ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್
ಬೆಂಗಳೂರು, ಅಕ್ಟೋಬರ್ 23 : ಕನಕಪುರ ಕ್ಷೇತ್ರದ ಶಾಸಕ, ಮಾಜಿ ಸಚಿವ ಡಿ. ಕೆ. ಶಿವಕುಮಾರ್‌ಗೆ ಜಾಮೀನು ಸಿಕ್ಕಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ಬುಧವಾರ ದೆಹಲಿ ಹೈಕೋರ್ಟ್ ಡಿ. ಕೆ. ಶಿವಕುಮಾರ್ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದರಿಂದಾಗಿ ಡಿ. ಕೆ. ಶಿವಕುಮಾರ್ 50 ದಿನಗಳ ಜೈಲು ವಾಸ ಅಂತ್ಯವಾಗಲಿದೆ. ಡಿ. ಕೆ. ಶಿವಕುಮಾರ್ ಅಪಾರ ಅಭಿಮಾನಿಗಳು ಇಂದು ಜಾಮೀನು ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಕಾದಿದ್ದರು, ಎಲ್ಲರೂ ಸಂತಸಗೊಂಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ರನ್ನು ಸೆಪ್ಟೆಂಬರ್ 3ರಂದು ಬಂಧಿಸಿತ್ತು. ಇಡಿ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದ ಕಾರಣ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಜೈಲಿನಲ್ಲಿಯೇ ಇದ್ದರು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ತಮ್ಮ ಬಿಡುಗಡೆಗೆ ಹೋರಾಟ ಮಾಡಿದವರಿಗೆ, ವಕೀಲರಿಗೆ, ರಾಜಕೀಯ ಮುಖಂಡರಿಗೆ ಧನ್ಯವಾದ ಅರ್ಪಿಸುವುದಾಗಿ ಡಿಕೆ ಶಿವಕುಮಾರ್ ತಿಳಿಸಿದರು.
ಜೈಲಿನಿಂದ ಹೊರ ಬಂದ ಬಳಿಕ ಕರ್ನಾಟಕ ಭವನ ಸಮೀಪದ ಶಿವ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ನ್ಯಾಯಾಲಯದಲ್ಲಿ ಜಾಮೀನು ಪ್ರಕ್ರಿಯೆ ಪೂರ್ಣ. ಡಿ. ಕೆ. ಶಿವಕುಮಾರ್ ಬಿಡುಗಡೆ ಆದೇಶ ಪ್ರತಿಯನ್ನು ಹಸ್ತಾಂತರ ಮಾಡಿದ ಇಡಿ ಕೋರ್ಟ್. ಆದೇಶ ಪ್ರತಿಯನ್ನು ತಿಹಾರ್ ಜೈಲಿಗೆ ತಲುಪಿಸಬೇಕು.
ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಗೆ ಇಡಿ ಆಕ್ಷೇಪ. ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಇಡಿ. ಗುರುವಾರ ಅರ್ಜಿಯ ವಿಚಾರಣೆ ಸಾಧ್ಯತೆ.
ಡಿ. ಕೆ. ಶಿವಕುಮಾರ್ ನಿವಾಸದಲ್ಲಿ ಪತ್ತೆಯಾದ ಹಣ ಅಕ್ರಮ ಹಣ ವರ್ಗಾವಣೆ ಮೂಲಕ ತರಲಾಗಿದೆ ಎಂಬುದು ಇಡಿ ಆರೋಪವಾಗಿದೆ. ಈ ಕುರಿತು ತನಿಖೆಯನ್ನು ಕೈಗೊಂಡಿತ್ತು.
2017ರ ಆಗಸ್ಟ್ 2ರಂದು ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಐಟಿ ದಾಳಿ ನಡೆಸಿತ್ತು. ದೆಹಲಿಯ ಫ್ಲ್ಯಾಟ್‌ನಲ್ಲಿ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಹಣಕ್ಕೆ ದಾಖಲೆ ಇಲ್ಲದ ಕಾರಣ ಇಡಿ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿತ್ತು.
ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಇಡಿ ಡಿ. ಕೆ. ಶಿವಕುಮಾರ್, ಡಿ. ಕೆ. ಸುರೇಶ್, ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ. ಎನ್. ರಾಜಣ್ಣ ವಿಚಾರಣೆ ನಡೆಸಿದೆ.
ಡಿ. ಕೆ. ಶಿವಕುಮಾರ್‌ಗೆ ಭವ್ಯ ಸ್ವಾಗತ ಕೋರಲು ಸಜ್ಜಾದ ಬೆಂಬಲಿಗರು. ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿಯೇ ಸ್ವಾಗತ ಕೋರಲು ತಯಾರಿ ಆರಂಭ
ಇಂದು ಬೆಳಗ್ಗೆ ತಿಹಾರ್ ಜೈಲಿನಲ್ಲಿ ಡಿ. ಕೆ. ಶಿವಕುಮಾರ್ ಭೇಟಿಯಾಗಿದ್ದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ
ಡಿ. ಕೆ. ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ, ದಯಾನ್ ಕೃಷ್ಣನ್ ವಾದ ಮಂಡನೆ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಡಿ. ಕೆ. ಸುರೇಶ್, "ಕಳೆದ 50 ದಿನಗಳಿಂದ ಮಾನಸಿಕ ಹಿಂಸೆ ಅನುಭವಿಸುತ್ತಿದ್ದೆವು. ಮುಂದಿನ ನಡೆ ಬಗ್ಗೆ ವಕೀಲರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದರು.
ದೆಹಲಿ ಹೈಕೋರ್ಟ್ ಆದೇಶ ಇಡಿ ವಿಶೇಷ ನ್ಯಾಯಾಲಯ, ತಿಹಾರ್ ಜೈಲಿಗೆ ತಲುಪಿದ ಬಳಿಕ ಡಿ. ಕೆ. ಶಿವಕುಮಾರ್ ಬಿಡುಗಡೆಯಾಗಲಿದ್ದಾರೆ. ಇಂದು ಸಂಜೆ ಅವರು ಜೈಲಿನಿಂದ ಹೊರ ಬರುವ ನಿರೀಕ್ಷೆ ಇದೆ.
ಡಿ. ಕೆ. ಶಿವಕುಮಾರ್ ವಿದೇಶಕ್ಕೆ ಪರಾರಿಯಾಗುವುದಿಲ್ಲ. ಸಾಕ್ಷಿ ನಾಶ ಮಾಡುವುದಿಲ್ಲ, ಅವರ ಆರೋಗ್ಯ ಸರಿ ಇಲ್ಲ ಎಂದು ಮಂಡಿಸಿದ ವಾದದ ಆಧಾರದ ಮೇಲೆ ಜಾಮೀನು ನೀಡಿದ ಹೈಕೋರ್ಟ್
ಮೂರು ಷರತ್ತುಗಳನ್ನು ವಿಧಿಸಿ ಡಿ. ಕೆ. ಶಿವಕುಮಾರ್‌ಗೆ ದೆಹಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಇಡಿ ವಿಶೇಷ ನ್ಯಾಯಾಲಯ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಆದ್ದರಿಂದ, ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ದೇಶ ಬಿಟ್ಟು ಹೋಗುವಂತಿಲ್ಲ, ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎಂದು ಜಾಮೀನು ನೀಡುವಾಗ ಹೈಕೋರ್ಟ್ ಷರತ್ತು ವಿಧಿಸಿದೆ.
More From
-
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications