ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೇನಾಮಿ ವಹಿವಾಟು: ಡಿ.ಕೆ ಶಿವಕುಮಾರ್ ದೆಹಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

|
Google Oneindia Kannada News

ಬೆಂಗಳೂರು, ಮೇ 31: ಡಿ.ಕೆ. ಶಿವಕುಮಾರ್ ವಿರುದ್ಧ 8.5 ಕೋಟಿ ರೂ. ಬೇನಾಮಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ( ಇಡಿ ) ದಾಖಲಿಸಿರುವ ಪ್ರಕರಣದ ವಿಚಾರಣೆ ಆರಂಭವಾಗಿದೆ. ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ದೆಹಲಿಯ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಡಿ.ಕೆ. ಶಿವಕುಮಾರ್ ಮತ್ತು ಐವರಿಗೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ. ಜು. 1 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಡಿಕೆಶಿ ವಿರುದ್ಧದ ಆರೋಪ:

ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ಪ್ಲಾಟ್ ಗಳಲ್ಲಿ ಸಿಕ್ಕಿದ 8.5 ಕೋಟಿ ರೂ. ಹಣದ ಅಕ್ರಮ ವಹಿವಾಟು ಆರೋಪಕ್ಕೆ ಸಂಬಂಧಿಸಿದಂತೆ 2019 ರಲ್ಲಿ ದಾಖಲಿಸಿದ್ದ ಪ್ರಕರಣ ಸಂಬಂಧ ದೆಹಲಿಯ ಇಡಿ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಒಡೆತನಕ್ಕೆ ಸೇರಿದ ಪ್ಲಾಟ್ ನಲ್ಲಿ 8.5 ಕೋಟಿ ರೂ. ಬೇನಾಮಿ ಹಣ ಪತ್ತೆಯಾದ ಬಗ್ಗೆ ಐಟಿ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಇಡಿ ಅಧಿಕಾರಿಗಳು ಪಿಎಂಎಲ್‌ಎ ಕಾಯ್ದೆ ಅಡಿ 2018 ರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು.

Delhi Court Summons KPCC President DK Shivakumar in Money Laundering Case

2019 ರಲ್ಲಿ ಈ ಪ್ರಕರಣದ ವಿಚಾರಣೆ ಸಂಬಂಧ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದರು. ಸ್ಪಷ್ಟ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿಡಲಾಗಿತ್ತು. ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ವಿಶೇಷ ನ್ಯಾಯಾಲಯ ಜಾಮೀನು ನೀಡಲು ತಿರಸ್ಕರಿಸಿತ್ತು. ಆ ಬಳಿಕ ಹೈಕೋರ್ಟ್ ಜಾಮೀನು ನೀಡಿದ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದರು.

Delhi Court Summons KPCC President DK Shivakumar in Money Laundering Case

8.5 ಕೋಟಿ ರೂ. ಬೇನಾಮಿ ವಹಿವಾಟು:

ಡಿ.ಕೆ. ಶಿವಕುಮಾರ್ ಅವರಿಗೆ ಸಂಬಂಧಸಿದಿಂತೆ ದೆಹಲಿಯ ಅಪಾರ್ಟ್‌ಮೆಂಟ್ ಗಳಲ್ಲಿ ಪತ್ತೆಯಾಗಿದ್ದ 8.5 ಕೋಟಿ ರೂ. ಹಣದ ಮೂಲದ ಬಗ್ಗೆ ತನಿಖೆ ನೆಡಸಿರುವ ಇಡಿ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಡಿ.ಕೆ. ಶಿವಕುಮಾರ್ ಮೊದಲ ಅರೋಪಿಯಾಗಿದ್ದು, ಸಚಿನ್ ನಾರಾಯಣ್, ಪಾಲುದಾರ ಸ್ನೇಹಿತ ಸುನೀಲ್ ಕುಮಾರ್ ಶರ್ಮಾ ಸೇರಿದಂತೆ ಐವರ ವಿರುದ್ಧ ಬೇನಾಮಿ ವಹಿವಾಟು ನಡೆಸಿದ ಅರೋಪ ಹೊರಿಸಲಾಗಿದೆ. ಇದೇ ಪ್ರಕರಣ ಸಂಬಂಧ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಸಮನ್ಸ್ ಜಾರಿ ಮಾಡಿದೆ.

English summary
A Delhi Court summons KPCC President DK Shivakumar and others while taking cognizance of a chargesheet filed by the Enforcement Directorate, in a money laundering case. Court has directed him to appear before it on July 1.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X