Get Updates
Get notified of breaking news, exclusive insights, and must-see stories!

ಜಯಲಲಿತಾ ಕೇಸ್ ತೀರ್ಪು ಪ್ರಕಟಿಸಲು ಸುಪ್ರೀಂ ಒಪ್ಪಿಗೆ

ಬೆಂಗಳೂರು, ಏ. 27 : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪನ್ನು ಕರ್ನಾಟಕ ಹೈಕೋರ್ಟ್‌ ವಿಶೇಷ ಪೀಠ ಪ್ರಕಟಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪಿನ್ನು ಪ್ರಶ್ನಿಸಿ ಜಯಲಲಿತಾ ಅವರು ಮೇಲ್ಮನವಿ ಸಲ್ಲಿಸಿದ್ದರು.

ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ಮೇಲ್ಮನವಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಮಾ.11ರಂದು ಪೂರ್ಣಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದ್ದಾರೆ. [ಜಯಲಲಿತಾ ವಿಚಾರಣೆ ಅಗತ್ಯವಿಲ್ಲ]

jayalalithaa

ಸುಪ್ರೀಂಕೋರ್ಟ್ ತ್ರಿಸದಸ್ಯ ನ್ಯಾಯಪೀಠ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದು. ಜಯಲಲಿತಾ ಅವರನ್ನು ಮತ್ತೊಮ್ಮೆ ವಿಚಾರಣೆಗೊಳಪಡಿಸುವ ಅಗತ್ಯವಿಲ್ಲ. ಡಿಎಂಕೆ ಮುಖಂಡ ಅನ್ಬಳಗನ್ ಅವರು ನೀಡಿರುವ ಸಾಕ್ಷಿ ಹಾಗೂ ಇತ್ತೀಚಿನ ಮನವಿಯನ್ನು ಪರಿಗಣಿಸಿ ತೀರ್ಪು ಪ್ರಕಟಿಸಬಹುದು ಎಂದು ಹೇಳಿದೆ. [ಜಯಲಲಿತಾ ಜಾಮೀನು ಮೇ 18ರವರೆಗೆ ವಿಸ್ತರಣೆ]

ಪ್ರಕರಣದ ವಿವರ : 2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪು ನೀಡಿದ್ದ ಸಿಬಿಐ ವಿಶೇಷ ನ್ಯಾಯಾಲ­ಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶಿದ್ದರು. [ಚೆನ್ನೈನಲ್ಲಿ ಅಮ್ಮನ ಅಭಿಮಾನಿಯ ಹುಚ್ಚು ಸಾಹಸ ನೋಡಿ!]

ಜಯಲಲಿತಾ ಅವರಿಗೆ 100 ಕೋಟಿ ಹಾಗೂ ಇತರರಿಗೆ ತಲಾ 10 ಕೋಟಿ ದಂಡ ಮತ್ತು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಜಯಲಲಿತಾ ಮತ್ತು ಇತರ ಮೂವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ವಿಶೇಷ ಈ ತೀರ್ಪನ್ನು ಪ್ರಶ್ನಿಸಿದ್ದರು, ಜಾಮೀನು ನೀಡುವಂತೆ ಮನವಿ ಮಾಡಿದ್ದರು.

ಸುಪ್ರೀಂಕೋರ್ಟ್ ಎಲ್ಲರಿಗೂ ಜಾಮೀನು ನೀಡಿತ್ತು ಮತ್ತು ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನಡೆಸಲು ವಿಶೇಷ ಪೀಠವನ್ನು ರಚನೆ ಮಾಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿತ್ತು. ಆದರಂತೆ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕ ಸದಸ್ಯ ಪೀಠ ರಚನೆಯಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+