ರಾಜ್ಯದಲ್ಲಿ ಈ ವಸತಿ ಶಾಲೆಗಳ ಪ್ರವೇಶಕ್ಕೆ "ಡಿಮ್ಯಾಂಡ್"!

2025-26ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು. ವಿದ್ಯಾರ್ಥಿಗಳು ಪೂರ್ವ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಇದೀಗ 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮುಸ್ಲಿಂ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ಪ್ರವೇಶಕ್ಕೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ.

ಇಲಾಖೆ ಅಡಿಯಲ್ಲಿ 134 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು ಪ್ರಸಕ್ತ ಸಾಲಿನಲ್ಲಿ ದಾಖಲಾತಿಗೆ 11,330 ಸೀಟುಗಳು ಲಭ್ಯವಿರುತ್ತದೆ. ಆಶ್ಚರ್ಯವೇನೆಂದರೆ, 11330 ಸೀಟುಗಳಿಗೆ ಬರೋಬ್ಬರಿ 56424 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿದ್ದಾರೆ. ಭಾನುವಾರ ರಾಜ್ಯಾಧ್ಯಂತ 145 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿದ್ದು, 41 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Demand for Admission to Residential Schools for Minorities

ರಾಜ್ಯದ ಅಲ್ಪಸಂಖ್ಯಾತರ ವಸತಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಇದರಿಂದಾಗಿ ಎಲ್ಲಾ ಪೋಷಕರು ಈ ಶಾಲೆಗಳಲ್ಲಿ ಸೇರಿಸಲು ಮುಂದಾಗಿದ್ದಾರೆ. ಅಲ್ಪಸಂಖ್ಯಾತರ ನಿರ್ದೇಶನಾಲಯದಡಿಯಲ್ಲಿ ಜಿಲ್ಲೆ ಗೊಂದರಂತೆ ಸಿಬಿಎಸ್ಸಿ ಪಠ್ಯಕ್ರಮವನ್ನು ಅಳವಡಿಸಿ ಜಿಲ್ಲೆಗೆ ಒಂದರಂತೆ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು ಸಿಬಿಎಸ್‌ಸಿ ಪಠ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ.

ಪ್ರವೇಶ ಪ್ರಕ್ರಿಯೆ ಮುಕ್ತ ಮತ್ತು ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ಸಂಪೂರ್ಣ ಆನ್ಲೈನ್ ನಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಅಲ್ಪಸಂಖ್ಯಾತ ರ ನಿರ್ದೇಶನಲಯ ನಿರ್ದೇಶಕ ಜಿಲಾನಿ ಮೊಕಾಶಿ ತಿಳಿಸಿದ್ದಾರೆ.

ಉತ್ತಮ ಫಲಿತಾಂಶ: ಇನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಮೊರಾರ್ಜಿ ದೇಸಾಯಿ ಹಾಗೂ ಅಬ್ದುಲ್ ಕಲಾಂ ಸೇರಿ 92 ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಸಾರಾಸರಿ ಶೇ. 90 ರಷ್ಟು ಬಂದಿತ್ತು.

ಉತ್ತೀರ್ಣರಾದ 2584 ವಿದ್ಯಾರ್ಥಿಗಳ ಪೈಕಿ 2286 ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಶೇ. 90 ರಷ್ಟು ಫಲಿತಾಂಶ ಬಂದಿದೆ.

ಈ ಪೈಕಿ 200 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ. ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಮುಂದುವರಿದು ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗೆ ತರಬೇತಿ ನೀಡಲಾಗುವುದು ಎಂದು ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹೀಮ್ ಹಾಗೂ ನಿರ್ದೇಶಕ ಜಿಲಾನಿ ಮೊಕಾಶಿ ತಿಳಿಸಿದ್ದಾರೆ.

ಪಠ್ಯ ಪುಸ್ತಕ ಹಾಗೂ ಶಾಲಾ ವಾಹನ ಬೆಲೆ ಬೆಲೆ ಹೆಚ್ಚಳ ಸಾಧ್ಯತೆ: ಇನ್ನು ಈ ಬಾರಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಬೆಲೆ ಏರಿಕೆಗಳಿಂದಾಗಿ ಈ ಬಾರಿ ಶಾಲಾ - ಕಾಲೇಜುಗಳ ಪಠ್ಯ ಪುಸ್ತಕ ಹಾಗೂ ವಾಹನಗಳ ಶುಲ್ಕ ಸಹ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವಿವಿಧ ಬೆಲೆ ಏರಿಕೆಯಿಂದಾಗಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಶಾಲಾ ಶುಲ್ಕವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+