ಮೇ 30ರೊಳಗೆ ಆನ್‌ಲೈನ್‌ನಲ್ಲಿ ಪದವಿ ಪಠ್ಯಕ್ರಮ ಪೂರ್ಣಗೊಳಿಸಿ: ಡಾ.ಅಶ್ವತ್ಧನಾರಾಯಣ ಸೂಚನೆ
ಬೆಂಗಳೂರು, ಮೇ 9 : ''ಕೋವಿಡ್-19 ಲಾಕ್ ಡೌನ್ ನಿಂದ ಪದವಿ ವಿದ್ಯಾರ್ಥಿಗಳ ಶಿಕ್ಷಣ ಮತ್ತಷ್ಟು ವಿಳಂಬವಾಗದಂತೆ ನೋಡಿಕೊಳ್ಳುವ ಸಲುವಾಗಿ ಪದವಿ ತರಗತಿಗಳ ಪಠ್ಯಕ್ರಮವನ್ನು ಆನ್ ಲೈನ್ ನಲ್ಲಿ ಮುಂದುವರಿಸಿ, ಮೇ 30 ರೊಳಗೆ ಪೂರ್ಣಗೊಳಿಸಬೇಕು'' ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚಿಸಿದ್ದಾರೆ.
ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಶನಿವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದ ಡಾ.ಅಶ್ವತ್ಥನಾರಾಯಣ, "ಪದವಿ ಪರೀಕ್ಷೆಗಳ ಕುರಿತು ಮೇ 17ರ ನಂತರ ಮತ್ತೊಮ್ಮೆ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುವುದು" ಎಂದರು.
"ಎಲ್ಲ ಪ್ರಾಧ್ಯಾಪಕರು ಕಾಲೇಜಿಗೆ ಬಂದು ಆನ್ ಲೈನ್ ಮೂಲಕ ಪಾಠ ಪ್ರವಚನ ಮಾಡಬೇಕು. ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕರು ಕಾಲೇಜಿಗೆ ಬರುತ್ತಿದ್ದು, ಖಾಸಗಿ ಕಾಲೇಜಿನವರೂ ಈ ಕ್ರಮ ಪಾಲಿಸಬೇಕು. ಮೇ 30 ರೊಳಗೆ ಪ್ರಥಮ, ದ್ವಿತೀಯ ಹಾಗೂ ಅಂತಿಮ ವರ್ಷದ ಪದವಿ ತರಗತಿಗಳ ಪಠ್ಯಕ್ರಮವನ್ನು ಪೂರ್ಣಗೊಳಿಸಬೇಕು" ಎಂದು ಸೂಚಿಸಿದರು.

ಪದವಿ ಪರೀಕ್ಷೆ.?
"ಕೊರೊನಾ ಲಾಕ್ ಡೌನ್ ನಿಂದ ಪದವಿ ಪರೀಕ್ಷೆ ಕುರಿತ ಗೊಂದಲ ನಿವಾರಣೆ ಆಗಿಲ್ಲ. ಮಹಾರಾಷ್ಟ್ರ ಮಾದರಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ತೇರ್ಗಡೆ ಮಾಡುವ ಸಲಹೆ ಕೇಳಿಬಂದಿದೆ. ಆದರೆ, ಈ ಬಗ್ಗೆ ಮೇ 17ರ ನಂತರ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಏಕರೂಪ ಪಠ್ಯಕ್ರಮ
ಈ ಮಧ್ಯೆ ಗುಣಮಟ್ಟದ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾರಿಗೊಳಿಸಲು ಉದ್ಧೇಶಿಸಿರುವ ಏಕರೂಪದ ಪಠ್ಯಕ್ರಮದ ಬಗ್ಗೆ 15 ದಿನದೊಳಗೆ ವರದಿ ಸಲ್ಲಿಸುವಂತೆ ಡಾ. ಅಶ್ವತ್ಥನಾರಾಯಣ ಸೂಚಿಸಿದ್ದಾರೆ.
"ಏಕರೂಪ ಪಠ್ಯಕ್ರಮದ ಸಂಬಂಧ ಈಗಾಗಲೇ ಐದು ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಯು ಉನ್ನತ ಶಿಕ್ಷಣದ ವಿಷನ್ ಗ್ರೂಪ್ ಅಡಿ ರಚಿಸಿರುವ ಟಾಸ್ಕ್ ಫೋರ್ಸ್ ಜತೆ ಚರ್ಚಿಸಿ ಅಂತಿಮ ವರದಿ ಸಲ್ಲಿಸಬೇಕು. ಅದನ್ನು ಆಧರಿಸಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಡೀನ್ ಗಳು, ಸಿಂಡಿಕೇಟ್ ಸದಸ್ಯರು, ವಿಷಯ ತಜ್ಞರು, ಕೈಗಾರಿಕೋದ್ಯಮಿಗಳು, ಅಗತ್ಯಬಿದ್ದಲ್ಲಿ ವಿದೇಶಿ ತಜ್ಞರೊಡನೆ ಚರ್ಚಿಸಿ 'ಏಕರೂಪ ಪಠ್ಯಕ್ರಮ'ದ ರೂಪುರೇಷೆ ಸಿದ್ಧವಾಗಲಿದೆ. ಈ ಪ್ರಕ್ರಿಯೆ ತ್ವರಿತವಾದರೆ ಮುಂದಿನ ವರ್ಷದಿಂದಲೇ ಏಕರೂಪ ಪಠ್ಯಕ್ರಮ ಜಾರಿಗೊಳಿಸಲು ಅನುಕೂಲವಾಗುತ್ತದೆ" ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರಗೌಡ, ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಹಾಗೂ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅವರನ್ನೊಳಗೊಂಡ ಸಮಿತಿಯು ಈ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಲಿದೆ.

ಮೌಲ್ಯಮಾಪನ ವ್ಯವಸ್ಥೆ ಸುಧಾರಣೆ
ಇದರ ಜತೆಗೆ "ಪದವಿ ಶಿಕ್ಷಣದಲ್ಲಿ ಮೌಲ್ಯ ಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಸಂಬಂಧ ಸೋಮವಾರದೊಳಗೆ ಸಮಿತಿ ರಚಿಸಿ, ಆ ಸಮಿತಿ ಮುಂದಿನ 15 ದಿನದೊಳಗೆ ತನ್ನ ವರದಿ ಸಲ್ಲಿಸಬೇಕು" ಎಂದು ಡಾ.ಅಶ್ವತ್ಥನಾರಾಯಣ ಸೂಚಿಸಿದರು.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಯಾರ್ಯಾರು ಭಾಗಿ
ಖಾಸಗಿ ಸೇರಿದಂತೆ ಎಲ್ಲ ವಿಶ್ವವಿದ್ಯಾಲಯದ ಕುಲಪತಿಗಳು, ಉನ್ನತ ಶಿಕ್ಷಣ ಪರಿಷತ್‌ನ ಕಾರ್ಯನಿರ್ವಾಯಹಕ ನಿರ್ದೇಶಕ ಡಾ.ಎಸ್.ಎ.ಕೋರಿ, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications