಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ.4ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+