ಬುಧವಾರ ಹೈಕೋರ್ಟ್‌ನಿಂದ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿ ತೀರ್ಪು

ಬೆಂಗಳೂರು, ಅಕ್ಟೋಬರ್ 22 : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯ ತೀರ್ಪು ಬುಧವಾರ ಪ್ರಕಟವಾಗಲಿದೆ. ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

ಬುಧವಾರ ಮಧ್ಯಾಹ್ನ 2.30ಕ್ಕೆ ದೆಹಲಿ ಹೈಕೋರ್ಟ್ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯ ತೀರ್ಪನ್ನು ಪ್ರಕಟಿಸಲಿದೆ. ನ್ಯಾಯೂರ್ತಿ ಸುರೇಶ್ ಕೈಟ್ ಈಗಾಗಲೇ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದಾರೆ.

Delhi HC To Pronounce Order On DK Shivakumar Bail On October 22

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿದೆ. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಇಡಿ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿತ್ತು.

ಮೂರು ದಿನಗಳ ನಿರಂತರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಸೆಪ್ಟೆಂಬರ್ 3ರಂದು ಡಿ. ಕೆ. ಶಿವಕುಮಾರ್ ಬಂಧಿಸಿತ್ತು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಡಿ ವಿಶೇಷ ನ್ಯಾಯಾಲಯ ಜಾಮೀನು ತಿರಸ್ಕಾರ ಮಾಡಿರುವುದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಕೆ. ಶಿವಕುಮಾರ್ ಸಹೋದರ ಡಿ. ಕೆ. ಸುರೇಶ್, ಪುತ್ರಿ ಐಶ್ವರ್ಯಾ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ. ಎನ್. ರಾಜಣ್ಣ ವಿಚಾರಣೆಯನ್ನು ಇಡಿ ನಡೆಸಿದೆ.

ಡಿ. ಕೆ. ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ, ದಯಾನ್ ಕೃಷ್ಣನ್ ವಾದ ಮಂಡನೆ ಮಾಡಿದ್ದಾರೆ. ಆರೋಗ್ಯ ಸಮಸ್ಯೆ, ಸತತವಾಗಿ ವಿಚಾರಣೆಗೆ ಸಹಕಾರ ನೀಡಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ಜಾಮೀನಿಗಾಗಿ ಮನವಿ ಮಾಡಲಾಗಿದೆ.

ಡಿ. ಕೆ. ಶಿವಕುಮಾರ್‌ಗೆ ಜಾಮೀನು ಸಿಗಲಿದೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದಾರೆ. ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಅವರು ಜೈಲಿನಲ್ಲಿದ್ದರು. ದೀಪಾವಳಿ ಸಮಯದಲ್ಲಿ ಆದರೂ ಹೊರಗೆ ಬರುತ್ತಾರೆಯೇ? ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಲು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆರೋಪಿ ಪ್ರಭಾವಿಯಾಗಿದ್ದಾರೆ. ವಿಚಾರಣೆ ಇನ್ನೂ ಬಾಕಿ ಇದೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ಆಕ್ಷೇಪಣೆ ಸಲ್ಲಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+