ಗೃಹ ಸಚಿವ ಅಮಿತ್ ಶಾ ಅಸಮರ್ಥತೆಯಿಂದ ದೆಹಲಿಯಲ್ಲಿ ಸ್ಫೋಟ: ಹರಿಪ್ರಸಾದ್
ದೆಹಲಿಯಲ್ಲಿ ನಡೆದ ಕಾರ್ ಸ್ಫೋಟದ ಕ್ರೂರ ಘಟನೆ ರಾಷ್ಟ್ರದ ಭದ್ರತೆಗೆ ಎದುರಾದ ಗಂಭೀರ ಸವಾಲು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಕಳವಳ ವ್ಯಕ್ತಪಡಿಸಿದ್ದಾರೆ. ಅಮಾಯಕ ನಾಗರಿಕರ ಪ್ರಾಣ ಕಸಿದುಕೊಂಡ ಈ ಭಯಾನಕ ಕೃತ್ಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ರಾಷ್ಟ್ರದ ರಾಜಧಾನಿಯಲ್ಲೇ ಇಂತಹ ಕೃತ್ಯ ನಡೆದಿರುವುದು ಸರ್ಕಾರದ ಭದ್ರತಾ ವ್ಯವಸ್ಥೆಯ ವಿಫಲತೆಯ ಸ್ಪಷ್ಟ ನಿದರ್ಶನ ಎಂದು ಆರೋಪಿಸಿದ್ದಾರೆ.
ದೆಹಲಿಯಂತಹ ಉನ್ನತ ಭದ್ರತಾ ವಲಯದಲ್ಲಿ ಸ್ಫೋಟ ಸಂಭವಿಸಿರುವುದು ಕೇವಲ ಕಾನೂನು ಸುವ್ಯವಸ್ಥೆಯ ವಿಷಯವಲ್ಲ, ಇದು ರಾಷ್ಟ್ರದ ಆಂತರಿಕ ಭದ್ರತೆಯ ಮೇಲಿನ ನಂಬಿಕೆಗೆ ಬಿದ್ದ ಭಾರಿ ಹೊಡೆತ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಭದ್ರತಾ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ದೇಶದ ರಾಜಧಾನಿಯೇ ಸುರಕ್ಷಿತವಾಗಿರದಿದ್ದರೆ, ಇಡೀ ಭಾರತವು ಹೇಗೆ ಸುರಕ್ಷಿತವಾಗಿರಲು ಸಾಧ್ಯ? ಎಂದು ಪ್ರಶ್ನೆ ಮುಂದಿಟ್ಟಿದ್ದಾರೆ.

ಗೃಹ ಸಚಿವರ ಅಸಮರ್ಥತೆ ಮತ್ತು ನಿರ್ಲಕ್ಷ್ಯದಿಂದಲೇ ಇಂತಹ ದಾರುಣ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿದೆ. ಪುಲ್ವಾಮಾ ಬಳಿ 40 ಭಾರತೀಯ ವೀರ ಯೋಧರನ್ನ ಬಲಿ ಪಡೆದುಕೊಂಡಿದ್ದು, ಪಹಲ್ಗಾಮ್ನಲ್ಲಿ ಅಮಾಯಕ 26 ಪ್ರವಾಸಿಗರ ಬಲಿ, ರಾಷ್ಟ್ರ ರಾಜಧಾನಿಯಲ್ಲೇ ಭೀಕರ ಬಾಂಬ್ ಸ್ಪೋಟ ಹೀಗೆ ಸಾಲು ಸಾಲು ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿದ್ದರು ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲವಾಗುತ್ತಿದೆ ಎಂದು ದೂರಿದ್ದಾರೆ.
ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಲಿ
ಅಮಾಯಕ ಜನರ ಪ್ರಾಣಗಳು ರಾಜಕೀಯ ಆಟಗಳಿಗೆ ಬಲಿಯಾಗುತ್ತಿರುವುದು ಅಕ್ಷಮ್ಯ. ಜನರ ಜೀವ ಮತ್ತು ಸುರಕ್ಷತೆಯ ಖಾತ್ರಿ ನೀಡಬೇಕಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಗೃಹ ಸಚಿವರ ಮೇಲ್ವಿಚಾರಣೆಯಲ್ಲಿರುವ ಭದ್ರತಾ ವ್ಯವಸ್ಥೆ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿರುವಾಗ, ನೈತಿಕ ಹೊಣೆಹೊತ್ತು ಗೃಹ ಸಚಿವ ಅಮಿತ್ ಶಾ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಘಟನೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ದೆಹಲಿಯ ಜನತೆಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರಬೇಕು, ಮತ್ತು ಭದ್ರತಾ ವ್ಯವಸ್ಥೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಹಲವೆಡೆ ಸ್ಫೋಟಕ್ಕೆ ಸಂಚು ನಡೆದಿತ್ತಾ?
ದೆಹಲಿ-ಎನ್ಸಿಆರ್ ಮತ್ತು ಪುಲ್ವಾಮಾದ ಅನೇಕ ಸ್ಥಳಗಳಲ್ಲಿ ಭದ್ರತಾ ಸಂಸ್ಥೆಗಳು ನಡೆಸಿದ ದಾಳಿಗಳು, ಗಮನಾರ್ಹ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದರಿಂದ ಶಂಕಿತನು ಒತ್ತಡದಲ್ಲಿ ಈ ರೀತಿ ವರ್ತಿಸಿರಬಹುದು ಎಂದು ಎಎನ್ಐ ವರದಿ ಮಾಡಿದೆ. ಇದಕ್ಕೂ ಮೊದಲು, ನವೆಂಬರ್ 9 ಮತ್ತು 10ರಂದು ಹರಿಯಾಣದ ಫರಿದಾಬಾದ್ನಲ್ಲಿ ನಡೆಸಿದ ದಾಳಿಗಳ ಸಮಯದಲ್ಲಿ, ಸುಮಾರು 3000 ಕೆಜಿ ಸ್ಫೋಟಕಗಳನ್ನು, ಡಿಟೋನೇಟರ್ಗಳು, ಟೈಮರ್ಗಳು ಮತ್ತು ಇತರ ಬಾಂಬ್ ತಯಾರಿಕೆ ಸಾಮಗ್ರಿಗಳನ್ನು ಹಿಡಿದು ವಶಪಡಿಸಿಕೊಳ್ಳಲಾಯಿತು. ಭದ್ರತಾ ಸಂಸ್ಥೆಗಳು ನಡೆಸಿದ ದಾಳಿಗಳಿಂದಾಗಿ ಭೀತಿ ಮತ್ತು ಹತಾಶೆಯಿಂದ ಸ್ಫೋಟ ಸಂಭವಿಸಿದೆ ಎಂದು ಎಎನ್ಐ ವರದಿ ಮಾಡಿದೆ. ಬಾಂಬ್ ಅಕಾಲಿಕವಾಗಿತ್ತು ಮತ್ತು ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿಲ್ಲ, ಹೀಗಾಗಿ ಪರಿಣಾಮವನ್ನು ಸೀಮಿತಗೊಳಿಸಿತು ಎಂದು ಹೇಳಿದೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications