ಬೆಳಗಾವಿಗೆ ಬೇಡ, ಕಲಬುರಗಿಗೆ ಕೆಎಟಿ ಪೀಠ ಕೊಡಿ

ಕಲಬುರಗಿ, ಜೂ. 29 : ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಪೀಠವನ್ನು ಕಲಬುರಗಿಯಲ್ಲಿ ಸ್ಥಾಪನೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕಲಬುರಗಿ ಜಿಲ್ಲೆಯ ಶಾಸಕರು ಮತ್ತು ಸಂಸದರ ನಿಯೋಗ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ನಿರ್ಧರಿಸಿದೆ.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಖಮರುಲ್ ಇಸ್ಲಾಂ ಈ ಕುರಿತು ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲಿಯೇ ಜನಪ್ರತಿನಿಧಿಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ಭೇಟಿ ಮಾಡಿ, ಕೆಎಟಿ ಪೀಠ ಸ್ಥಾಪನೆಗೆ ಮನವಿ ಮಾಡಲಾಗುತ್ತದೆ ಎಂದರು. [ಬೆಳಗಾವಿಯಲ್ಲೇ ಕೆಎಟಿ ಪೀಠ]

kalaburagi

ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಯಲ್ಲಿ ಕೆಎಟಿ ಪೀಠ ಸ್ಥಾಪನೆಗೆ ಅನುಮತಿ ನೀಡಲಾಗಿದೆ. ಕಲಬುರಗಿಯನ್ನು ಪರಿಗಣಿಸದಿರುವುದರಿಂದ ಜನರಿಗೆ ಮತ್ತು ವಕೀಲರಿಗೆ ನಿರಾಸೆಯಾಗಿದೆ. ಕೆಎಟಿ ಪೀಠವನ್ನು ಕಲಬುರಗಿಯಲ್ಲಿ ಸ್ಥಾಪನೆ ಮಾಡಲು ಮನವಿ ಸಲ್ಲಿಸಲಾಗುತ್ತದೆ ಎಂದು ಸಚಿವರು ಹೇಳಿದರು. [ಕೆಎಟಿ ಪೀಠಕ್ಕೆ ಆಗ್ರಹಿಸಿ ಸಿಎಂ ಪ್ರತಿಕೃತಿ ದಹನ]

ಬೆಳಗಾವಿಯಲ್ಲಿ ಪೀಠ ಸ್ಥಾಪನೆಗೆ ಒಪ್ಪಿಗೆ : ಬೆಳಗಾವಿಯಲ್ಲಿ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಹೆಚ್ಚುವರಿ ಪೀಠವನ್ನು ಸ್ಥಾಪಿಸಿ ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಗದಗ, ಹಾವೇರಿ, ಉತ್ತರಕನ್ನಡ ಹಾಗೂ ಕೊಪ್ಪಳ ಜಿಲ್ಲೆಗಳನ್ನು ಇದರ ವ್ಯಾಪ್ತಿಗೆ ಸೇರಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತ್ತು.

ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ಕಲಬುರಗಿ ಜಿಲ್ಲಾ ವಕೀಲರ ಸಂಘ ಶುಕ್ರವಾರ ಕೋರ್ಟ್ ಕಲಾಪವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿತ್ತು. ಈಗ ಸಚಿವರು ಮುಖ್ಯಮಂತ್ರಿಗಳ ಬಳಿ ನಿಯೋಗ ತಗೆದುಕೊಂಡು ಹೋಗಲು ನಿರ್ಧರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+