ಕರ್ನಾಟಕದ ಪಠ್ಯದಿಂದ ಭಗತ್ ಸಿಂಗ್ ಗದ್ಯ ತೆಗೆದಿದ್ದಕ್ಕೆ ಆಪ್ ಕೆಂಡಾಮಂಡಲ
ಬೆಂಗಳೂರು, ಮೇ 18: ಕರ್ನಾಟಕದ ಶಾಲಾ ಪಠ್ಯದಿಂದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಪಠ್ಯವನ್ನು ತೆಗೆಯುವ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಶಹೀದ್ ಭಗತ್ ಸಿಂಗ್ ಅವರನ್ನು ಬಿಜೆಪಿಯು ಇಷ್ಟೊಂದು ದ್ವೇಷಿಸುವುದಕ್ಕೆ ಕಾರಣವೇನು? ಪಠ್ಯಪುಸ್ತಕದಿಂದ ಅವರ ಪಠ್ಯವನ್ನು ತೆಗೆಯುವ ನಿರ್ಧಾರವು ಅವರಿಗೆ ಮಾಡುವ ಅವಮಾನವಾಗಿದೆ. ದೇಶವು ಇದನ್ನು ಸಹಿಸುವುದಿಲ್ಲ. ಬಿಜೆಪಿ ಸರ್ಕಾರವು ತನ್ನ ನಿರ್ಧಾರವನ್ನು ಹಿಂಪಡೆಯಲೇಬೇಕು" ಎಂದು ಆಗ್ರಹಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಕರ್ನಾಟಕ ಸರ್ಕಾರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, "ಭಗತ್ ಸಿಂಗ್ ವಿರುದ್ಧದ ಬಿಜೆಪಿಯ ದ್ವೇಷ ಹೆಚ್ಚಾಗುತ್ತಿದೆ. ಕಡಿಮೆ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ವಿಚಾರಗಳು ಯುವಕರಲ್ಲಿ ದೇಶಭಕ್ತಿ ಹೆಚ್ಚಿಸುತ್ತದೆ. ಜನರಲ್ಲಿ ದೇಶಭಕ್ತಿ ಜಾಗೃತಗೊಳ್ಳುವುದರಿಂದ ಭಯಗೊಂಡು ಬಿಜೆಪಿ ಈ ರೀತಿ ಮಾಡುತ್ತಿದೆ" ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿಯಲ್ಲಿ ದೇಶಭಕ್ತಿ ಪಠ್ಯಕ್ರಮ; ನವದೆಹಲಿಯಲ್ಲಿ ವಿಶೇಷವಾಗಿ ಭಗತ್ ಸಿಂಗ್ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಲು ʻದೇಶಭಕ್ತಿ ಪಠ್ಯಕ್ರಮʼ ಎಂಬ ವಿನೂತನ ಪಠ್ಯಕ್ರಮವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರವು ಅಲ್ಲಿನ ಸರ್ಕಾರಿ ಶಾಲೆಗಳಲ್ಲಿ ಜಾರಿಗೆ ತಂದಿದೆ.
ದೆಹಲಿಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಭಗತ್ ಸಿಂಗ್ ಫೋಟೋವನ್ನು ಕಡ್ಡಾಯಗೊಳಿಸಲಾಗಿದೆ. ಮಾರ್ಚ್‌ನಲ್ಲಿ ಪಂಜಾಬ್‌ನ ಮುಖ್ಯಮಂತ್ರಿ ಹುದ್ದೆಗೇರಿದ ಭಗವಂತ್ ಮಾನ್‌ರವರು ಭಗತ್ ಸಿಂಗ್ ತವರೂರಾದ ಖಟ್ಕರ್ ಕಲಾನ್ ಗ್ರಾಮದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಭಗತ್ ಸಿಂಗ್‌ರಿಗೆ ಗೌರವ ಸಲ್ಲಿಸಿದ್ದಾರೆ.

ಕರ್ನಾಟಕ ಶಿಕ್ಷಣ ಇಲಾಖೆ ಸ್ಪಷ್ಟನೆ: ಸಮಾಜ ವಿಜ್ಞಾನ ಹಾಗೂ ಭಾಷಾ ಪಠ್ಯ ಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಪರಿಶೀಲಿಸಲು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಈ ಸಮಿತಿಯು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳು ಹಾಗೂ 1 ರಿಂದ 10ನೇ ತರಗತಿ ಕನ್ನಡ ಭಾಷಾ ಪಠ್ಯಪುಸ್ತಕ ಪರಿಷ್ಕರಿಸಿರುತ್ತಾರೆ ಎಂದು ಶಿಕ್ಷಣ ಇಲಾಖೆ ಹೇಳಿದೆ.
10ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿದ್ದ 'ಭಗತ್‌ಸಿಂಗ್' ಗದ್ಯವನ್ನು ಕೈಬಿಟ್ಟು 'ಹೆಡ್ಗೆವಾರ್'ರವರ ಬಗ್ಗೆ ಗದ್ಯ ಸೇರಿಸಲಾಗಿದೆ ಎನ್ನುವ ಸುದ್ದಿ ಸತ್ಯಕ್ಕೆ ದೂರವಾದುದು. ವಾಸ್ತವವಾಗಿ 'ಭಗತ್‌ಸಿಂಗ್' ಗದ್ಯವನ್ನು ಪಠ್ಯದಿಂದ ಕೈಬಿಟ್ಟಿಲ್ಲ. ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ಇನ್ನೂ ಮುದ್ರಣ ಹಂತದಲ್ಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications