ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಡಕೆ ದರ ಪರಿಷ್ಕರಿಸಿ, ಬೆಲೆ ಹೆಚ್ಚಳ ಮಾಡಲು ದೆಹಲಿಗೆ ನಿಯೋಗ: ಆರಗ ಜ್ಞಾನೇಂದ್ರ

|
Google Oneindia Kannada News

ಬೆಂಗಳೂರು, ಜೂ.18 : ಅಡಕೆಗೆ ನಿಗದಿಪಡಿಸಿರುವ ಬೆಲೆಯನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ ಒತ್ತಾಯಿಸಲು ಕೇಂದ್ರ ಸರ್ಕಾರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅಡಕೆ ಧಾರಣೆ ಸಂಬಂಧ ರೈತರು ಯಾವುದೇ ಆತಂಕ ಪಡುವುದು ಬೇಡ. ರಾಜ್ಯದ ಮಲೆನಾಡು ಭಾಗದ ಲಕ್ಷಾಂತರ ರೈತ ಹಾಗೂ ರೈತ_ಕಾರ್ಮಿಕ ಕುಟುಂಬಗಳ ಆರ್ಥಿಕ ಬೆನ್ನೆಲುಬಾಗಿರುವ ಅಡಕೆ ಬೆಳೆಗೆ ಸುಸ್ಥಿರ ಬೆಲೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ಈ ಕುರಿತು ರೈತ ಸಮುದಾಯ ಯಾವುದೇ ಆತಂಕ ಪಡುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಹಣದುಬ್ಬರ ಹಾಗೂ ಇನ್ನಿತರ ಕಾರಣಗಳಿಂದಾಗಿ ಅಡಕೆ ಬೆಳೆ ಉತ್ಪಾದನಾ ವೆಚ್ಚವೂ ಹೆಚ್ಚಿದ್ದು ಪ್ರಸ್ತುತ ಪ್ರತಿ ಕಿಲೋ ಅಡಕೆ ಅಂದಾಜು ವೆಚ್ಚ ರೂಪಾಯಿ 25 ರಷ್ಟಿದೆ. ಸುಮಾರು ಆರು ವರ್ಷಗಳ ಹಿಂದೆ ಈ ದರ ನಿಗದಿ ಪಡಿಸಲಾಗಿದೆ. ಇದನ್ನು ಸದ್ಯದ ಖರ್ಚುವೆಚ್ಚಗಳಿಗೆ ಅನುಗುಣವಾಗಿ ಪರಿಷ್ಕರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

Delegation will be taken to Delhi to hike Arecanut Price says Minister Araga Jnanendra

ಈ ಹಿಂದೆ ಕೇಂದ್ರ ಸರಕಾರ ದೇಶಿಯ ಅಡಿಕೆ ಉತ್ಪನ್ನ ಅಂದಾಜು ವೆಚ್ಚವನ್ನು ಹೆಚ್ಚಳ ಮಾಡಿದಾಗ, ವಿದೇಶದಿಂದ ಅಮದಾಗುತ್ತಿದ್ದ ಕಡಿಮೆ ಗುಣಮಟ್ಟದ ಅಡಿಕೆ ಪ್ರಮಾಣ ಗಣನೀಯವಾಗಿ ತಗ್ಗಿತ್ತು. ವಿದೇಶದಿಂದ ಆಮದಾಗುವ ಅಡಿಕೆ, ಗುಣಮಟ್ಟದಲ್ಲಿ ಅತ್ಯಂತ ನಿಕೃಷ್ಟ ವಾಗಿದ್ದು ದೇಶಿಯ ಅಡಿಕೆ, ಗುಣಮಟ್ಟದಲ್ಲಿ ಆತ್ಯುಕೃಷ್ಟ ವಾಗಿದೆ ಎಂದು, ಪ್ರಮಾಣೀಕೃತ ವಾಗಿದೆ ಎಂದೂ ತಿಳಿಸಿದ್ದಾರೆ.

ಕೇಂದ್ರ ಕೃಷಿ ಸಚಿವರನ್ನು ರಾಜ್ಯ ಟಾಸ್ಕ್ ಫೋರ್ಸ್ ನಿಯೋಗ ಭೇಟಿಯಾಗಿ, ಅಡಿಕೆ ಉತ್ಪನ್ನ ಅಂದಾಜು ವೆಚ್ಚ ಪರಿಷ್ಕರಿಸಿ ಹೆಚ್ಚಳ ಮಾಡಲು ಮನವರಿಕೆ ಮಾಡಿ ಕೊಡಲಾಗುವುದು, ರೈತರು ಅಡಿಕೆ ಧಾರಣೆ ಬಗ್ಗೆ ಯಾವುದೇ ಆತಂಕ ಹಾಗೂ ಭಯಪಡುವುದು ಬೇಡ ಎಂದೂ ಸಚಿವರು ವಿನಂತಿಸಿದ್ದಾರೆ.

Recommended Video

Virat Kohli & Babar Azam ಒಂದೇ ತಂಡದಲ್ಲಿ ಆಡೋದು ಗ್ಯಾರೆಂಟಿ | *Cricket | Oneindia Kannada

English summary
Delegation will be taken to Delhi to request Central Govt to hike Arecanut Price says Minister Araga Jnanendra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X