ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾರ್ಜ್ ತಲೆದಂಡಕ್ಕೆ ಒತ್ತಾಯಿಸಿ ಜುಲೈ 12ರಂದು ಧರಣಿ

|
Google Oneindia Kannada News

ಯಾದಗಿರಿ, ಜುಲೈ 11 : 'ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಜುಲೈ 12ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸೋಮವಾರ ಯಾದಗಿರಿಯ ಅತಿಥಿಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಯಡಿಯೂರಪ್ಪ ಅವರು, 'ಮಂಗಳವಾರ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮತ್ತು ಸದನದಲ್ಲಿ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ' ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದರು. [ಆತ್ಮಹತ್ಯೆ : ಸಚಿವ ಜಾರ್ಜ್‌ ಹೇಳುವುದೇನು?]

yeddyurappa

'ನನಗೆ ಮುಂದೆ ಏನಾದರೂ ಆದರೆ ಅದಕ್ಕೆ ಲೋಕಾಯುಕ್ತ ಐಜಿಪಿ ಪ್ರಣಬ್‌ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ' ಎಂದು ಹೇಳಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. [ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]

ಈ ಹೇಳಿಕೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಹಿಂದಿನ ಗೃಹ ಸಚಿವ ಮತ್ತು ಸದ್ಯ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಕೆ.ಜೆ.ಜಾರ್ಜ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದೆ. ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.[ಜಾರ್ಜ್ ರಾಜೀನಾಮೆಗೆ ಕಲಾಪದಲ್ಲಿ ಬಿಗಿಪಟ್ಟು]

ರಾಜೀನಾಮೆಗೆ ನಕಾರ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸಚಿವ ಕೆ.ಜೆ.ಜಾರ್ಜ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. 'ಪ್ರತಿಪಕ್ಷಗಳು ನಾನು ಅಧಿಕಾರ ಸ್ವೀಕರಿಸಿದ ದಿನದಿಂದ ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿವೆ. ಅವರು ಹೇಳಿದ ತಕ್ಷಣ ರಾಜೀನಾಮೆ ಕೊಡಲು ಆಗುವುದಿಲ್ಲ. ಮಾಡಿರುವ ಆರೋಪಗಳಿಗೆ ಸರಿಯಾದ ದಾಖಲೆಗಳನ್ನು ನೀಡಲಿ' ಎಂದು ಜಾರ್ಜ್ ಸವಾಲು ಹಾಕಿದ್ದಾರೆ.

English summary
Karnataka BJP president B.S.Yeddyurappa on July 11, 2016 said, BJP will begin a statewide protest demanding for Minister K.J. George resignation in connection with DySP M.K.Ganapathi suicide case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X