ಬೊಮ್ಮಾಯಿ ಪುತ್ರನ ಸೋಲು: ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ಕುತ್ತು? ರಾಜ್ಯ ಬಿಜೆಪಿಯಲ್ಲಿ ಹೊಸ ಆಟ ಶುರು
ಬೆಂಗಳೂರು, ನವೆಂಬರ್ 25: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಶಿಗ್ಗಾಂವಿ ಮತ್ತು ಸಂಡೂರಿನಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿತ್ತು. ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ದೊಡ್ಡ ಅಂತರದಲ್ಲಿ ಗೆಲ್ಲುವ ಬಗ್ಗೆ ಎರಡೂ ಪಕ್ಷಗಳಿಗೂ ವಿಶ್ವಾಸವಿತ್ತು. ಆದರೆ, ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರ್ಜರಿ ಗೆಲುವು ಸಾಧಿಸಿದ್ದರು. ಬಳಿಕ 2024 ರ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಅವರನ್ನ ಬಿಜೆಪಿ ಹೈಕಮಾಂಡ್ ಕಣಕ್ಕಿಳಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಬಸವರಾಜ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದರು. ಬೊಮ್ಮಾಯಿ ಲೋಕಸಭಾ ಚುನಾವಣೆಯಲ್ಲಿ ಗೆಲುವಿನಿಂದಾಗಿ ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿದ್ದರು.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆ ನವೆಂಬರ್ 13 ರಂದು ನಡೆದಿದ್ದು, ನವೆಂಬರ್ 23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಈ ಉಪಚುನಾವಣೆಯಲ್ಲಿ ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಅವರು ಹೀನಾಯವಾಗಿ ಸೋಲು ಅನುಭವಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂದು ಅತಿಯಾದ ವಿಶ್ವಾಸವನ್ನ ಬಿಜೆಪಿ ನಾಯಕರು ಇಟ್ಟುಕೊಂಡಿದ್ದು, ಇದೀದ ಭರತ್ ಬೊಮ್ಮಾಯಿ ಸೋಲಿನಿಂದ ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ಕುತ್ತು ಬಂದಾಂತಾಗಿದೆ.
ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಅವರ ತಂದೆ ಬಿ.ಎಸ್.ಯಡಿಯೂರಪ್ಪ ಕಾರಣ. ಅವರು ಕಾಂಗ್ರೆಸ್‌ನೊಂದಿಗೆ ಮಾಡಿಕೊಂಡ ಒಳ ಒಪ್ಪಂದದಿಂದಲೇ ಬಿಜೆಪಿಗೆ ಇಂಥ ದುಃಸ್ಥಿತಿ ಬಂದಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ಅಲ್ಲದೇ ಮೊದಲಿನಿಂದಲೂ ವಿಜಯೇಂದ್ರ ನಾಯಕತ್ವವನ್ನು ವಿರೋಧಿಸಿಕೊಂಡು ಬರುತ್ತಿದ್ದ ಯತ್ನಾಳ್ ಅಂಡ್ ಟೀಂಗೆ ಉಪ ಚುನಾವಣೆಯ ಫಲಿತಾಂಶ ಖುಷಿ ತಂದಂತೆ ಕಾಣುತ್ತಿದೆ.
ವಿಜಯೇಂದ್ರ ಅವರನ್ನ ನಾವು ರಾಜ್ಯಾಧ್ಯಕ್ಷರು ಎಂದು ಒಪ್ಪುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಹಿರಂಗವಾಗಿಯೇ ಹೇಳಿಕೆಯನ್ನ ನೀಡಿದ್ದರು. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಹಲವು ಬಾರೀ ಗುಪ್ತವಾಗಿ ಯತ್ನಾಳ್ ಅಂಡ್ ಟೀಂ ಸಭೆಯನ್ನ ನಡೆಸಿದ್ದರು. ಇದೀಗ ಈ ಮೂರು ಸೋಲುಗಳಿಂದ ವಿಜಯೇಂದ್ರ ಭವಿಷ್ಯ ಅತಂತ್ರವಾಗುತ್ತಾ? ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಲಿದ್ದಾರೆ ಎಂದು ಹೇಳಲಾಗಿದೆ.
ವಿಜಯೇಂದ್ರ ಅವರನ್ನು ಕೆಳಗಿಳಿಸಲು ಈಗ ಯತ್ನಾಳ್ ಅಂಡ್ ಟೀಂ ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿದೆ. ಮೊದಲೇ ಯತ್ನಾಳ್‌ಗೆ ವಿಜಯೇಂದ್ರ ಅವರನ್ನು ಕಂಡ್ರೆ ಆಗಲ್ಲ.. ಮೊದಲಿನಿಂದಲೂ ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕು ಎಂದು ಹೈಕಮಾಂಡ್ ಮುಂದೆ ಒತ್ತಡ ಹಾಕುತ್ತಿದ್ದರು, ಇದೀಗ ವಿಜಯೇಂದ್ರ ಅವರನ್ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಒಂದೊಳ್ಳೆ ರೀಸನ್ ವಿರೋಧಿ ಬಣಕ್ಕೆ ಸಿಕ್ಕಿದೆ. ವಿಜಯೇಂದ್ರ ನಾಯಕತ್ವದಲ್ಲಿ ಬಿಜೆಪಿ ಸೋತಿದೆ. ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಎಂದು ಹೈಕಮಾಂಡ್ ಮುಂದೆ ಬಲವಾಗಿ ಹೇಳುವ ಸಾಧ್ಯತೆ ಇದೆ.
ಇನ್ನೂ ವಿಜಯೇಂದ್ರ ಅವರಿ ರಾಜ್ಯಾಧ್ಯಕ್ಷರಾದ ಬಳಿಕ ವಿಜಯೇಂದ್ರ ನಾಯಕತ್ವದಲ್ಲಿ ನಡೆದ ಯಾವುದೇ ಪ್ರತಿಭಟನೆಯಾಗಲಿ, ಪಾದಯಾತ್ರೆಯಾಗಲಿ ಯಾವುದಕ್ಕೂ ಯತ್ನಾಳ್ ಅಂಡ್ ಟೀಂ ಹೋಗಿಲ್ಲ, ಈ ಮೂಲಕ ನಾವು ವಿಜಯೇಂದ್ರ ನಾಯಕತ್ವ ಒಪ್ಪಿಲ್ಲ ಎಂದು ಬಹಿರಂಗಾವಾಗಿಯೇ ಸಂದೇಶ ಕೊಟ್ಟಿದ್ದರು. ಅಲ್ಲದೇ ಬೊಮ್ಮಾಯಿ ಅವರ ಕ್ಷೇತ್ರದಲ್ಲಿ ಭರತ್ ಬೊಮ್ಮಾಯಿ ಅವರು ಸೋಲು ಕಂಡಿರುವುದು ವಿಜಯೇಂದ್ರ ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಯ ಬೀರಲಿದ್ಯಾ ಎಂಬ ಪ್ರಶ್ನೆಗಳು ಉದ್ಭವಿಸಿದೆ.
ಇನ್ನೂ ಮೂರು ಕ್ಷೇತ್ರಗಳ ಸೋಲಿನ ಹೊಣೆಯನ್ನು ವಿಜಯೇಂದ್ರ ತಲೆಗೆ ಕಟ್ಟಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಯತ್ನಾಳ್ ಅಂಡ್ ಟೀಂ ಕಾಯುತ್ತಿದೆ ಎಂದು ಹೇಳಲಾಗಿದೆ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸಾರಥಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ ವಿರೋಧಿ ಬಣ ಹೈಕಮಾಂಡ್ ನಾಯಕರ ಮುಂದೆ ಒತ್ತಡವನ್ನ ಹಾಕಿತ್ತು. ಇದೀಗ ಇವರಿಬ್ಬರ ಕಿತ್ತಾಟ ಪಕ್ಷಕ್ಕೆ ದೊಡ್ಡ ಪರಿಣಾಮ ಬೀರಲಿದೆ. ಹೀಗಾಗಿ ವಿಜಯೇಂದ್ರ ವಿಷಯದಲ್ಲಿ ಹೈಕಮಾಂಡ್ ಗಂಭೀರವಾದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದ್ದು, ಲೋಕಸಭೆ ಚುನಾವಣೆಯಲ್ಲೂ ಕೂಡ ಕರ್ನಾಟಕದಲ್ಲಿ ಹಿನ್ನಡೆಯಾಗಿತ್ತು. ಹೀಗಾಗಿ ಈ ಎಲ್ಲಾ ಬೆಳವಣಿಗೆಯಿಂದಾಗಿ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು ಬೀಳುವ ಸಾಧ್ಯತೆ ಹೆಚ್ಚಾಗಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications